ಕನ್ನಡಪ್ರಭ ವಾರ್ತೆ ತರೀಕೆರೆ
ಪುರಸಭೆ ಸದಸ್ಯರು ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.ಮಂಗಳವಾರ ಪಟ್ಟಣದ ಪುರಸಭೆಗೆ ನೂತನವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ವಸಂತಕುಮಾರ್ ಹಾಗೂ ಗಿರಿಜಾ ಪ್ರಕಾಶ್ ವರ್ಮ ಅವರ ಅಭಿನಂಧನಾ ಸಮಾರಂಭದಲ್ಲಿ ಮಾತನಾಡಿದರು.ತರೀಕೆರೆ ಪುರಸಭೆಗೆ ಸರ್ಕಾರದಿಂದ 5 ಕೋಟಿ ರು. ಅನುದಾನವನ್ನು ತರಲಾಗಿದೆ. ಪಟ್ಟಣದ ಒಳಚರಂಡಿ ಯೋಜನೆಗೆ 34ಕೋಟಿ ನೀಡಲಾಗಿದೆ. ₹30 ಕೋಟಿಯಲ್ಲಿ ಪಟ್ಟಣದ ಬಿ.ಎಚ್.ರಸ್ತೆ ಅಭಿವೃದ್ದಿ ಪಡಿಸಲಾಗುವುದು.
₹40 ಲಕ್ಷ ವೆಚ್ಚದಲ್ಲಿ ಪಟ್ಟಣದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮತ್ತು ಪಟ್ಟಣದ ಬಸ್ ನಿಲ್ದಾಣಗಳ ಅಭಿವೃದ್ಧಿ, ಅಮೃತ್ ಯೋಜನೆಯಡಿ ರೈಲ್ವೆ ನಿಲ್ಣಾಣ ಅಭಿವೃದ್ಧಿ ಪಡಿಸಲಾಗುವುದು ಎಂದು ಅವರು ಹೇಳಿದರು.ಪುರಸಭಾ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ, ಈ ಬಾರಿ ಹೆಚ್ಚಿನ ಮಳೆ ಸುರಿದ ಪರಿಣಾಮ ಪಟ್ಟಣದಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದೆ. ನೂತನ ಪುರಸಭಾ ಅಧ್ಯಕ್ಷರಾದ ವಸಂತಕುಮಾರ್ ಅವರು ತಕ್ಷಣ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಪರಿಹಾರ ಒದಗಿಸಿಬೇಕು. ಅತಿವೃಷ್ಟಿಯಿಂದಾಗಿ ಪಟ್ಟಣದ ರಸ್ತೆಗಳು ಹಾಳಾಗಿದೆ, ಶಾಲೆಗಳು ಅಂಗನವಾಡಿ ಕೇಂದ್ರಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪುರಸಭಾ ಸದಸ್ಯ ಟಿ.ದಾದಾಪೀರ್ ಮಾತನಾಡಿ, ನೂತನ ಪುರಸಭಾ ಅಧ್ಯಕ್ಷರಾಗಿ ವಸಂತಕುಮಾರ್ ಮತ್ತು ಉಪಾಧ್ಯಕ್ಷರಾಗಿ ಗಿರಿಜಾ ಪ್ರಕಾಶ್ ವರ್ಮ ಅವರು ಅವಿರೋಧವಾಗಿ ಆಯ್ಕೆಯಾಗಿರುವುದು ಎಲ್ಲರಿಗೂ ಸಂತೋಷ ತಂದಿದೆ. ಆವಕಾಶವನ್ನು ಸದುಪಯೋಗಪಡಿಸಿಕೊಂಡು ತರೀಕೆರೆಗೆ ಹೆಚ್ಚಿನ ಅನುದಾನ ತರಲಿ ಎಂದು ಅವರು ಆಶಿಸಿದರು.ಪುರಸಭೆ ನೂತನ ಅದ್ಯಕ್ಷ ವಸಂತಕುಮಾರ್ ಮತ್ತು ನೂತನ ಉಪಾಧ್ಯಕ್ಷೆ ಗಿರಿಜಾ ಪ್ರಶಾಕ್ ವರ್ಮ ಮಾತನಾಡಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.
ಇದೇ ವೇಳೆ ಮಾಜಿ ಪುರಸಭಾಧ್ಯಕ್ಷ ಎಂ.ನರೇಂದ್ರ, ಪುರಸಭೆ ನಾಮ ನಿರ್ದೇಶಿತ ಸದಸ್ಯ ಟಿ.ಜಿ.ಮಂಜುನಾಥ್, ಪುರಸಭೆ ಸದಸ್ಯ ಟಿ.ಜಿ.ಶಶಾಂಕ, ಟಿ.ಜಿ.ಲೋಕೇಶ್, ಆಶಾ ಅರುಣ್ ಕುಮಾರ್, ಮಾಜಿ ಪುರಸಭಾಧ್ಯಕ್ಷ ಬೈಟು ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಯು.ಫಾರೂಕ್ ಮಾತನಾಡಿದರು.ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಪುರಸಭೆ ಸಿಬ್ದಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.