
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕೃತವಾದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ(ಎಂಎಸ್‍ಎಂಇ) ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವ ಸಂಬಂಧ ಜಿಲ್ಲಾ ಕೈಗಾರಿಕಾ ಅಭಿವೃದ್ಧಿಗೆ ಪಾಲುದಾರರಾದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ-ಸಂಸ್ಥೆಗಳಿಗೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುರೋಪ್‍ನ ಹಲವು ದೇಶಗಳು, ಚೀನಾ ಮತ್ತು ಜಪಾನ್ ರಾಷ್ಟ್ರಗಳು ಕೃಷಿ ಜೊತೆಗೆ ಸಣ್ಣ ಮತ್ತು ಬೃಹತ್ ಕೈಗಾರಿಕಾ ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡಿವೆ ಎಂದರು.ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಹನುಮಂತರಾಯ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಕ್ಕೆ ಹೆಚ್ಚಿನ ಹೊಡೆತ ಬಿದ್ದಿದ್ದು, ಇದನ್ನು ತಿಳಿದ ಸರ್ಕಾರವು ಸಣ್ಣ ಮತ್ತು ಮಧ್ಯಮ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವಲ್ಲಿ ನಿರ್ಧರಿಸಿದ್ದು, ಅದರಂತೆ ಸಾಲ ಸೌಲಭ್ಯ ಸೇರಿದಂತೆ ಹೆಚ್ಚಿನ ಪ್ರೋತ್ಸಾಹ ನೀಡಲು ಮುಂದಾಗಿದೆ, ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಬ್ಯಾಂಕ್‍ಗಳು ಸಕಾಲದಲ್ಲಿ ಕೃಷಿಕರಿಗೆ ಸಾಲ ಸೌಲಭ್ಯ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಂದಿನ ಹತ್ತು ವರ್ಷದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮ ಕ್ಷೇತ್ರಕ್ಕೆ ಉತ್ತಮ ಅವಕಾಶವಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಎಚ್.ಕೆ.ರವಿ , ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಿ.ದೇವೇಂದ್ರನ್ ಮಾತನಾಡಿದರು. ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಿ.ಎನ್.ರಘು, ನಂದ ಕಿಶೋರ್, ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು, ಇಲಾಖೆಯ ಅಧಿಕಾರಿಗಳು ಇತರರು ಇದ್ದರು.