ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ: ಸಂಜೀವರೆಡ್ಡಿ

KannadaprabhaNewsNetwork |  
Published : Mar 17, 2025, 12:36 AM IST
ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ  ನಡೆದ ಬಿಜೆಪಿ ಸಂಘಟನಾ ಸಭೆಯಲ್ಲಿ ಬೂತ್ ಮಟ್ಟದ ಅಧ್ಯಕ್ಷರನ್ನು ವಿಜಯನಗರ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಸೇರಿ ಪಕ್ಷದ ಪದಾಧಿಕಾರಿಗಳು ಸನ್ಮಾನಿಸಿದರು. ============ | Kannada Prabha

ಸಾರಾಂಶ

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು.

ಕೂಡ್ಲಿಗಿಯ ಗುಡೇಕೋಟೆಯಲ್ಲಿ ಬಿಜೆಪಿ ಮುಖಂಡರ ಸಭೆ

ಕನ್ನಡಪ್ರಭ ವಾರ್ತೆ ಕೂಡ್ಲಿಗಿ

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು ಎಂದು ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ತಿಳಿಸಿದರು.

ತಾಲೂಕಿನ ಗುಡೇಕೋಟೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಮುಖಂಡರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾತನಾಡಿದರು. ಬಿಜೆಪಿಯ ವರಿಷ್ಠರು ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಕಾರ್ಯಕರ್ತರನ್ನೂ ಗೌರವಿಸಲಿದ್ದಾರೆ. ಹೀಗಾಗಿ, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಹೆಚ್ಚಿನ ಆಸಕ್ತಿ ಹೊಂದಬೇಕು. ಮುಂಬರುವ ದಿನಗಳಲ್ಲಿ ಬಿಜೆಪಿಯ ಸಂಘಟನಾ ಶಕ್ತಿಯನ್ನು ವೃದ್ಧಿಸಲು ಶ್ರಮಿಸಬೇಕು ಎಂದು ತಿಳಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಬಣವಿಕಲ್ಲು ಕೆ.ನಾಗರಾಜ ಮಾತನಾಡಿ, ಬಿಜೆಪಿ ಸಂಘಟನೆಯಲ್ಲಿ ರಾಜ್ಯದಲ್ಲೇ ಕೂಡ್ಲಿಗಿ ಕ್ಷೇತ್ರವು ೧೯ನೇ ಸ್ಥಾನದಲ್ಲಿದೆ. ಇದು, ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರ ಸಮನ್ವಯತೆಯಿಂದ ಸಂಘಟನೆ ಮಾಡಿದ್ದಕ್ಕೆ ಸಾಕ್ಷಿಯಾಗಿದೆ. ತಾಲೂಕಿನ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದಂತೆ ಕಾಪಾಡಿಕೊಂಡು ಹೋಗಲಾಗುವುದು. ಆ ರೀತಿ ಏನಾದರೂ ಆದರೆ, ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಮೂಲಕ ಬಗೆಹರಿಸಿಕೊಂಡು ಮುಂಬರುವ ಜಿಲ್ಲಾ, ತಾಪಂ ಹಾಗೂ 2028 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಾವುಟ ಹಾರಿಸಲು ಎಲ್ಲರೂ ಶ್ರಮಿಸೋಣ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಗುಡೇಕೋಟೆ ಶಿವಪ್ರಸಾದ ಗೌಡ ಮಾತನಾಡಿದರು. ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಿಜೆಪಿ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ರಾಮದುರ್ಗ ಸೂರ್ಯಪಾಪಣ್ಣ, ನಿಕಟಪೂರ್ವ ಮಂಡಲ ಅಧ್ಯಕ್ಷ ಕೆ.ಚನ್ನಪ್ಪ, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಯಜಮಾನಪ್ಪ, ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿ.ಜಿ. ಹನುಮಂತಪ್ಪ, ಮಂಡಲ ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ ನಾಯಕ, ಮಹಿಳಾ ಮೋರ್ಚಾ ಅಧ್ಯಕ್ಷೆ ಕುಂಬಾರ ಶಾರದಮ್ಮ, ಮಂಡಲ ಕಾರ್ಯದರ್ಶಿ ಎಲ್.ಪವಿತ್ರಾ, ಮುಖಂಡರಾದ ಗುಡೇಕೋಟೆ ಶಿವಪ್ರಸಾದ ಗೌಡ (ರಾಜಣ್ಣ), ಪ್ರಾಣೇಶ್ ರಾವ್, ನಾಗೇಂದ್ರಪ್ಪ, ಮನೋಹರ ಹೆಗಡೆ, ಮುತ್ತೆಪಾಲಯ್ಯ, ಕುಬೇರ, ಸಿದ್ದೇಶ್, ಬಸವರಾಜ, ಮಹೇಶ್, ಶಿವರಾಜ, ವೆಂಕಟೇಶ್ ನಾಯ್ಕ, ಕೆ.ಕೆ. ಹಟ್ಟಿ, ಜಿ.ರಾಜು ಸೇರಿ ಇತರರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ