ಕ್ರೀಡೆಗೂ ಹೆಚ್ಚಿನ ಮಹತ್ವ ನೀಡಿ: ಶಾಸಕ ಡಾ. ಎಂ. ಚಂದ್ರಪ್ಪ

KannadaprabhaNewsNetwork |  
Published : Sep 08, 2026, 01:30 AM IST
ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ ಜ್ಯೋತಿಯನ್ನು ಶಾಸಕ ಡಾ.ಎಂ.ಚಂದ್ರಪ್ಪ ಸ್ವೀಕರಿಸಿದರು. | Kannada Prabha

ಸಾರಾಂಶ

Give more importance to sports: MLA Dr. M. Chandrappa

-ತಾಲೂಕು ಹೋಬಳಿ ಮಟ್ಟದ ಪ್ರಾಥಮಿಕ, ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟನೆ

--

ಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಶಾಲಾ ಮಕ್ಕಳು ನಿತ್ಯವೂ ಕೊನೆಪಕ್ಷ ಒಂದೆರಡು ಗಂಟೆಗಳ ಕಾಲ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವಂತೆ ಶಿಕ್ಷಕರು ಗಮನ ನೀಡಬೇಕು ಎಂದು ಶಾಸಕ ಡಾ. ಎಂ. ಚಂದ್ರಪ್ಪ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ, ವಾಗ್ದಾವಿ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್, ಎಂ.ಜಿ.ಬೋರಯ್ಯನಾಯಕ ಪ್ರೌಢಶಾಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಹೊಳಲ್ಕೆರೆ ತಾಲೂಕು ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಬಹಳ ಮುಖ್ಯ. ಈ ಕ್ರೀಡಾಂಗಣಕ್ಕೆ ಹತ್ತು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದೇನೆ. ಒಳಾಂಗಣ ಕ್ರೀಡಾಂಗಣಕ್ಕೆ ಆರು ಕೋಟಿ ಖರ್ಚಾಗಿದೆ. ಈಜುಕೊಳದ ಕೆಲಸ ನಡೆಯುತ್ತಿದೆ. ಅಂತರಾಷ್ಟ್ರೀಯ ಮಟ್ಟದ ಸ್ಟೇಡಿಯಂ ರೀತಿಯಲ್ಲಿ ಕಾಣುವಂತೆ ಇನ್ನು ಹದಿನೆಂಟುವರೆ ಕೋಟಿ ರು. ಮಂಜೂರು ಮಾಡಿದ್ದೇನೆಂದು ತಿಳಿಸಿದರು.

ಸರ್ಕಾರದ ಯೋಜನೆ ಅಂತ ಭಾವಿಸಿ ಕ್ರೀಡೆಯನ್ನು ಕಾಟಚಾರಕ್ಕೆ ನಡೆಸಬೇಡಿ. ಮಕ್ಕಳಿಗೆ ಯಾವ ಕ್ರೀಡೆಯಲ್ಲಿ ಆಸಕ್ತಿಯಿದೆ ಎನ್ನುವುದನ್ನು ಗಮನಿಸಿ ಅದಕ್ಕೆ ತಕ್ಕಂತೆ ತರಬೇತಿ ಕೊಟ್ಟು ಶಿಕ್ಷಣದಷ್ಟೆ ಕ್ರೀಡೆಗೂ ಒತ್ತು ನೀಡಿ ಮಕ್ಕಳನ್ನು ತಯಾರು ಮಾಡಿದಾಗ, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ನೆರವಾಗಲಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಫೋಟೋ

ಹೋಬಳಿ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ ಜ್ಯೋತಿಯನ್ನು ಶಾಸಕ ಡಾ.ಎಂ.ಚಂದ್ರಪ್ಪ ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಕ್ತದಾನದಿಂದ ಸಂಕಷ್ಟದಲ್ಲಿರುವ ರೋಗಿಯ ಜೀವ ಉಳಿಸಲು ಸಾಧ್ಯ: ಬಸವಪ್ರಭು
ಆನೆಕೊಂಡದ ಶ್ರೀ ಮರಡಿ ಬಸವೇಶ್ವರ ಕಾರ್ಣಿಕೋತ್ಸವ