ವಿಶೇಷ ಚೇತನ ಮಕ್ಕಳಿಗೆ ಅವಕಾಶ ನೀಡಿ: ವೇಣುಗೋಪಾಲ್

KannadaprabhaNewsNetwork |  
Published : Dec 05, 2025, 12:45 AM IST
 ನರಸಿಂಹರಾಜಪುರ ಪಟ್ಟಣದ ಬಸ್ತಿಮಠ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಚೇತನ ಮಕ್ಕಳ ತಾಯಂದಿರಿಗೆ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ನರಸಿಂಹರಾಜಪುರವಿಶೇಷ ಚೇತನ ಮಕ್ಕಳಿಗೆ ಅನುಕಂಪಕ್ಕಿಂತ ಹೆಚ್ಚು ಅವಕಾಶ ನೀಡಬೇಕು ಎಂದು ಉಪ ತಹಸೀಲ್ದಾರ್ ವೇಣುಗೋಪಾಲ್ ಸಲಹೆ ನೀಡಿದರು.

- ಬಸ್ತಿಮಠದ ಸರ್ಕಾರಿ ಶಾಲೆಯಲ್ಲಿ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ

ಕನ್ನಡಪ್ರಬ ವಾರ್ತೆ, ನರಸಿಂಹರಾಜಪುರ

ವಿಶೇಷ ಚೇತನ ಮಕ್ಕಳಿಗೆ ಅನುಕಂಪಕ್ಕಿಂತ ಹೆಚ್ಚು ಅವಕಾಶ ನೀಡಬೇಕು ಎಂದು ಉಪ ತಹಸೀಲ್ದಾರ್ ವೇಣುಗೋಪಾಲ್ ಸಲಹೆ ನೀಡಿದರು.

ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಿಶ್ವ ವಿಶೇಷ ಚೇತನ ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ತಾಲೂಕು ಬಡ್ತಿ ಮುಖ್ಯೋ ಪಾಧ್ಯಾಯರ ಸಂಘದ ಅಧ್ಯಕ್ಷ ಎ.ಇ.ಅಶೋಕ್ ಮಾತನಾಡಿ, ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಸಾಮಾರ್ಥ್ಯ ಇರುತ್ತದೆ. ಆ ಮಕ್ಕಳಿಗೆ ಎಲ್ಲಾ ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕು. ಅವರ ಭಾವನೆ ಅರ್ಥ ಮಾಡಿಕೊಂಡು ಶಿಕ್ಷಣ ನೀಡಬೇಕು ಎಂದು ಕರೆ ನೀಡಿದರು.

ಸಭೆ ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸೇವಾನಾಯ್ಕ್ ಮಾತನಾಡಿ, ಶಿಕ್ಷಣ ಇಲಾಖೆ ವಿಶೇಷ ಚೇತನ ಮಕ್ಕಳಿಗೆ ಅನೇಕ ಸೌಲಭ್ಯ ನೀಡುತ್ತಿದ್ದು ಪೋಷಕರು, ಮಕ್ಕಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ನೋಡಲ್ ಅಧಿಕಾರಿ ತಿಮ್ಮೇಶ್ ಮಾತನಾಡಿ, ಇದೇ ತಿಂಗಳ 10 ರಂದು ತಾಲೂಕು ಮಟ್ಟದ ವಿಶೇಷ ಚೇತನ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ನಡೆಯಲಿದೆ. ಎಲ್ಲಾ ಮಕ್ಕಳು ಪೋಷಕರೊಂದಿಗೆ ಆಗಮಿಸುವಂತೆ ತಿಳಿಸಿದರು. ಸಿಆರ್.ಪಿ ದೇವರಾಜ್ ಮಾತನಾಡಿ, ವಿಶೇಷ ಚೇತನ ಮಕ್ಕಳಿಗೆ ವಿಶೇಷ ಶ್ರವಣ ಶಕ್ತಿ ಗುರುತಿಸುವ ಕೌಶಲ್ಯ, ಜ್ಞಾನ ಇರುತ್ತದೆ. ಹೇಳಿದ ಎಲ್ಲಾ ಕೆಲಸವನ್ನು ಅದ್ಭುತವಾಗಿ ಮಾಡುವ ಸಾಮಾರ್ಥ್ಯವಿರುತ್ತದೆ. ಅವರನ್ನು ಪ್ರೀತಿಯಿಂದ ಕಂಡು ಶಿಕ್ಷಣ ನೀಡಿದರೆ ಉತ್ತಮ ಸಮಾಜ ನಿರ್ಮಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ವಿಕಲಚೇತನ ಮಕ್ಕಳ ತಾಯಂದಿರನ್ನು ಸನ್ಮಾನಿಸಲಾಯಿತು. ಮಕ್ಕಳು ಹಾಗೂ ಪೋಷಕರಿಗೆ ವಿವಿಧ ಕ್ರೀಡೆ ಆಯೋಜಸಿಇ ಗೆದ್ದವರಿಗೆ ಬಹುಮಾನ ನೀಡಲಾಯಿತು. ಶಿಕ್ಷಣ ಸಂಯೋಜಕ ರಂಗಪ್ಪ, ಸಿ.ಆರ್.ಪಿ ಅನಂತಪ್ಪ, ಅನಿಲ್, ಬಸ್ತಿಮಠ ಶಾಲೆ ಮುಖ್ಯ ಶಿಕ್ಷಕಿ ನೇತ್ರಾವತಿ, ಮಮತಾ, ಶಾಲಿನಿ, ಸುಲೋಚನಾ, ಸಹ ಶಿಕ್ಷಕಿ ಡೈಸಿ, ತಿಮ್ಮೇಶ್, ದೇವರಾಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡೆಲ್ಲಿಯಲ್ಲಿ ಬಿಜೆಪಿ ರೆಬಲ್ಸ್‌ ಟೀಂ:ಬಿಎಲ್‌ಎಸ್‌ ಜತೆ ರಮೇಶ ಚರ್ಚೆ
ಮಳೆ, ಚಳಿ ಪರಿಣಾಮ: ಸೊಪ್ಪು, ತರಕಾರಿ ಬೆಲೆ ಏರಿಕೆ