ರೇಣುಕಾಚಾರ್ಯರ ದೇಗುಲಕ್ಕೆ ಸ್ಥಳ ಕೊಡಿ

KannadaprabhaNewsNetwork |  
Published : Jul 04, 2025, 11:46 PM IST
ಫೋಟೋ: 4 ಹೆಚ್‌ಎಸ್‌ಕೆ 2ಹೊಸಕೋಟೆಯಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮ ಜಾಗೃತಿ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ನಗರದ ಹೃದಯಭಾಗದಲ್ಲಿ ಶ್ರೀ ರೇಣುಕಾಚಾರ್ಯರ ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಜಾಗ ಮಂಜೂರು ಮಾಡಿಸಿಕೊಡಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ತಿಳಿಸಿದರು.

ಹೊಸಕೋಟೆ: ನಗರದ ಹೃದಯಭಾಗದಲ್ಲಿ ಶ್ರೀ ರೇಣುಕಾಚಾರ್ಯರ ದೇವಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಜಾಗ ಮಂಜೂರು ಮಾಡಿಸಿಕೊಡಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ತಿಳಿಸಿದರು.

ಶ್ರೀ ಜಗದ್ಗುರು ರೇಣುಕಾಚಾರ್ಯರ 10ನೇ ಜಯಂತ್ಯುತ್ಸವದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಸುಖ ಶಾಂತಿ ಬಯಸುವ ಮನುಷ್ಯ ಜೀವನದಲ್ಲಿ ಕೆಲವು ಆದರ್ಶ ಮೌಲ್ಯಗಳನ್ನು ಬೆಳೆಸಿಕೊಂಡು ಬದುಕಬೇಕು. ಮನುಷ್ಯ ಜೀವನದಲ್ಲಿ ಹಣಗಳಿಕೆಯಷ್ಟೇ ಮುಖ್ಯವಲ್ಲ. ಅದರೊಂದಿಗೆ ಒಂದಿಷ್ಟಾದರೂ ಶಿವಜ್ಞಾನ ಮತ್ತು ಗುರುಗಳ ಮಾರ್ಗದರ್ಶನ ಪಡೆಯಲು ಶ್ರಮಿಸಬೇಕು. ಶ್ರೀ ಜಗದ್ಗುರು ರೇಣುಕಾಚಾರ್ಯರ ಜೀವನ ಮೌಲ್ಯದ ಸತ್ಯ ಚಿಂತನೆಗಳು ಬದುಕಿ ಬಾಳುವ ಜನಸಮುದಾಯಕ್ಕೆ ಬೆಳಕು ತೋರುತ್ತವೆ. ಅವರು ಬೋಧಿಸಿದ ವಿಚಾರ ಧಾರೆಗಳು ಸರ್ವ ಕಾಲಕ್ಕೂ ಸರ್ವರಿಗೂ ಅನ್ವಯಿಸುತ್ತವೆ ಎಂದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವೀರಶೈವ ಲಿಂಗಾಯತ ಮಠಗಳ ಪರಂಪರೆಯಿಂದ ಇಂದು ಜಾತಿಬೇದವಿಲ್ಲದೆ ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹ ನಡೆಯುತ್ತಿದೆ. ಈ ಕಾರ್ಯ ಕೇವಲ ಮಠಗಳಿಂದ ಮಾತ್ರ ಸಾಧ್ಯ. ದಾಸೋಹ ಶುರು ಮಾಡಿದ್ದೇ ಮಠಗಳು, ಧರ್ಮ, ಜಾತಿ ಲಿಂಗಭೇದವಿಲ್ಲದೆ ಎಲ್ಲರನ್ನೂ ಸಮಾನವಾಗಿ ನೋಡುವ ಧರ್ಮ ಎಂದರೆ ಅದು ವೀರಶೈವ ಲಿಂಗಾಯತ ಧರ್ಮ ಎಂದರು.

ನಾಗಲಾಪುರ ವೀರಸಿಂಹಾಸನ ಮಠದ ಶ್ರೀ ತೇಜೇಶಲಿಂಗ ಶಿವಾಚರ‍್ಯ ಸ್ವಾಮೀಜಿ, ಬಾಳೆಹೊನ್ನೂರು ಶಾಖಾ ಮಠದ ಶ್ರೀ ರೇಣುಕಾಚಾರ್ಯ ಸ್ವಾಮೀಜಿ, ರಾಜಾಪುರ ಸಂಸ್ಥಾನ ಮಠದ ಶ್ರೀ ಡಾ ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಮಠದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಗುಮ್ಮಳಾಪುರ ಸಂಸ್ಥಾನ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.

ಫೋಟೋ: 4 ಹೆಚ್‌ಎಸ್‌ಕೆ 2

ಹೊಸಕೋಟೆಯಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಸಂಧರ್ಭದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮ ಜಾಗೃತಿ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ