ಕನ್ನಡಪ್ರಭ ವಾರ್ತೆ ಬೆಳಗಾವಿ
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳ ಮೇಲ್ವಿಚಾರಣೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್‌ಗಳನ್ನು ನಿಯೋಜಿಸಬೇಕು. ಗ್ರಾಪಂ ಕಾರ್ಯಾಲಯದ ನಾಮಫಲಕ ಅಥವಾ ಗೋಡೆಯ ಮೇಲೆ ಸಂಬಂಧಪಟ್ಟ ಇಂಜಿನಿಯರ್‌ಗಳ ಮೊಬೈಲ್ ಸಂಖ್ಯೆಯನ್ನು ಬರೆಸಬೇಕು ಎಂದು ನಿರ್ದೇಶನ ನೀಡಿದರು.
ಕುಡಿಯುವ ನೀರು ಹಾಗೂ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ದೂರುಗಳು ಬಂದರೆ ಸಂಬಂಧಪಟ್ಟ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಹೀಗಾಗಿ, ಇಂಜಿನಿಯರ್‌ಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಕೂಡಲೇ ಸ್ಪಂದಿಸಬೇಕು. ಸಂಬಂಧಪಟ್ಟ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.ನೀರಿನ ಮಾದರಿ ಪರೀಕ್ಷೆ ನಡೆಸಿ:
ಗ್ರಾಮ ಪಂಚಾಯತಿಗಳಿಗೆ ಆರ್‌ಒ ಪ್ಲ್ಯಾಂಟ್‌ಗಳ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದಾದರು ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾದರೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬೇಕು. ಅಗತ್ಯಬಿದ್ದರೆ ಮಾತ್ರ ಬೋರವೆಲ್‌ಗಳನ್ನು ಕೊರೆಸಲು ಕ್ರಮ ವಹಿಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಡ್ಯಾಮ್‌ಗಳಲ್ಲಿ ನೀರಿನ ಮಟ್ಟ ಎಷ್ಟಿದೆ ಎಂಬುದರ ಕುರಿತು ಪ್ರತಿದಿನ ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.
ಸಮರ್ಪಕ ಕಸ ವಿಲೇವಾರಿ ಮಾಡಿ:
ಸಭೆಯಲ್ಲಿ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್, ಜಿಪಂ ಉಪಕಾರ್ಯದರ್ಶಿ (ಆಡಳಿತ) ಬಸವರಾಜ ಹೆಗ್ಗನಾಯಕ್, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಟರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಳಗಾವಿ ವಿಭಾಗದ ಕಾರ್ಯಪಾಲಕ ಅಭಿಯಂತರ ಕಿರಣ ಘೋರ್ಪಡೆ, ಚಿಕ್ಕೋಡಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪಾಂಡುರಂಗರಾವ್, ಎಲ್ಲ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸಿಬ್ಬಂದಿ ಹಾಜರಿದ್ದರು.