ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ

KannadaprabhaNewsNetwork |  
Published : Aug 12, 2024, 01:14 AM IST
ಫೋಟೋ: 11 ಹೆಚ್‌ಎಸ್‌ಕೆ 3ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ೩.೫ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದರು.

ಹೊಸಕೋಟೆ: ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಎಚ್ಚರಿಕೆ ನೀಡಿದರು.

ತಾಲೂಕಿನ ಕೊಳತೂರು ಗ್ರಾಮದಲ್ಲಿ ಕೋಲಾರ ರಸ್ತೆಯಿಂದ ಹರಳೂರು ಗ್ರಾಮದವರೆಗೆ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಹೊಸಕೋಟೆಯ ಕೋಲಾರ ರಸ್ತೆಯಿಂದ ಎಂವಿಜೆ ಆಸ್ಪತ್ರೆ ಮುಂಭಾಗದವರೆಗೂ, ಕೊಳತೂರು ಗ್ರಾಮದಿಂದ ಹರಳೂರು ಗ್ರಾಮದವರೆಗೆ ಶಾಸಕರ ಅನುದಾನದಲ್ಲಿ ಹಾಗೂ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 3.5ಕೋಟಿ ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ ಮಾಡಲಾಗುತ್ತಿದೆ. ಕಾಮಗಾರಿ ಗುಣಮಟ್ಟ ಕಾಪಾಡಬೇಕು ಎಂದು ಹೇಳಿದರು.

ತಾಲೂಕಿನ ಸಮಗ್ರ ಅಭಿವೃದ್ಧಿಯಿಂದ ಶಾಸಕರ ಅನುದಾನದ ಜೊತೆಗೆ ವಿಶೇಷ ಅನುದಾನಗಳನ್ನು ತಂದು ತಾಲೂಕಿನ ಸಮಗ್ರ ಆಭಿವೃದ್ಧಿ ಮಾಡಲಾಗುತ್ತಿದೆ. ಆದ್ದರಿಂದ ಗ್ರಾಮಸ್ಥರು ಅಭಿವೃದ್ಧಿ ಕಾರ್ಯಗಳನ್ನು ಕೇಳಿ ಪಡೆಯಬೇಕು. ಪ್ರಮುಖವಾಗಿ ಹೊಸಕೋಟೆಯಿಂದ ಹರಳೂರು ಗ್ರಾಮದವರೆಗೆ ರಸ್ತೆಗಳಲ್ಲಿ ಸಾಕಷ್ಟು ಗುಂಡಿಗಳು ಬಿದ್ದಿದ್ದು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಆದ್ದರಿಂದ 3.5 ಕೋಟಿ ಅನುದಾನ ಒದಗಿಸಿ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಈ ವೇಳೆ ಎಸ್‌ಎಫ್‌ಸಿಎಸ್ ಅಧ್ಯಕ್ಷ ಅಗ್ರಹಾರ ಕೃಷ್ಣಮೂರ್ತಿ, ಬಿಎಂಆರ್‌ಡಿಎ ಅಧ್ಯಕ್ಷ ಕೇಶವಮೂರ್ತಿ, ಬಮುಲ್ ನಿರ್ದೇಶಕ ಎಲ್‌ಎನ್‌ಟಿ ಮಂಜುನಾಥ್, ಯುವ ಮುಖಂಡರಾದ ಬಿ.ವಿ.ಭೈರೇಗೌಡ, ಕೊಳತೂರು ಹನುಮಂತೇಗೌಡ, ಉಪ್ಪಾರಹಳ್ಳಿ ಸಿ.ಮುನಿಯಪ್ಪ ಇತರರು ಹಾಜರಿದ್ದರು.

ಫೋಟೋ: 11 ಹೆಚ್‌ಎಸ್‌ಕೆ 3

ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಶಾಸಕ ಶರತ್ ಬಚ್ಚೇಗೌಡ ಭೂಮಿಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ