ಅಕ್ಷರಾಭ್ಯಾಸದ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ

KannadaprabhaNewsNetwork |  
Published : Sep 06, 2026, 03:15 AM IST
ಐಗಳಿ | Kannada Prabha

ಸಾರಾಂಶ

ವಿದ್ಯಾರ್ಥಿಗಳಲ್ಲಿರುವ ಶಕ್ತಿ ಹಾಗೂ ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಕ್ಷರಾಭ್ಯಾಸದ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಶಾರೀರಿಕ ಹಾಗೂ ಮಾನಸಿಕ ಸಂಪತ್ತು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕರ ಪ್ರಾಥಮಿಕ ಸಂಘದ ನಿರ್ದೇಶಕ ವಿಶ್ವನಾಥ ಕಂಬಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಐಗಳಿ

ವಿದ್ಯಾರ್ಥಿಗಳಲ್ಲಿರುವ ಶಕ್ತಿ ಹಾಗೂ ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಅಕ್ಷರಾಭ್ಯಾಸದ ಜತೆಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಶಾರೀರಿಕ ಹಾಗೂ ಮಾನಸಿಕ ಸಂಪತ್ತು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕರ ಪ್ರಾಥಮಿಕ ಸಂಘದ ನಿರ್ದೇಶಕ ವಿಶ್ವನಾಥ ಕಂಬಾಗಿ ಹೇಳಿದರು.

ಐಗಳಿ ಕ್ಲಸ್ಟರ್‌ ಮಟ್ಟದ ಕ್ರೀಡಾಕೂಟಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಆಟದಲ್ಲಿ ಭಾಗಿಯಾಗಿ ತಮ್ಮಲ್ಲಿರುವ ಪ್ರತಿಭೆ ಗುರುತಿಸಿಲು ಸಾಧ್ಯ. ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ ಕ್ರೀಡಾಕೂಟದಲ್ಲಿ ಭಾಗಿಯಾಗಿ ಸ್ಪರ್ಧಾಮನೋಭಾವ ಹೆಚ್ಚಿಸಿ ಕೊಳ್ಳಿರಿ ಎಂದರು.ಸಿಆರ್‌ಪಿ ಎಸ್.ಜಿ.ಭಜಂತ್ರಿ ಮಾತನಾಡಿ, ಐಗಳಿ ಶಾಲೆಯ ವ್ಯಾಪ್ತಿಯಲ್ಲಿ ೧೮ ಶಾಲೆಯ ವಿಧ್ಯಾರ್ಥಿಗಳು ಭಾಗಿಯಾಗಿದ್ದಾರೆ. ಇವರಲ್ಲಿ ಗೆದ್ದವರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗಿಯಾಗುತ್ತಾರೆ. ಗೆದ್ದವರಿಗೆ ಡಾಲ್, ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಲಾಗುವುದು. ಯಾವುದೇ ಸ್ಪರ್ಧೆಯಲ್ಲಿ ನಿರ್ಣಯಕರು ಪಾರದರ್ಶಕವಾಗಿ ನಿರ್ಣಯ ಮಾಡಿ ಎಂದು ಸಲಹೆ ನೀಡಿದರು.ಗ್ರಾಮ ಪಂಚಾಯತಿ ಮಾಜಿ ಸದ್ಯಸ ಬಿ.ಎಸ್.ಬಿರಾದರ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವವಿದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಶಿಸ್ತು, ಸಮಯಪಾಲನೆ, ಆತ್ಮವಿಶ್ವಾಸ, ನಾಯಕತ್ವದ ಗುಣ ಹಾಗೂ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಯುತ್ತದೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದರು.ಹಿರಿಯ ಪತ್ರಕರ್ತ ಮಲಗೌಡ ಪಾಟೀಲ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕ್ರೀಡಾ ಧ್ವಜಾರೋಹಣವನ್ನು ಬಿ.ಎಸ್.ಬಿರಾದರ ನೆರವೇರಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಭೀಮಪ್ಪ ಚಿಪ್ಪಾಡಿ ಅಧ್ಯಕ್ಷತೆ ವಹಿಸಿದರು. ಸೇವಾ ನಿವೃತ್ತಿ ಹೊಂದಿದ ಮುಖ್ಯಶಿಕ್ಷಕ ಎಸ್‌.ಎಂ.ಜನಗೌಡ, ದೀಲಿಪ ಡಂಬಳಕರ, ವಿ.ಟಿ.ದೂಡ್ಡಮನಿ, ಅಪ್ಪಾಸಾಬ ತೆಲಸಂಗ ಹಾಗೂ ಭಜಂತ್ರಿ ಶಿಕ್ಷಕರನ್ನು ಶಾಲೆ ಮುಖ್ಯ ಶಿಕ್ಷಕ ಎಂ.ಆರ್‌.ಕಟೀಲ ಹಾಗೂ ಸಿಆರ್‌ಪಿ ಜಿ.ಎಸ್.ಭಜಂತ್ರಿಯವರು ಸನ್ಮಾನಿಸಿದರು.ಶಾಲೆಯಲ್ಲಿ ನಡೆದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಬ್ಬಿರ್‌ ತೊದಲಬಾಗಿ, ಅಪ್ಪಸಾಬ ಬಿರಾದರ, ಪತ್ರಕರ್ತರ ಜಿಲ್ಲಾ ಸಂಘದ ನಿರ್ದೇಶಕ ಬಸವರಾಜ ಚಮಕೇರಿ, ಮಹೇಶ ಮುದಗೌಡರ, ಆಕಾಶ ಮಾದರ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಎಲ್ಲ ಶಾಲೆಯ ದೈಹಿಕ ಶಿಕ್ಷಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಕಮರಿ ಶಿಕ್ಷಕರ ಮಹಾಂತೇಶ ಮಠಪತಿ ಸ್ವಾಗತಿಸಿದರು. ಶಿಕ್ಷಕ ಎಂ.ಐ.ನಧಾಪ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಣ್ಣನ ಸಾವಿನ ನಂತ್ರ ತಂಗಿ ಸಾವು!
ಕೃಷ್ಣಾ ಮಡಿಲಲ್ಲಿ ಭಕ್ತಿ ಬೆಳಕು; ವೈಭವದ ಕೃಷ್ಣಾರತಿ