ಭಗೀರಥ ಜನಾಂಗದ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ

KannadaprabhaNewsNetwork |  
Published : May 15, 2024, 01:37 AM IST
ದೊಡ್ಡಬಳ್ಳಾಪುರ ತಾಲೂಕು ಕಛೇರಿ ಸಭಾಂಗಣದಲ್ಲಿ ಭಗೀರಥ ಮಹರ್ಷಿ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಭಗೀರಥ ಜಯಂತ್ಯುತ್ಸವವನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.

ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಭಗೀರಥ ಜಯಂತ್ಯುತ್ಸವವನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಚಂದ್ರಶೇಖರ್ ಡಿ.ಉಪ್ಪಾರ್ ಮಾತನಾಡಿ, ಭಗೀರಥ ಮಹರ್ಷಿ ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮ. ಅಂತಹ ಮಹನೀಯರ ಸಮುದಾಯದಲ್ಲಿ ಜನಿಸಿದ ನಮಗೆ ಅತ್ಯಂತ ಹೆಮ್ಮೆ ಇದೆ. ಭೂಮಿಯ ಮೇಲಿನ ಕೋಟ್ಯಂತರ ಜೀವರಾಶಿಗಳಿಗೆ ಜೀವಜಲ ತಂದುಕೊಟ್ಟ ಮಹರ್ಷಿ ಶ್ರೀ ಭಗೀರಥರ ಜಯಂತ್ಯುತ್ಸವನ್ನು ರಾಜ್ಯಾದ್ಯಂತ ಆಚರಿಸುವ ಸಂಕಲ್ಪವನ್ನು ಸರ್ಕಾರ ಮಾಡಿರುವುದು ಗಣನೀಯ ಎಂದರು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮಾತನಾಡಿ, ರಾಜ್ಯದ ಹಲವೆಡೆ ನೆಲೆಸಿರುವ ಉಪ್ಪಾರ ಸಮುದಾಯ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಬೇಕಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪೋಷಕರು ಸಂಕಲ್ಪ ಮಾಡಬೇಕು. ಸಮಾಜದ ಉನ್ನತ ಸ್ತರದ ಹುದ್ದೆಗಳಲ್ಲಿ ಸಮುದಾಯದ ವಿದ್ಯಾವಂತ ಸಮುದಾಯ ಹೆಚ್ಚಿನ ಅವಕಾಶ ಪಡೆಯುವ ಚಿಂತನೆ ನಡೆಸಬೇಕು ಎಂದರು.

ಬೆಂ‌.ಗ್ರಾ. ಜಿಲ್ಲಾ ಭಗೀರಥ ಉಪ್ಪಾರ ಸಂಘದ ಯುವ ಘಟಕ ಅಧ್ಯಕ್ಷ ಕೆ.ಪ್ರಕಾಶ್, ತಾಲೂಕು ಅಧ್ಯಕ್ಷ ಪಿ.ಎಂ.ಪ್ರಕಾಶ್ ಕುಮಾರ್, ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ್, ಶ್ರೀನಿವಾಸ ಬಾಬು, ಚಂದ್ರಶೇಖರ್, ಕೃಷ್ಣ ಮೂರ್ತಿ, ರಾಮರಾಜ್, ಗ್ರಾಪಂ ಸದಸ್ಯರಾದ ಉಮೇಶ್, ಸುರೇಶ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.14ಕೆಡಿಬಿಪಿ5-

ದೊಡ್ಡಬಳ್ಳಾಪುರ ತಾಲೂಕು ಕಛೇರಿ ಸಭಾಂಗಣದಲ್ಲಿ ಭಗೀರಥ ಮಹರ್ಷಿ ಜಯಂತ್ಯುತ್ಸವವನ್ನು ಸರಳವಾಗಿ ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳದಿ ಮಾರ್ಗ: 9 ಮೆಟ್ರೋ ನಿಲ್ದಾಣ ಬಳಿ ಹೊಸ ಬಿಎಂಟಿಸಿ ನಿಲ್ದಾಣ
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌