ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತಗೊಳಿಸಲು ಈ ಹಿಂದೆ ಎಷ್ಟೇ ಬಾರಿ ಮಕ್ಕಳಿಗೆ ಲಸಿಕೆ ಹಾಕಿಸಿದರೂ ಇಂದು ಕೂಡ ಲಸಿಕೆ ಹಾಕಿಸಬೇಕು ಎಂದರು.
ತಾಲೂಕಿನ ಎಲ್ಲಾ ತಮ್ಮ ಗ್ರಾಮಗಳ ಲಸಿಕಾ ಕೇಂದ್ರಗಳ ಬಳಿ ತೆರಳಿ ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಭಾರತ ಪೋಲಿಯೋ ಮುಕ್ತ ದೇಶವಾಗಿಸಲು ಪೋಷಕರ ಜವಾಬ್ದಾರಿಯಾಗಿದೆ ಎಂದರು.ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಶ್ರೀಧರ್ ಮಾತನಾಡಿ, ತಾಲೂಕಿನಲ್ಲಿ 69 ಕೇಂದ್ರಗಳನ್ನು ತೆರೆದು 11,500 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ 11, 213 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಉಳಿದವುಗಳನ್ನು ಇನ್ನೆರಡು ದಿನದಲ್ಲಿ ಪೂರ್ಣಗೊಳಿಸಲಾಗುತ್ತದೆ. ವಲಸೆ ಜನಾಂಗದ ಮಕ್ಕಳಿಗೂ ಕೂಡ ಲಸಿಕೆ ಹಾಕಿಸುವ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಲ್ಸ್ ಪೋಲೀಯೊ ಹಾಕಿಸಿ ಅಂಗವಿಕಲತೆ ತೊಲಗಿಸಿ: ಕೆ.ಎಂ.ನಂದೀಶ್
ಹಲಗೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ, ಬೆಳಗ್ಗೆಯಿಂದ ಸಂಜೆವರೆಗೆ 850ಕ್ಕೂ ಹೆಚ್ಚು ಮಕ್ಕಳಿಗೆ ಹಾಕಲಾಗಿದೆ. ಸೋಮವಾರ ಮತ್ತು ಮಂಗಳವಾರ ಮನೆಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ ಎಂದರು.ಶನಿವಾರ ಶಾಲಾ ವಿದ್ಯಾರ್ಥಿಗಳಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು. ಹಲಗೂರು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಮುತ್ತತ್ತಿ ರಸ್ತೆಯ ಗಣಪತಿ ದೇವಸ್ಥಾನ, ಸಾರಿಗೆ ಬಸ್ ನಿಲ್ದಾಣ, ಕೊನ್ನಾಪುರದ ಸರ್ಕಾರಿ ಪ್ರಾಥಮಿಕ ಶಾಲೆ, ಮಾರಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತೊರೆ ಕಾಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗಿದೆ ಎಂದರು.