ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಡಾ. ಪುರುಷೋತ್ತಮನಾಂದಪುರಿ ಶ್ರೀ

KannadaprabhaNewsNetwork |  
Published : May 30, 2026, 02:00 AM IST
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಶ್ರೀಗಳು ಮಾತನಾಡಿದರು.  | Kannada Prabha

ಸಾರಾಂಶ

ಪುಟ್ಟರಂಗಶೆಟ್ಟಿ ಸತತ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ಈ ಹಿಂದೆ ಸಚಿವ ಸ್ಥಾನ ನೀಡುತ್ತೇವೆ ಅಂತ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಭರವಸೆ ಈಡೇರಲಿಲ್ಲ. ಈಗ ಮತ್ತೆ ಮಂತ್ರಿ ಮಂಡಲ ಪುನರ್ ರಚನೆ ಆಗಲಿದ್ದು, ಈ ಬಾರಿಯಾದರೂ ನೀಡಲಿ ಎಂದು ಡಾ. ಪುರುಷೋತ್ತಮನಾಂದಪುರಿ ಶ್ರೀಗಳು ಆಗ್ರಹಿಸಿದರು.

ಗದಗ: ಉಪ್ಪಾರ ಸಮಾಜ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿದೆ. ಇಂತಹ ಸಮಾಜದ ಏಕೈಕ ಶಾಸಕರಾಗಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭಗೀರಥ ಗುರುಪೀಠದ ಡಾ. ಪುರುಷೋತ್ತಮನಾಂದಪುರಿ ಶ್ರೀಗಳು ಒತ್ತಾಯಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಸತತ ನಾಲ್ಕು ಬಾರಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಟ್ಟರಂಗಶೆಟ್ಟಿ ಅವರಿಗೆ ಈ ಹಿಂದೆ ಸಚಿವ ಸ್ಥಾನ ನೀಡುತ್ತೇವೆ ಅಂತ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಭರವಸೆ ಈಡೇರಲಿಲ್ಲ. ಈಗ ಮತ್ತೆ ಮಂತ್ರಿ ಮಂಡಲ ಪುನರ್ ರಚನೆ ಆಗಲಿದ್ದು, ಈ ಬಾರಿಯಾದರೂ ನೀಡಲಿ ಎಂದು ಆಗ್ರಹಿಸಿದರು.

ಉಪ್ಪಾರ ನಿಗಮದ ಅಧ್ಯಕ್ಷ ಭರಮಣ್ಣ ಇತರರು ಇದ್ದರು.ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಡಂಬಳ: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿದ್ದು, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಂಡರಗಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮುಂಡರಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲರು ರೋಣ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಶಾಸಕರ ಪೈಕಿ ಹಿರಿಯ ಹಾಗೂ ಅನುಭವಿ ನಾಯಕರಾಗಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದು, ಕ್ಷೇತ್ರವನ್ನು ಕಾಂಗ್ರೆಸ್‌ನ ಭದ್ರಕೋಟೆಯಾಗಿ ರೂಪಿಸಿದ್ದಾರೆ ಎಂದಿದ್ದಾರೆ.ಇಂದು ಮಂಕುತಿಮ್ಮನ ಕಗ್ಗ, ಜೀವನ ಮೌಲ್ಯಗಳು ಕಾರ್ಯಕ್ರಮ

ಗದಗ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗದಗ ಇವರ ಸಹಯೋಗದಲ್ಲಿ ಮೇ 30ರಂದು ಸಂಜೆ 6.30ಕ್ಕೆ ಗದಗ ನಗರದ ತೋಂಟದ ಸಿದ್ಧಲಿಂಗೇಶ್ವರ ಕನ್ನಡ ಭವನದಲ್ಲಿ ಮಂಕುತಿಮ್ಮನ ಕಗ್ಗ ಜೀವನ ಮೌಲ್ಯಗಳು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಜಿಲ್ಲಾ ಸಂಯೋಜಕ ಡಾ. ನಿಂಗು ಸೊಲಗಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀವೇಕಾನಂದಗೌಡ ಪಾಟೀಲ ವಹಿಸಲಿದ್ದಾರೆ. ಮಂತಿಮ್ಮನ ಕಗ್ಗ ಜೀವನ ಮೌಲ್ಯಗಳು ವಿಷಯ ಕುರಿತು ಹೂವಿನಹಡಗಲಿಯ ದ್ವಾರಕೀಶರೆಡ್ಡಿ ಅವರು ಉಪನ್ಯಾಸ ನೀಡಲಿದ್ದಾರೆ. ಶ್ರದ್ಧಾ ಉಜ್ವಲ ಕಬಾಡಿ ಹಾಗೂ ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿದೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆಗಾಲದಲ್ಲಿ ಪ್ರಾಣಹಾನಿ ತಡೆಗೆ ಮುನ್ನಚ್ಚರಿಕೆ ವಹಿಸಿ
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬೀಡುಬಿಟ್ಟ ಕೊಪ್ಪಳ ಜಿಲ್ಲೆಯ ಶಾಸಕರು