ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಜ್ಞಾನವಂತರನ್ನಾಗಿಸಿ: ಜಾಸ್ಮಿನ್ ಕಿಲ್ಲೆದಾರ

KannadaprabhaNewsNetwork |  
Published : May 29, 2024, 12:49 AM IST
೨೮ ಇಳಕಲ್ಲ ೧  | Kannada Prabha

ಸಾರಾಂಶ

ಇಂದಿನ ಸ್ಪರ್ಧಾತ್ಮ ಯುಗದಲ್ಲಿ ಶಾಲೆಗಳಿಗೆ ಬರುವ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಜ್ಞಾನ ಹೆಚ್ಚಿಸಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ ಹೇಳಿದರು.

ಕನ್ನಡಪ್ರಭ ವಾರ್ತೆ ಇಳಕಲ್ಲ

ಇಂದಿನ ಸ್ಪರ್ಧಾತ್ಮ ಯುಗದಲ್ಲಿ ಶಾಲೆಗಳಿಗೆ ಬರುವ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಜ್ಞಾನ ಹೆಚ್ಚಿಸಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ ಹೇಳಿದರು.

ನಗರದ ವಿಜಯ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಎಸ್.ಆರ್. ಕಂಠಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯ ಇಳಕಲ್ಲ ಹಾಗೂ ಹುನಗುಂದ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೪-೨೫ನೇ ಶೈಕ್ಷಣಿಕ ವರ್ಷದ ಆರಂಭದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಈ ವರ್ಷವನ್ನು ಶೈಕ್ಷಣಿಕ ಬಲವರ್ಧನೆ ವರ್ಷವನ್ನಾಗಿ ಆಚರಿಸಲಾಗುತ್ತಿದೆ. ಇಲಾಖೆ ಬಿಡುಗಡೆ ಮಾಡಿರುವ ಶೈಕ್ಷಣಿಕ ಮಾರ್ಗದರ್ಶಿ ಪುಸ್ತಕದ ಅನುಸಾರ ಶಾಲೆಯ ಎಲ್ಲಾ ಚಟುವಟಿಕೆಗಳನ್ನು ನಿರ್ವಹಿಸುವುದು. ಶಾಲೆಯನ್ನು ಸಂಪೂರ್ಣ ಸ್ವಚ್ಛಗೊಳಿಸಿ ಶಾಲಾ ಪ್ರಾರಂಭದ ದಿನವೇ ಮಕ್ಕಳಿಗೆ ಸಿಹಿ ವಿತರಿಸಿ ಪಠ್ಯಪುಸ್ತಕ ವಿತರಿಸುವುದು. ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ದಾಖಳಿಸುವುದು, ಶಾಲೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸುವುದು, ತಾಲೂಕಿನ ಅಭಿವೃದ್ಧಿಗಾಗಿ ೫ ವಿಶೇಷ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬಿ.ಎಚ್. ತಿಳಿಗೋಳ, ವಿನೋದ ಭೋವಿ, ಸಿದ್ದು ಪಾಟೀಲ, ಸಂಗಣ್ಣ ಗದ್ದಿ, ಎಸ್.ವಿ. ಮೂಲಿನಮನಿ, ಎಸ್.ಟಿ.ಫೈಲ್, ಆರ್.ಎಂ. ಬಾಗವಾನ, ನಾಗರಾಜ ಹೊಸೂರ, ಶಿಕ್ಷಕ ಸಂಘದ ಅಧ್ಯಕ್ಷ ಆರ್.ಎಂ. ಮಾಸರೆಡ್ಡಿ, ಪಿ.ಎಸ್. ಪಮ್ಮಾರ ಹಾಗೂ ಇಳಕಲ್ಲ ತಾಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಪ್ರೌಢಶಾಲೆಯ ಮುಖ್ಯ ಗುರುಗಳು ಹಾಗು ಬಿಆರ್‌ಪಿ, ಸಿಆರ್‌ಪಿ ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!