ಹೊಳಲ್ಕೆರೆ: ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ಮುಂದಿನ ಭವಿಷ್ಯ ರೂಪಿಸುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ ಎಂದು ಶಾಸಕ ಡಾ.ಎಂ. ಚಂದ್ರಪ್ಪ ತಿಳಿಸಿದರು.ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಕ್ಷರ ದಾಸೋಹ, ಅಜೀಂ ಪ್ರೇಂಜಿ ಫೌಂಡೇಷನ್ ವತಿಯಿಂದ ಪಟ್ಟಣದ ಸಂವಿಧಾನ ಸೌಧದಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ನೀಡುವ ಪೌಷ್ಠಿಕಾಂಶ ಆಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳಿಗೆ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ರಾಜ್ಯ ಸರ್ಕಾರದ ಯೋಜನೆ ಅತ್ಯುತ್ತಮವಾದುದು. ಈಗಾಗಲೆ ಸರ್ಕಾರ ಮಕ್ಕಳಿಗೆ ಪಠ್ಯ ಪುಸ್ತಕ. ಶೂ, ಸಾಕ್ಸ್ ನೀಡುತ್ತಿದೆ. ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಂದೆ-ತಾಯಿ, ಗುರು-ಹಿರಿಯರು ಹಾಗೂ ನೀವುಗಳು ಓದಿದ ಶಾಲೆಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.