ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಕಲಶೆಟ್ಟಿ

KannadaprabhaNewsNetwork |  
Published : Feb 01, 2024, 02:02 AM IST
ಅಫಜಲ್ಪುರ ತಾಲೂಕಿನ ಆನೂರ ಗ್ರಾಮದ ಸರ್ಕಾರಿ ಶಾಲೆಗೆ ಗ್ರಾ.ಪಂ ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ ಭೇಟಿ ನೀಡಿ ಮಕ್ಕಳೊಂದಿಗೆ ಬಿಸಿಯೂಟ ಸವಿದರು.  | Kannada Prabha

ಸಾರಾಂಶ

ಅಫಜಲ್ಪುರ ತಾಲೂಕಿನ ಆನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟದ ಗುಣಮಟ್ಟ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದ ಗ್ರಾಪಂ ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ.

ಕನ್ನಡಪ್ರಭ ವಾರ್ತೆ ಚವಡಾಪುರ

ಗ್ರಾಮೀಣ ಭಾಗಗಳಲ್ಲಿ ಬಹತೇಕ ರೈತರು, ಕೂಲಿ ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಾರೆ ಹೀಗಾಗಿ ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಎಂದು ಗ್ರಾ.ಪಂ. ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ ಹೇಳಿದರು.

ಅಫಜಲ್ಪುರ ತಾಲೂಕಿನ ಆನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟದ ಗುಣಮಟ್ಟ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸವಿದು ಮಾತನಾಡಿದರು.

ಮಕ್ಕಳಿಗೆ ಶಿಕ್ಷಣ ಇಲಾಖೆಯ ಸೂಚನೆ ಮತ್ತು ನಿಯಮಾವಳಿಗಳ ಪ್ರಕಾರ ಬಿಸಿಯೂಟ ವಿತರಣೆ ಮಾಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಿ. ಶಾಲೆಗೆ ಬೇಕಾದ ಮೂಲ ಸೌಕರ್ಯಗಳ ಕುರಿತು ನಮ್ಮ ಗಮನಕ್ಕೆ ತಂದರೆ ಪಂಚಾಯ್ತಿ ವ್ಯಾಪ್ತಿಯ ಇತಿಮಿತಿಗಳನ್ನು ಗಮನದಲ್ಲಿಟ್ಟುಕೊಂಡು ಸೌಲಭ್ಯಗಳನ್ನು ಪೂರೈಕೆ ಮಾಡಲಾಗುತ್ತದೆ ಎಂದ ಅವರು ಆನೂರ ಗ್ರಾಮದ ಸರ್ಕಾರಿ ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಮಕ್ಕಳು ಆತಂಕದಲ್ಲಿ ವ್ಯಾಸಂಗ ಮಾಡುವಂತಾಗಿದೆ. ಈ ಕುರಿತು ಸಂಬಂಧ ಪಟ್ಟವರ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಶಾಲಾ ಕಟ್ಟಡ ಕಾಮಗಾರಿ ಆರಂಭವಾಗಿ ನಮ್ಮೂರ ಮಕ್ಕಳಿಗೆ ಭಯಮುಕ್ತ ಕಲಿಕೆಗೆ ಅನುಕೂಲವಾಗುವಂತೆ ಸಂಬಂಧ ಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಿಡಿಒ ಚಿದಾನಂದ ಆಲೆಗಾಂವ್, ಗಣಕಯಂತ್ರ ಸಿಬ್ಬಂದಿ ಹಣಮಂತ್ರಾಯ, ಪ್ರಮುಖರಾದ ಬಸು ಉಮ್ಮನಗೋಳ, ಚಿನ್ನಪ್ಪ ಉಮ್ಮನಗೋಳ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ