ಕನ್ನಡಪ್ರಭ ವಾರ್ತೆ ಅಥಣಿ
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಆರ್.ಬಿ.ತಿಮ್ಮಾಪುರವರು ಉತ್ತರ ಕರ್ನಾಟಕದ ಹಿರಿಯ ಶಾಸಕರಾಗಿ ಅನೇಕ ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದಲ್ಲದೇ ಇತ್ತೀಚಿಗೆ ಬಾಗಲಕೋಟೆಯ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಿಮ್ಮಾಪುರವರು ತಮ್ಮ ರಾಜಕೀಯ ಬದುಕಿನುದ್ದಕ್ಕೂ ಕಾಂಗ್ರೆಸ್‌ನ ತತ್ವ ಸಿದ್ಧಾಂತಗಳನ್ನು ಅನುಸರಿಸಿಕೊಂಡು ಬಂದಿದ್ದಾರೆ. ಪಕ್ಷ ಸಂಘಟನೆಗೆ ನಿರಂತರ ಶ್ರಮಿಸಿದ್ದಾರೆ. ಪಕ್ಷ ಇವರ ಶ್ರಮವನ್ನು ಪರಿಗಣಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಖಾತೆಯ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ನಿರ್ದೇಶಕಿ ಹಾಗೂ ಎಐಸಿಸಿ ಸಂಯೋಜಕಿ ಸುನಿತಾ ಐಹೊಳೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಯಾವತ್ತೂ ದಲಿತ ನಾಯಕರಿಗೆ ಒಳ್ಳೆಯ ಅವಕಾಶಗಳನ್ನು ನೀಡುತ್ತ ಬಂದಿದೆ. ಈಗಾಗಲೇ ಸಿಎಂ ಡಿ.ಕೆ.ಶಿವಕುಮಾರವರ ಮಂತ್ರಿಮಂಡಲದಲ್ಲಿ ದಲಿತ ಸಮುದಾಯದ ಎಡಗೈ ಮತ್ತು ಬಲಗೈ ನಾಯಕರಿಗೆ ಅವಕಾಶ ಕಲ್ಪಿಸಿದ್ದಾರೆ. ಆದರೆ,
ಉತ್ತರ ಕರ್ನಾಟಕದ ದಲಿತ ಸಮುದಾಯದ ಹಿರಿಯ ನಾಯಕರಾಗಿರುವ ಆರ್.ಬಿ.ತಿಮ್ಮಾಪುರ ಕೂಡಾ ಮುಂದಿನ ಮಂತ್ರಿಮಂಡಲದಲ್ಲಿ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಅಥಣಿ ತಾಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಹನುಮಂತ ಅರ್ದಾಯೂರ, ಸಮಾಜದ ಮುಖಂಡರಾದ ಕುಮಾರ ಗಸ್ತಿ, ಸಂತೋಷ್ ಹಾದಿಮನಿ, ಸದಾಶಿವ ದೊಡ್ಡಮನಿ, ಸುದೀಪ್ ಐಹೊಳೆ, ಸತೀಶ ಕುಲ್ಲೊಳ್ಳಿ, ಪ್ರಶಾಂತ್ ಆಚಾರಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.ಆರ್.ಬಿ.ತಿಮ್ಮಾಪುರ ಅವರು ಹಿಂದಿನ ಸರ್ಕಾರದಲ್ಲಿ ನಾಲ್ಕೈದು ಬಾರಿ ಸಚಿವರಾಗಿ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೊಡುಗೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ರಾಜ್ಯ ಮತ್ತು ಕೇಂದ್ರ ವರಿಷ್ಠರು ಆರ್.ಬಿ.ತಿಮ್ಮಾಪುರ ಅವರಿಗೆ ಮಂತ್ರಿ ಸ್ಥಾನವನ್ನು ನೀಡಬೇಕು.