ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಿ: ಬಿ.ಆರ್. ಗಿರೀಶ್

KannadaprabhaNewsNetwork |  
Published : May 30, 2026, 01:30 AM IST
ಪೋಟೋ: 27ಎಸ್‌ಎಂಜಿಕೆಪಿ02ಶಿವಮೊಗ್ಗದ ಪತ್ರಿಕಾಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಗಿರೀಶ್ ಮಾತನಾಡಿದರು.  | Kannada Prabha

ಸಾರಾಂಶ

ಬಂಜಾರ ಸಮುದಾಯದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರಾಗಿರುವ ಹಾವೇರಿಯ ರುದ್ರಪ್ಪ ಲಮಾಣಿರವರಿಗೆ ಕ್ಯಾಬಿನೇಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಗಿರೀಶ್ ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಬಂಜಾರ ಸಮುದಾಯದ ಕಾಂಗ್ರೆಸ್ ಪಕ್ಷದ ಏಕೈಕ ಶಾಸಕರಾಗಿರುವ ಹಾವೇರಿಯ ರುದ್ರಪ್ಪ ಲಮಾಣಿರವರಿಗೆ ಕ್ಯಾಬಿನೇಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಬಿ.ಆರ್. ಗಿರೀಶ್ ಒತ್ತಾಯಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿರುವ 36 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಸೇರಿದಂತೆ ಒಟ್ಟು 60ಕ್ಕೂ ಅಧಿಕ ಕ್ಷೇತ್ರಗಳಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಬಂಜಾರ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ ಎಂದರು.

ಸಚಿವ ಸಂಪುಟ ವಿಸ್ತರಣೆಯಲ್ಲಿ ಬಂಜಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿ ಕಾಂಗ್ರೆಸ್ ಪಕ್ಷದ ಏಕೈಕ ಬಂಜಾರ ಸಮುದಾಯದ ಶಾಸಕರು ಹಾಗೂ ಹಾಲಿ ವಿಧಾನಸಭೆಯ ಉಪಸಭಾಪತಿಗಳಾದ ರುದ್ರಪ್ಪ ಲಮಾಣಿ ಅವರಿಗೆ ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನ ನೀಡಬೇಕೆಂದು ಸಮಸ್ತ ಬಂಜಾರ ಸಮುದಾಯದ ಪರವಾಗಿ ಆಗ್ರಹಿಸಿದರು.

ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಜವಳಿ ಮತ್ತು ಮುಜರಾಯಿ ಇಲಾಖೆ ಸಚಿವರಾಗಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವರಿಷ್ಠರು ಸಾಮಾಜಿಕ ನ್ಯಾಯದ ಅಡಿಯಲ್ಲಿ ರಾಜ್ಯದ 30 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಬಂಜಾರ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವುದರ ಜೊತೆಗೆ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಕ್ಯಾಬಿನೇಟ್ ದರ್ಜೆಯ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಪ್ರಮುಖರಾದ ಉಮಾಮಹೇಶ್ವರ ನಾಯ್ಕ್, ಕಲ್ಲೇಶ್ ನಾಯ್ಕ್, ಸಂತೋಷ್ ನಾಯ್ಕ್, ಚೇತನ್ ನಾಯ್ಕ್, ಕಾರ್ತಿಕ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆಗಳ ವಿಲೀನ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮನೆಗೆ ಸುಹಾಸ್ ಭೇಟಿ