ಕೊಳಚೆ ನೀರಿಗೊಂದು ಹೆಸರಿಡಿ: ಸಚಿವರಿಗೆ ಹೋರಾಟಗಾರರ ಮೊರೆ

KannadaprabhaNewsNetwork |  
Published : Aug 03, 2025, 01:30 AM IST
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌ ಮುನಿಯಪ್ಪ ಅವರನ್ನು ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಸ್ವಾಗತಿಸಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ವ್ಯಾಪ್ತಿಯಿಂದ ಮಜರಾಹೊಸಹಳ್ಳಿ, ಚಿಕ್ಕತುಮಕೂರು, ದೊಡ್ಡತುಮಕೂರು ಭಾಗಕ್ಕೆ ಹರಿದು ಬರುವ ಒಳಚರಂಡಿ ಕೊಳಚೆ ನೀರಿನ ನದಿಗೆ ಹೆಸರಿಡುವಂತೆ ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿದರು.

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ವ್ಯಾಪ್ತಿಯಿಂದ ಮಜರಾಹೊಸಹಳ್ಳಿ, ಚಿಕ್ಕತುಮಕೂರು, ದೊಡ್ಡತುಮಕೂರು ಭಾಗಕ್ಕೆ ಹರಿದು ಬರುವ ಒಳಚರಂಡಿ ಕೊಳಚೆ ನೀರಿನ ನದಿಗೆ ಹೆಸರಿಡುವಂತೆ ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿದರು.

ತಾಲೂಕಿನ ಬಾಶೆಟ್ಟಿಹಳ್ಳಿಗೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌. ಮುನಿಯಪ್ಪ ಅವರ ಎದುರು ಭಿತ್ತಿಪತ್ರ ಪ್ರದರ್ಶಿಸಿದರು.

ಈ ವೇಳೆ ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯ ವಸಂತಕುಮಾರ್, ಸತೀಶ್ ಮಾತನಾಡಿ, ಮಜರಾಹೊಸಹಳ್ಳಿ, ದೊಡ್ಡತುಮಕೂರು ಕೆರೆಗಳಿಗೆ ಬಾಶೆಟ್ಟಿಹಳ್ಳಿ, ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಿಂದ ಹರಿದು ಬರುತ್ತಿರುವ ಒಳಚರಂಡಿ ನೀರಿನಿಂದ ಈ ಭಾಗದ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ 17 ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯದಾಗಿವೆ. ದೊಡ್ಡಬಳ್ಳಾಪುರದಲ್ಲಿ ಕಾರ್ಯನಿರ್ವಹಿಸಬೇಕಿರುವ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಒಳಚರಂಡಿ ಕೊಳಚೆ ನೀರನ್ನು ಮೂರು ಹಂತದಲ್ಲಿ ಶುದ್ದೀಕರಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬರುತ್ತಿದ್ದರೂ ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಶಾಸಕ ಧೀರಜ್ ಮುನಿರಾಜ್, ಒಳಚರಂಡಿ ನೀರಿನ ಸಮಸ್ಯೆ ತೀವ್ರವಾಗಿದೆ. ಕೊಳಚೆ ನೀರು ಶುದ್ದೀಕರಣ ಘಟಕ ಸ್ಥಾಪನೆಗೆ ₹57 ಕೋಟಿ ನೀಡಲು ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ಆದರೆ ಶುದ್ದೀಕರಣ ಘಟಕ ಸ್ಥಾಪನೆಗೆ ಜಮೀನು ಖರೀದಿಗೆ ಹಣದ ಕೊರತೆ ಇದೆ. ಈ ಎಲ್ಲ ಸಮಸ್ಯೆಗಳ ಕುರಿತಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಆಗಸ್ಟ್ 5ರಂದು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ವಿವಿಧ ಇಲಾಖೆ ಹಾಗೂ ಹೋರಾಟ ಸಮಿತಿ ಸದಸ್ಯರ ಸಭೆ ನಡೆಸಲಾಗುತ್ತಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಮಾತನಾಡಿ, ಕೊಳಚೆ ನೀರಿನ ಶುದ್ದೀಕರಣ ಸಮಸ್ಯೆ ಪರಿಹಾರಕ್ಕೆ ಸರ್ಕಾರದಿಂದ ಆಗಬೇಕಿರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮತ್ತಿತರರು ಉಪಸ್ಥಿತರಿದ್ದರು.

2ಕೆಡಿಬಿಪಿ3-

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌ ಮುನಿಯಪ್ಪ ಅವರನ್ನು ಅರ್ಕಾವತಿ ನದಿ ಹೋರಾಟ ಸಮಿತಿ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ
ಬೆಳಗಾವಿ ಜಿಲ್ಲೆ ವಿಭಜನೆ ಇರಾದೆ ಸಿಎಂಗಿದೆ