ಕಾರ್ಮಿಕರಿಗೆ ನೀಡುವ ಸೌಲಭ್ಯಗಳನ್ನು ಅಂನವಾಡಿ ಕಾರ್ಯಕರ್ತೆಯರಿಗೆ ನೀಡಿ

KannadaprabhaNewsNetwork |  
Published : Nov 23, 2025, 01:45 AM IST
ಚನ್ನಗಿರಿಯ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ರಾಮಚಂದ್ರಪ್ಪ ಬಣದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕುಂದುಕೊರತೆ ಸಭೆ ನಡೆಯಿತು. | Kannada Prabha

ಸಾರಾಂಶ

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ರಾಮಚಂದ್ರಪ್ಪ ಬಣದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕುಂದುಕೊರತೆ ಸಭೆ ಶನಿವಾರ ನಡೆಯಿತು.

ಚನ್ನಗಿರಿ: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ರಾಮಚಂದ್ರಪ್ಪ ಬಣದ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕುಂದುಕೊರತೆ ಸಭೆ ಶನಿವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹೊನ್ನಪ್ಪ ಮರಿಯಮ್ಮನವರ್, ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಮಾಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸಕ್ಕೆ ಸರಿಯಾದ ವೇತನವನ್ನು ನೀಡದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಂಚಿಸುತ್ತಿದ್ದು, ಕನಿಷ್ಠ 25 ಸಾವಿರ ರು. ಗೌರವ ಧನವನ್ನು ನಿಗದಿ ಮಾಡಬೇಕು ಎಂದು ತಿಳಿಸುತ್ತಾ ಕಳಪೆ ಗುಣಮಟ್ಟದ ಸಮವಸ್ತ್ರ, ಕೆಲಸದ ಒತ್ತಡ ಸೇರಿದಂತೆ ಅಂನವಾಡಿ ಕಾರ್ಯಕರ್ತೆಯರನ್ನು ಜೀತದ ಆಳುಗಳಂತೆ ದುಡಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರನ್ನು ಶೋಷಿಸುತ್ತಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗಿದ್ದು, ಆ ನಿಟ್ಟಿನಲ್ಲಿ ಕೆಲ ಕಾರ್ಮಿಕ ಸಂಘಟನೆಗಳು ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಸಹಾಯಕಿಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿದ್ದರೆ ಕಾರ್ಮಿಕ ಕಾಯ್ದೆಗೆ ಒಳಪಡಿಸಿ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳನ್ನು ಕೊಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ರಾಜ್ಯ ಪದಾಧಿಕಾರಿಗಳಾದ ಶಾರಧಮ್ಮ, ವಿಶಾಲಮ್ಮ, ಜಿಲ್ಲಾ ಸಂಘದ ಅಧ್ಯಕ್ಷ ವಾಸು, ಪ್ರಧಾನ ಕಾರ್ಯದರ್ಶಿ ಸುವರ್ಣಮ್ಮ, ಮಹಮ್ಮದ್ ಭಾಷಾ, ಕಾರ್ಯದರ್ಶಿ ಗಾಯಿತ್ರಮ್ಮ, ತಾಲೂಕು ಅಧ್ಯಕ್ಷೆ ಕಗತೂರು ವಿಮಲಾಕ್ಷ್ಮಿ ಸೇರಿದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಷ್ಟ್ರಧ್ವಜ ತಯಾರಿಸ್ತಿ ದ್ದ ಕೈಗಳಲ್ಲೀಗ ಕೆಲಸವಿಲ್ಲ!
ಬೇಡ್ತಿಗಾಗಿ ಪಶ್ಚಿಮ ಘಟ್ಟ- ಬಯಲುಸೀಮೆ ಜಲ ಸಂಘರ್ಷ!