ಗಣೇಶ ವಿಸರ್ಜನಾ ಮಹೋತ್ಸವಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ

KannadaprabhaNewsNetwork |  
Published : Sep 25, 2025, 01:00 AM IST
24ಎಚ್ಎಸ್ಎನ್8 : ನುಗ್ಗೇಹಳ್ಳಿ ಹೋಬಳಿಯ ಹುಲಿಕೆರೆ ಗ್ರಾಮದ ಶ್ರೀ ಸಿದ್ಧಿ ವಿನಾಯಕ  ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ  ಗಣೇಶ ವಿಸರ್ಜನಾ ಮಹೋತ್ಸವ  ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಸಿಎನ್ ಬಾಲಕೃಷ್ಣ ಅವರನ್ನು  ಸಂಘದ ವತಿಯಿಂದ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಹುಲಿಕೆರೆ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣೇಶ ವಿಸರ್ಜನಾ ಮಹೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚೆಗೆ ಹಾಸನದ ಬಳಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ಟ್ರಕ್ ಚಾಲಕನ ಜಾಗರೂಕತೆಯಿಂದ ನಡೆದ ಅಪಘಾತದಲ್ಲಿ 10 ಜನ ಮೃತಪಟ್ಟರು. ಇನ್ನು ರಾಜ್ಯದ ನಾನಾ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಅವಘಡಗಳು ನಡೆದಿವೆ. ಆದರೆ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಾಗೂ ಸಂಘಗಳು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಆಗ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಇತ್ತೀಚಿನ ದಿನಗಳಲ್ಲಿ ಗಣೇಶ ವಿಸರ್ಜನ ಮಹೋತ್ಸವಗಳಲ್ಲಿ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಮುಂಜಾಗ್ರತವಾಗಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಶಾಸಕ ಸಿಎನ್ ಬಾಲಕೃಷ್ಣ ಹೇಳಿದರು.ಹೋಬಳಿಯ ಹುಲಿಕೆರೆ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಗಣೇಶ ವಿಸರ್ಜನಾ ಮಹೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇತ್ತೀಚೆಗೆ ಹಾಸನದ ಬಳಿ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ಟ್ರಕ್ ಚಾಲಕನ ಜಾಗರೂಕತೆಯಿಂದ ನಡೆದ ಅಪಘಾತದಲ್ಲಿ 10 ಜನ ಮೃತಪಟ್ಟರು. ಇನ್ನು ರಾಜ್ಯದ ನಾನಾ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಅವಘಡಗಳು ನಡೆದಿವೆ. ಆದರೆ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಾಗೂ ಸಂಘಗಳು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಆಗ ಇಂಥ ಘಟನೆಗಳು ಮರುಕಳಿಸುವುದಿಲ್ಲ ಎಂದರು.ಹುಲಿಕೆರೆ ಗ್ರಾಮದ ಸಿದ್ಧಿವಿನಾಯಕ ಸೇವಾ ಸಮಿತಿ ಯುವಕ ಬಳಗವು ಕಳೆದ ಅನೇಕ ವರ್ಷಗಳಿಂದ ಗೌರಿ ಗಣೇಶ ಮೂರ್ತಿಯನ್ನು ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡುವ ಮೂಲಕ ದಿನನಿತ್ಯ ಪೂಜೆ ಸಲ್ಲಿಸಿ ನಂತರ ವಿಸರ್ಜನೆ ಮಾಡಲಾಗುತ್ತಿದೆ ಗ್ರಾಮದಲ್ಲಿ ಸಮುದಾಯ ಭವನ ರಸ್ತೆ ಒಳಚರಂಡಿ ವಿದ್ಯುತ್ ದೀಪದ ವ್ಯವಸ್ಥೆ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.ನುಗ್ಗೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್ ಮಾತನಾಡಿ, ಕ್ಷೇತ್ರದ ಶಾಸಕರು ವಿಶೇಷವಾಗಿ ಹುಲಿಕೆರೆ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಗ್ರಾಮದ ರೈತರಿಗೆ ಎಂಎಂಎಲ್ ಸಂಸ್ಥೆ ಸ್ವಾದಿನ ಪಡಿಸಿಕೊಂಡಿದ್ದ ರೈತರ ಜಮೀನನ್ನು ಪುನಹ ಅವರಿಗೆ ಕೊಡಿಸಲು ಶಾಸಕರು ಹೆಚ್ಚು ಪರಿಶ್ರಮ ವಹಿಸಿದರು ಎಂದರು.ವೀರಗಾಸೆ ಕುಣಿತಕ್ಕೆ ಹೆಜ್ಜೆ ಹಾಕಿದ ಶಾಸಕರು:

ಗ್ರಾಮದ ಪ್ರಾರಂಭದಲ್ಲಿರುವ ಶ್ರೀ ಆಲದ ಮರದಮ್ಮ ದೇವಾಲಯದ ಪ್ರಾರಂಭದಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದವರೆಗೆ ವೀರಗಾಸೆ ಕುಣಿತದೊಂದಿಗೆ ಶಾಸಕರನ್ನು ಬರಮಾಡಿಕೊಳ್ಳಲಾಯಿತು. ನಂತರ ಗಣೇಶ ಮೂರ್ತಿಗೆ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರ ಒತ್ತಾಯಕ್ಕೆ ಮಣಿದ ಶಾಸಕರು ವೀರಗಾಸೆ ಕುಣಿತದಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಉದ್ಯಮಿ ಅಣತಿ ಯೋಗೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ವಿಎನ್ ಮಂಜುನಾಥ್, ಗ್ರಾಪಂ ಸದಸ್ಯರಾದ ಆಶಾ ದೇವಿ ಪ್ರಕಾಶ್, ಹಿರಿಯಣ್ಣ ಗೌಡ, ಹೊನ್ನಮ್ಮ ಧಣಿ ಕುಮಾರ್‌, ಮುಖಂಡರಾದ ಚಂದ್ರೇಗೌಡ, ನಾಗಮಣಿ ಪ್ರಕಾಶ್, ದೇವರಾಜ್, ಜಂಬೂರು ಮಹೇಶ್, ದರ್ಶನ್, ಸೇರಿದಂತೆ ಶ್ರೀ ಸಿದ್ಧಿ ವಿನಾಯಕ ಸೇವಾ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ