ಕನ್ನಡಪ್ರಭ ವಾರ್ತೆ ಮಂಡ್ಯ
ಗುರುವಾರ ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಪತಿ ಮಹಾತ್ಮ ಗಾಂಧಿಯವರ 156ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚಿಕ್ಕ ಮಕ್ಕಳಿಂದ ಯುವಕರವರೆಗೂ ಎಲ್ಲರಿಗೂ ಮೊಬೈಲ್ ಗೀಳು ಅಂಟಿಕೊಂಡಿದೆ. ಅದರಲ್ಲೇ ಸಂಪೂರ್ಣವಾಗಿ ಮುಳುಗಿಹೋಗಿದ್ದಾರೆ. ಓದುವ ಹವ್ಯಾಸವಂತೂ ಮರೆತೇಹೋಗಿದ್ದಾರೆ. ಮಹನೀಯರ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಅವರ ತತ್ವಾದರ್ಶನ ಪಾಲನೆಗೆ ಪ್ರೇರಣೆ ಸಿಗುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದರು.ಮೊಬೈಲ್‌ನಿಂದ ಸೋಮಾರಿತನ ಮತ್ತಷ್ಟು ಹೆಚ್ಚುತ್ತದೆ. ಪುಸ್ತಕ, ಪತ್ರಿಕೆಗಳನ್ನು ಓದುವುದರಿಂದ ಸಾಮಾನ್ಯ ಜ್ಞಾನ ಬೆಳವಣಿಗೆ ಕಾಣುತ್ತದೆ. ಕ್ರಿಯಾಶೀಲತೆ ಹೆಚ್ಚುತ್ತದೆ. ಓದು ಸಾಧನೆಗೆ ಸ್ಫೂರ್ತಿ ತುಂಬುತ್ತದೆ. ಗಾಂಧೀಜಿ, ಲಾಲ್‌ಬಹದ್ದೂರ್ ಶಾಸ್ತ್ರೀ ಅವರ ಸ್ಮರಣೆಯಿಂದ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ತಿಳಿಯುತ್ತದೆ. ಅದರಿಂದ ನಾವೂ ಕೂಡ ದೇಶಕ್ಕೆ ಏನಾದರೊಂದು ಕೊಡುಗೆ ನೀಡುವುದಕ್ಕೆ ಸ್ಫೂರ್ತಿ ತುಂಬುತ್ತದೆ ಎಂದರು.
ಯುದ್ಧವನ್ನು ಮಾಡದೆ ಶಾಂತಿ, ಸಹನೆ, ಅಹಿಂಸೆಯ ಮೂಲಕ ಸ್ವಾತಂತ್ರ್ಯ ಗಳಿಸಿದ ದೇಶವೆಂದರೆ ಅದು ಭಾರತ, ನಮ್ಮ ಮಕ್ಕಳಿಗೆ ಮಹಾತ್ಮ ಗಾಂಧೀಜಿ ಅವರ ಸಾಧನೆಯನ್ನು ತಿಳಿಸಬೇಕು, ಬೇರೆ ಬೇರೆ ದೇಶದ ಜನರು ಗಾಂಧೀಜಿ ಅವರನ್ನು ಮಹಾತ್ಮ ಎಂದು ಕರೆಯುತ್ತಾರೆ. ಭಾರತೀಯರಾದ ನಾವು ಮಹಾತ್ಮ ಗಾಂಧೀಜಿ ಅವರನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದೇವೆ ಎಂದು ವಿಷಾದಿಸಿದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ದೇಶಕ್ಕೆ ಅಹಿಂಸೆಯ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಚೇತನ ಮಹಾತ್ಮ ಗಾಂಧೀಜಿ. ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಹೋರಾಟಗಾರರು ಭಾಗವಹಿಸಿದ್ದಾರೆ. ಆದರೂ ಗಾಂಧೀಜಿಯವರನ್ನು ಏಕೆ ನಾವು ಸ್ಮರಿಸುತ್ತೇವೆ ಎಂದರೆ ವಿಭಜನೆಯಾಗಿದ್ದ ಸ್ವಾತಂತ್ರ ಹೋರಾಟಗಾರರನ್ನು ಒಗ್ಗೂಡಿಸಿ ಬ್ರಿಟಿಷರೊಂದಿಗೆ ಅಹಿಂಸಾ ಮಾರ್ಗದಲ್ಲಿ ಹೋರಾಟ ನಡೆಸಿ ಯಶಸ್ಸು ಕಂಡ ಅಪ್ರತಿಮ ವ್ಯಕ್ತಿ ಎಂದರು.
ನಂತರ ವಿವಿಧ ಧರ್ಮಗಳ ಧರ್ಮಗುರುಗಳಾದ ಧರಣೇಂದ್ರಯ್ಯ, ಪದ್ಮನಾಭ, ಫಾದರ್ ಜೋಯಿಸನ್, ತನ್ವೀರ್ ಮಾನ್ಸರ್ ಅವುಗಳು ಸರ್ವಧರ್ಮ ಪ್ರಾರ್ಥನೆ ಮಾಡಿದರು. ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ವಿಜೇತರ ಪಟ್ಟಿ
ಪಾಂಡವಪುರ ತಾಲ್ಲೂಕಿನ ಟಿ.ಎಸ್. ಛತ್ರ ಸರ್ಕಾರಿ ಪ್ರೌಢಶಾಲೆಯ ಮಹಾಲಕ್ಷ್ಮೀ ಪ್ರಥಮ, ಮಂಡ್ಯ ಗ್ಲೋಬಲ್ ಪಬ್ಲಿಕ್ ಶಾಲೆಯ ಕೆ.ಎಸ್.ದೀಪ್ತಿಶ್ರೀ ದ್ವಿತೀಯ, ಮದ್ದೂರು ತಾಲ್ಲೂಕಿನ ಪೂರ್ಣಪ್ರಜ್ಞಾ ಶಾಲೆಯ ಎಸ್.ಪಿ.ಚಂದನಾ ತೃತೀಯ.
ಮಂಡ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಮಾಜಿ ಪುರಸಭೆ) ಲಕ್ಷ್ಮೀ ಪ್ರಥಮ, ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಕಲ್ಲುಕಟ್ಟಡ) ನಿಸರ್ಗ ದ್ವಿತೀಯ, ಕೆ.ಆರ್. ಪೇಟೆ ತಾಲ್ಲೂಕಿನ ಹರಿಹರಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಛಾಯಾವತಿ ತೃತೀಯ.
ಪದವಿ-ಸ್ನಾತಕೋತ್ತರ ಪದವಿ ವಿಭಾಗನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಕಲಾ ವಾಣಿಜ್ಯ ಕಾಲೇಜಿನ ಬಿ.ಎಸ್.ನೇತ್ರಾ ಪ್ರಥಮ, ಮಂಡ್ಯ ಸರ್ಕಾರಿ ಮಹಿಳಾ ಕಾಲೇಜಿನ (ಸ್ವಾಯತ್ತ) ಎಸ್.ಯುಕ್ತಿ ದ್ವಿತೀಯ, ಮದ್ದೂರು ತಾಲ್ಲೂಕಿನ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎ.ಎಸ್.ಭವಾನಿ ತೃತೀಯ