ಹೊಳಲ್ಕೆರೆ: ನಮಗೆ ಮೊದಲೆ ಕುಡಿಯುವ ನೀರು ಕೊಡಿ, ಆಮೇಲೆ ಚುನಾವಣೆಯಲ್ಲಿ ಗೆಲ್ಲಲು ಮತ ಕೇಳಲು ಬನ್ನಿ ಎಂದು ತಾಲ್ಲೂಕಿನ ಟಿ. ನುಲೇನೂರು ಗ್ರಾಮಸ್ಥರು ತಮ್ಮ ಆಗ್ರಹವನ್ನು ಮುಂದಿಟ್ಟಿದ್ದಾರೆ.
ನಮ್ಮ ಊರಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳೂ ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯಲು ಗ್ರಾಮ ಪಂಚಾಯ್ತಿ ಮುಂದೆ ಖಾಲಿ ಕೊಡಗಳ ಪ್ರದರ್ಶನ ಮಾಡಿದ್ದೇವೆ. ಕೂಡಲೇ ಅಧಿಕಾರಿಗಳೂ ಸ್ಥಳಕ್ಕೆ ಆಗಮಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಗ್ರಾಮದ ಬಹುತೇಕ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲೊಂಡು ಗ್ರಾಮ ಪಂಚಾಯ್ತಿ ಕಚೇರಿ ಮುಂದೆ ಖಾಲಿ ಕೊಡಗಳನ್ನಿಟ್ಟು ಪ್ರತಿಭಟನೆ ನಡೆಸಿದರು.