ಪಶ್ಚಿಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಕನೂರ ಪರ ಮತಯಾಚಿಸಿದ ಕೆಎಲ್ಇ ಸಂಸ್ಥೆಯ ನಿಕಟಪೂರ್ವ ಕಾರ್ಯಾಧ್ಯಕ್ಷ
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಅವರು ಇಲ್ಲಿನ ಲಿಂಗರಾಜ ನಗರದ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಅಭ್ಯರ್ಥಿ ಎಸ್.ವಿ. ಸಂಕನೂರ ಮಾತನಾಡಿ, ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ 4 ಲಕ್ಷ ಹುದ್ದೆಗಳು ಖಾಲಿಯಿದ್ದು, ನೇಮಕಾತಿಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕಳೆದ 12 ವರ್ಷಗಳಿಂದ ಶಿಕ್ಷಕರು, ಸರ್ಕಾರಿ ನೌಕರರು ಹಾಗೂ ನಿರುದ್ಯೋಗಿ ಪದವೀಧರರ ಸಮಸ್ಯೆಗಳಿಗೆ ವಿಧಾನ ಪರಿಷತ್ನಲ್ಲಿ ಧ್ವನಿಯಾಗಿದ್ದೇನೆ. ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿದ ಪರಿಣಾಮ ಸರ್ಕಾರ 72 ಸಾವಿರ ಹುದ್ದೆ ಭರ್ತಿಗೆ ಮುಂದಾಗಿದೆ ಎಂದರು.
ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರಿಗೆ ಅನ್ಯಾಯವಾಗುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಸಮಸ್ಯೆಗಳು ಹನುಮಂತನ ಬಾಲದಂತೆ ಬೆಳೆಯುತ್ತಿವೆ. ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸಂಘಟಿತ ಹೋರಾಟದ ಅಗತ್ಯವಿದೆ. ನ. 17ರಂದು ಮೆರವಣಿಗೆ ಹಾಗೂ ನ. 18ರಂದು ಶಾಲಾ-ಕಾಲೇಜು ಬಂದ್ ಮಾಡುವ ಮೂಲಕ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು. ಶಿಕ್ಷಕರ ಸಂಘಟನೆಗೆ ಬೆನ್ನೆಲುಬಾಗಿ ನಿಂತು, ಶಿಕ್ಷಕರು ನೆಮ್ಮದಿಯ ಜೀವನ ನಡೆಸಲು ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮನವಿ ಮಾಡಿದರು.
ಶಾಸಕ ಮಹೇಶ ಟೆಂಗಿನಕಾಯಿ, ಕೆಎಲ್ಇ ಸಂಸ್ಥೆಯ ಮಾಜಿ ನಿರ್ದೇಶಕ ಶಂಕರಣ್ಣ ಮುನವಳ್ಳಿ ಮಾತನಾಡಿದರು. ಕೆಎಲ್ಇ ನಿರ್ದೇಶಕ ಮಂಜುನಾಥ ಮುನವಳ್ಳಿ, ರಘು ಅಕಮಂಚಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ವಸಂತ ನಾಡಜೋಶಿ, ಸಂದೀಪ ಬೂದಿಹಾಳ ಸೇರಿದಂತೆ ಹಲವರಿದ್ದರು. ಉಮೇಶ ಕೌಜಗೇರಿ ನಿರೂಪಿಸಿದರು.