ನಿಮ್ಮ ಸೇವೆಗೊಮ್ಮೆ ಅವಕಾಶ ಕೊಡಿ: ಸಾಗರ ಖಂಡ್ರೆ

KannadaprabhaNewsNetwork |  
Published : Apr 08, 2024, 01:07 AM IST
ಚಿತ್ರ 7ಬಿಡಿಆರ್6ಕಮಲನಗರ ಪಟ್ಟಣದ ಬಸವ ಫಂಕ್ಷನ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೀದರ್‌ ಲೋಕಸಭಾ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಸಾಗರ ಖಂಡ್ರೆಯವರಿಗೆ ಕಾರ್ಯಕರ್ತರು ಸನ್ಮಾನಿಸಿದರು. | Kannada Prabha

ಸಾರಾಂಶ

ಪ್ರಾಮಾಣಿಕತೆ, ಶ್ರದ್ಧೆಯಿಂದ ಕೆಲಸ ಮಾಡಿ ನಿಮ್ಮ ನಂಬಿಕೆ ಉಳಿಸಿಕೊಳ್ತೇನೆ. ಕಮಲನಗರದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಕಮಲನಗರ

ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ ನೀಡಿ ನನ್ನನ್ನು ಆಶೀರ್ವದಿಸುವಂತೆ ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆ ಮನವಿ ಮಾಡಿದರು.

ಪಟ್ಟಣದ ಬಸವ ಫಂಕ್ಷನ್‌ ಹಾಲ್‌ನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಸೇವೆ ಮಾಡಲು ನನಗೊಂದು ಅವಕಾಶ ಮಾಡಿಕೊಡಿ. ನಾನು ಸದಾ ನಿಮ್ಮ ಕಷ್ಟ ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಿಮ್ಮ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಹಿಂದಿನ ಅವಧಿಯಲ್ಲಿ ಬಿಜೆಪಿಯಿಂದ ಭಗವಂತ ಖೂಬಾ ಸಂಸದರಾಗಿ ಆಯ್ಕೆಯಾಗಿ ಬಂದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಲಿಲ್ಲ. ಇಲ್ಲಿಯ ಪರಿಸ್ಥಿತಿ ನೋಡಿದರೆ ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ ಮಟ್ಟದಿಂದ ಕೆಲಸ ಮಾಡಿ ನನ್ನನ್ನು ಗೆಲ್ಲಿಸುವ ಮೂಲಕ ನನಗೆ ದೆಹಲಿಗೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಪಕ್ಷ ದೇಶದ ಜನತೆಗೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಾಗುತ್ತದೆ ಎಂದು ಭರವಸೆ ನೀಡಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆ ಮಾಡಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವುದೇ ನನ್ನ ಸಂಕಲ್ಪವಾಗಿದೆ ಎಂದು ನುಡಿದರು.

ಔರಾದ್‌ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆನಂದ ಚವ್ಹಾಣ್‌ ಮಾತನಾಡಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಅವರ ಸರ್ಕಾರ ಬರೀ ಸುಳ್ಳು ಆಶ್ವಾಸನೆ ನೀಡುವದರಲ್ಲಿ ನಿಸ್ಸೀಮ. ಕಾಂಗ್ರೆಸ್‌ ಘೋಷಿತ ಅಭ್ಯರ್ಥಿ ಸಾಗರ ಖಂಡ್ರೆಗೆ ಮತ ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಕೈಜೊಡಿಸಬೇಕು ಎಂದು ಕರೆ ನೀಡಿದರು.

ಔರಾದ್‌ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ರಾಜಕುಮಾರ ಹಲಬುರ್ಗೆ, ಭಾಲ್ಕಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಹಣಮಂತ ಚವ್ಹಾಣ್‌, ಗಂಗಾಧರ ಮಜಗೆ, ಮಲ್ಲಿಕಾರ್ಜುನ ಪಾಟೀಲ್‌, ವೆಂಕಟರಾವ್‌ ಶಿಂಧೆ, ಪ್ರವೀಣ ಪಾಟೀಲ್‌, ಸಂತೋಷ ಬಿರಾದಾರ, ಪ್ರವೀಣ ಕದಮ, ಶಾಂತಕುಮಾರ ಬಿರಾದಾರ ಹಾಗೂ ಕಾರ್ಯಕರ್ತರು ಹಾಜರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ