ಮಕ್ಕಳಿಗೆ ಸಂಸ್ಕಾರ ನೀಡುವುದು ಪಾಲಕರ ಜವಾಬ್ದಾರಿ: ಪ್ರೊ.ತ್ಯಾಗರಾಜ

KannadaprabhaNewsNetwork |  
Published : Jan 05, 2025, 01:31 AM IST
ದೇವೇಂದ್ರ ಜಿನಗೌಡ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ೨೫ ನೇ ವರ್ಷದ ರಜತ ಮಹೋಕೋತ್ಸವ ಸಮಾರಂಭವನ್ನು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪ ಕುಲಪತಿ ಪ್ರೊ. ಸಿ.ಎಂ.ತ್ಯಾಗರಾಜ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳ ಪಾಲನ ಪೋಷಣೆ ಮತ್ತು ಬೆಳವಣಿಗೆಯಲ್ಲಿ ಪಾಲಕರ ಜವಾಬ್ದಾರಿ ಹೆಚ್ಚಾಗಿದೆ. ಹಾಗಾಗಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ನಡುವಳಿಕೆ ನೀಡುವುದು ಆದ್ಯ ಕರ್ತವ್ಯವಾಗಿದೆ ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿದ್ಯಾರ್ಥಿಗಳ ಪಾಲನ ಪೋಷಣೆ ಮತ್ತು ಬೆಳವಣಿಗೆಯಲ್ಲಿ ಪಾಲಕರ ಜವಾಬ್ದಾರಿ ಹೆಚ್ಚಾಗಿದೆ. ಹಾಗಾಗಿ ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ನಡುವಳಿಕೆ ನೀಡುವುದು ಆದ್ಯ ಕರ್ತವ್ಯವಾಗಿದೆ ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.

ಶನಿವಾರ ಬೆಳಗಾವಿ ತಾಲೂಕಿನ ಶಿಂಧೊಳ್ಳಿಯ ದೇವೇಂದ್ರ ಜಿನಗೌಡ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಮಕ್ಕಳಲ್ಲಿ ಕಲಿಕಾ ಭಾವನೆ ಕಡಿಮೆಯಾಗುತ್ತಿದೆ. ಪಾಲಕರು ಮಕ್ಕಳನ್ನು ದುಡ್ಡು ಕೊಟ್ಟು ಶಾಲೆಗೆ ಸೇರಿಸಿ ಎಲ್ಲ ಜವಾಬ್ದಾರಿಯನ್ನು ಶಿಕ್ಷಕರಿಗೆ ಒಪ್ಪಿಸಿದರೆ ಸಾಲದು. ಶಿಕ್ಷಕರ ಜೊತೆ ಮನೆಯಲ್ಲಿ ಮಕ್ಕಳ ಜವಾಬ್ದಾರಿಯನ್ನು ಪಾಲಕರು ಸರಿಯಾಗಿ ನಿರ್ವಹಿಸಬೇಕು. ಅವರಿಗೆ ಉತ್ತಮ ಸಂಸ್ಕಾರ ನೀಡಬೇಕೆಂದು ಕಿವಿಮಾತು ಹೇಳಿದರು.

ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಸಿದ್ದು ಅಲಗೂರ ಮಾತನಾಡಿ, ಗೋಪಾಲ ಜಿನಗೌಡ ಅವರು ಗ್ರಾಮೀಣ ಪ್ರದೇಶದಲ್ಲಿ ಇಂತಹ ಅತ್ಯುತ್ತಮ ಶಿಕ್ಷಣ ಸಂಸ್ಥೆ ಪ್ರಾರಂಭಿಸುವ ಮೂಲಕ ಗ್ರಾಮೀಣ ಜನರ ಮತ್ತು ರೈತರ ಮಕ್ಕಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಇಂದಿನ ಡೊನೇಷನ್‌ ಹಾವಳಿಯ ನಡುವೆ ಡೊನೇಷನ್‌ ಪಡೆಯದೆ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಮೂಲಕ ಶಿಕ್ಷಣ ಮಾರಾಟದ ವಸ್ತುವಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಗೋಪಾಲ ಜಿನಗೌಡ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಗೋಪಾಲ ಜಿನಗೌಡ ಅವರು, ನನ್ನ ಜೀವನದಲ್ಲಿ ವ್ಯವಹಾರಗಳನ್ನು ಮಾಡುವಾಗ ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದಿಂದ ಕಾರ್ಯ ನಿರ್ವಹಿಸಿರುವೆ. ಇದರಿಂದಾಗಿ ಇಂದು ದೊಡ್ಡದಾದ ಶಿಕ್ಷಣ ಸಂಸ್ಥೆ ಕಟ್ಟಲು ಸಾಧ್ಯವಾಯಿತು. ಜೀವನದಲ್ಲಿ ಪ್ರಾಮಾಣಿಕತೆ ಇದ್ದರೆ ಎಲ್ಲವನ್ನೂ ಸಾಧಿಸಬಹುದಾಗಿದೆ ಎಂದರು.

ವೇದಿಕೆ ಮೇಲೆ ಟ್ರಸ್ಟ್‌ ಆಡಳಿತ ಮಂಡಳಿ ಸದಸ್ಯರಾದ, ಹುಕುಮಚಂದ ರತ್ತು,ಇಂದಿರಾ ಶಂಕರಗೌಡ, ಭುಜಬಲಿ ಶಂಕರಗೌಡ, ಸಂದೀಪ ಚಿಪ್ರೆ ಸೇರಿದಂತೆ ಇತರರು ಇದ್ದರು. ದೇವೇಂದ್ರ ಜಿನಗೌಡ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ವಿಜಯಲಕ್ಷ್ಮೀ ಪಾಟೀಲ ಸ್ವಾಗತಿಸಿದರು. ಜಯವಂತ ಮಾರಿಹಾಳ ಮತ್ತು ಡಾಯಾನಾ ಡಿಸೋಜಾ ಪರಿಚಯಿಸಿದರು. ವಿಜಯಲಕ್ಷ್ಮೀ ಹಲಗತ್ತಿ ,ಅಲ್ಕಾ ಜಿಂಗಾಡೆ ನಿರೂಪಿಸಿದರು. ಗೋಪಾಲ ಜಿನಗೌಡ ಮಹಾವಿದ್ಯಾಲಯದ ಪ್ರಾಚಾರ್ಯ ಭಾರತಿ ರಂಗಣೇಕರ ವಂದಿಸಿದರು.

PREV

Recommended Stories

ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ