ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಹಿರಂಗ ಅಧಿವೇಶನ, ಸಾಧಕರಿಗೆ ಸನ್ಮಾನ

KannadaprabhaNewsNetwork |  
Published : Nov 29, 2025, 11:30 PM IST
ಕಾರ್ಯಕ್ರಮ ಉದ್ಘಾಟಿಸುತ್ತಿರುವ ಒಡಿಯೂರು ಸ್ವಾಮೀಜಿ. | Kannada Prabha

ಸಾರಾಂಶ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಇತ್ತೀಚೆಗೆ ಜರುಗಿತು.

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಮಂಗಳವಾರ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ ಸಮಾಜಕ್ಕೆ ರಾಜ್ಯವನ್ನು ಆಳುವ ಸಾಮರ್ಥ್ಯವಿದೆ. ಬಂಟರು ವಿಶ್ವದೆಲ್ಲೆಡೆ ಇದ್ದಾರೆ, ಅವರೆಲ್ಲ ಒಗ್ಗೂಡಿದರೆ ರಾಷ್ಟ್ರ ಸುಭದ್ರವಾಗುತ್ತದೆ ಎಂದರು.

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಬಂಟ ಸಮಾಜ ಮಾತ್ರವಲ್ಲ, ಎಲ್ಲ ಸಮಾಜಗಳನ್ನು ಜತೆಗೆ ಕೊಂಡೊಯ್ಯುವ ತಾಕತ್ತು ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲ ವರ್ಗದ ಜನರನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲುವ ಮೂಲಕ ಸಾಮರಸ್ಯವನ್ನು ಸ್ಥಾಪಿಸುವ ಮಹತ್ತರ ಜವಾಬ್ದಾರಿ ಸಾಮಾಜಿಕ ಸಂಘಟನೆಗಳಿವೆ. ಅದನ್ನು ಎಲ್ಲ ಸಂಘ ಸಂಸ್ಥೆಗಳು ಪಾಲಿಸಬೇಕು ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರವಾಗಿ ಬಡವರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಸಂಘ ಏನೇ ಸಾಧನೆ ಮಾಡಬೇಕಿದ್ದರೂ ಅದಕ್ಕೆ ದಾನಿಗಳ ನೆರವು ಮತ್ತು ನಿರಂತರ ಪ್ರೋತ್ಸಾಹ ಅಗತ್ಯ ಎಂದು ಹೇಳಿದರು.

ದುಬೈ ಯುಎಇ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ, ಜಿಲ್ಲಾ ರಾಜ್ಯೋತ್ಸವ, ಪತ್ರಕರ್ತರಿಗೆ ಹಾಗೂ ಸಾಧಕರಿಗೆ ಸನ್ಮಾನ ಮಾಡಲಾಯಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಮೋಹನ್ ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ರಂಗೋಲಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಪೃಥ್ವಿರಾಜ್ ರೈ, ಎಸಿ ಭಂಡಾರಿ, ಸುಧಾಕರ್ ಎಸ್ ಪೂಂಜಾ, ಮಂಜು ಕೊಡ್ಲಾಡಿ, ಆನಂದ್ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಇದ್ದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ ಶೆಟ್ಟಿ ಸುರತ್ಕಲ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂದಿಗೂ ಬೆನ್ನಿಗೆ ಚೂರಿ ಹಾಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌
ಸ್ವಾಮೀಜಿಗಳು ರಸ್ತೆಗೆ ಇಳಿಯದಿದ್ದರೆ ಗೌಡರು ಸಿಎಂ ಆಗುತ್ತಿದ್ದರೆ? : ಡಿಕೆಶಿ