ಬಸವೇಶ್ವರ ದೇವಾಲಯದಲ್ಲಿ ವೈಭವದ ಕಾರ್ತಿಕ ಪೂಜೆ

KannadaprabhaNewsNetwork |  
Published : Nov 21, 2025, 01:15 AM IST
20ಎಚ್ಎಸ್ಎನ್5 :  | Kannada Prabha

ಸಾರಾಂಶ

ಹಾಸನ ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮವನ್ನು ಭಕ್ತಿಪೂರ್ಣವಾಗಿ ನೆರವೇರಿಸಲಾಯಿತು. ದೇವಾಲಯವನ್ನು ಹೂವಿನ ಅಲಂಕಾರ ಹಾಗೂ ವಿದ್ಯುತ್ ಅಲಂಕಾರದಲ್ಲಿ ಸಿಂಗರಿಸಲಾಗಿದ್ದು, ಶ್ರೀ ಬಸವಣ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ನಿವೃತ್ತ ಎಂಜಿನಿಯರ್ ಮಂಜುನಾಥ್, ನಾಗರಾಜ್ ಕೊಡ್ಲಪೇಟೆ, ಕೀರ್ತಿಕುಮಾರ್ ಹಾಗೂ ಮಾಸ್ಟರ್ ಕೆ.ಎಸ್. ಜಗದೀಶ್ ಮೊದಲಾದವರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.

ಹಾಸನ: ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮವನ್ನು ಭಕ್ತಿಪೂರ್ಣವಾಗಿ ನೆರವೇರಿಸಲಾಯಿತು.ದೇವಾಲಯವನ್ನು ಹೂವಿನ ಅಲಂಕಾರ ಹಾಗೂ ವಿದ್ಯುತ್ ಅಲಂಕಾರದಲ್ಲಿ ಸಿಂಗರಿಸಲಾಗಿದ್ದು, ಶ್ರೀ ಬಸವಣ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಂಘದ ಅಧ್ಯಕ್ಷ ಬಿ.ಪಿ. ಐಸಾಮಿಗೌಡ ಅಲೂರು ತಾ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಚಿಕ್ಕ ಕಣಾಗಾಲು ಅಜೀತ್, ಮಯೂರಿ ಲೋಕೇಶ್, ಸಾವಿತ್ರಿ ವಿಜಯಕುಮಾರ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷೆ ಶೋಭಾ ಮಹೇಶ್ ಹಾಗೂ ನಿರ್ದೇಶಕರಾದ ಭಾಮೀನಿ ಮಂಜುನಾಥ್, ವೀಣಾ ದೇವರಾಜ್ ಸೇರಿ ಹಲವು ಮುಖಂಡರು ಪಾಲ್ಗೊಂಡಿದ್ದರು. ನಿವೃತ್ತ ಎಂಜಿನಿಯರ್ ಮಂಜುನಾಥ್, ನಾಗರಾಜ್ ಕೊಡ್ಲಪೇಟೆ, ಕೀರ್ತಿಕುಮಾರ್ ಹಾಗೂ ಮಾಸ್ಟರ್ ಕೆ.ಎಸ್. ಜಗದೀಶ್ ಮೊದಲಾದವರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರಳು ಮಾಫಿಯಾದಿಂದ ಶಾಸಕಿ ಕರೆಮ್ಮಗೆ ಬೆದರಿಕೆ
ಉಡುಪಿಯ ಕೃಷ್ಣಮಠದಲ್ಲಿ ಇನ್ನು ಭಕ್ತರಿಗೆ ಕಟ್ಟುನಿಟ್ಟಿನ ನಿಯಮ ಜಾರಿ