ಮಲ್ಪೆ: ವಡಭಾಂಡೇಶ್ವರನಿಗೆ ವೈಭವದ ಹೊರೆಕಾಣಿಕೆ

KannadaprabhaNewsNetwork |  
Published : Mar 21, 2024, 01:06 AM IST
ಬಲರಾಮ20 | Kannada Prabha

ಸಾರಾಂಶ

ಹಸಿರು ಹೊರೆಕಾಣಿಕೆ ಮೆರವಣಿಗೆ ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ ಆರಂಭಗೊಂಡು ವಡಭಾಂಡ ದೇವಸ್ಥಾನಕ್ಕೆ ಬಹಳ ವೈಭವಯುತವಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಲ್ಪೆಇಲ್ಲಿನ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಮಾ.19ರಿಂದ 29ರವರೆಗೆ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಂಗಳವಾರ ಹಸಿರು ಹೊರೆಕಾಣಿಕೆ ಮೆರವಣಿಗೆಯು ಕೊಡವೂರು ಶಂಕರನಾರಾಯಣ ದೇವಸ್ಥಾನದಿಂದ ಆರಂಭಗೊಂಡು ವಡಭಾಂಡ ದೇವಸ್ಥಾನಕ್ಕೆ ಬಹಳ ವೈಭವಯುತವಾಗಿ ನಡೆಯಿತು.

ಕೊಡವೂರು ದೇವಸ್ಥಾನದಲ್ಲಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ಶ್ರೀಪಾದರು ಮೆರವಣಿಗೆಗೆ ಚಾಲನೆ ನೀಡಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ವಿವಿಧ ಟ್ಯಾಬ್ಲೋಗಳಿಗೆ ಚಾಲನೆ ನೀಡಿದರು.

ಭಕ್ತವೃಂದ ವಡಭಾಂಡೇಶ್ವರ ವತಿಯಿಂದ ಕೊಡುಗೆಯಾಗಿ ನೀಡಲಾದ ದೇವರಿಗೆ ರಜತ ಪ್ರಭಾವಳಿ, ಪಾಣಿಪೀಠ ಹಾಗೂ ಗರ್ಭಗುಡಿ ದ್ವಾರದ ರಜತ ಕವಚವನ್ನು ಈ ಮೆರವಣಿಗೆಯಲ್ಲಿ ತಂದೊಪ್ಪಿಲಾಯಿತು. ಮೆರವಣಿಗೆಯಲ್ಲಿ ಪೂರ್ಣ ಕುಂಭ, 101 ಚೆಂಡೆ, ಕೀಲು ಕುದುರೆ, ಕೊಂಬು, ವಾದ್ಯ, ಕುಣಿತ ಭಜನೆ, ತಟ್ಟಿರಾಯ, ನಾಸಿಕ್ ಬ್ಯಾಂಡ್, ಯಕ್ಷಗಾನ, ವಿವಿಧ ವೇಷಭೂಷಣಗಳು, ಟ್ಯಾಬ್ಲೋಗಳು, 70ಕ್ಕೂ ಮಿಕ್ಕಿ ಹೊರೆ ಕಾಣಿಕೆಯ ವಾಹನಗಳು, 4 ಸಾವಿರಕ್ಕೂ ಹೆಚ್ಚು ಭಕ್ತರು ಮೆರವಣಿಗೆಯಲ್ಲಿ ಸಾಗಿ ಬಂದು ದೇವಸ್ಥಾನ ತಲುಪಿದರು.

ದೇವಸ್ಥಾನದ ಪ್ರಧಾನ ತಂತ್ರಿ ಸುಬ್ರಹ್ಮಣ್ಯ ತಂತ್ರಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್, ಅಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರ. ಕಾರ್ಯದರ್ಶಿ ಶಶಿಧರ ಎಂ. ಅಮೀನ್, ಅನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್, ಪವಿತ್ರಪಾಣಿ ಶಂಕರನಾರಾಯಣ ಐತಾಳ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಗೌರವಾಧ್ಯಕ್ಷ ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಉಪಾಧ್ಯಕ್ಷ ರಮೇಶ್ ಕೋಟ್ಯಾನ್, ಪ್ರ. ಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು, ಕಾರ್ಯದರ್ಶಿ ಜನಾರ್ದನ ಕೊಡವೂರು, ಪ್ರಮುಖರಾದ ತೋಟದಮನೆ ದಿವಾಕರ ಶೆಟ್ಟಿ, ನಾಗರಾಜ್ ಸುವರ್ಣ, ಕಿಶೋರ್ ಡಿ. ಸುವರ್ಣ, ಸುಭಾಸ್ ಮೆಂಡನ್, ರಾಮಚಂದ್ರ ಕುಂದರ್, ಹಿರಿಯಣ್ಣ ಕಿದಿಯೂರು, ಈಶ್ವರ್ ಸಾಲ್ಯಾನ್, ಶಶಿಧರ್ ಕುಂದರ್, ದಿನೇಶ್ ಸುವರ್ಣ, ಶರತ್ ಕುಮಾರ್, ಶೇಖರ್ ಜಿ. ಕೋಟ್ಯಾನ್, ಡಾ. ವಿಜಯೇಂದ್ರ, ದಯಾನಂದ ಕೆ. ಸುವರ್ಣ, ಮೀನಾಕ್ಷಿ ಮಾಧವ, ದಯಕರ್ ವಿ. ಸುವರ್ಣ, ಜ್ಞಾನೇಶ್ವರ್ ಕೋಟ್ಯಾನ್, ವಿಜಯ್ ಕೊಡವೂರು, ವಿಜಯ್ ಕುಂದರ್, ಪಾಂಡುರಂಗ ಮಲ್ಪೆ, ಬಾಲಕೃಷ್ಣ ಮೆಂಡನ್, ಧನಂಜಯ್ ಕಾಂಚನ್, ರತ್ನಾಕರ್ ಸಾಲ್ಯಾನ್, ವಿಜಯ ಸುವರ್ಣ, ಅಶೋಕ್ ಕೋಟ್ಯಾನ್, ಅಭಿವೃದ್ಧಿ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಭಕ್ತವೃಂದ, ಗುರಿಕಾರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!