ಬ್ರಹ್ಮಾವರ: ಇಲ್ಲಿನ ಜಿ. ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್‌ನಲ್ಲಿ ಶುಕ್ರವಾರ ಚಿಣ್ಣರ ಕ್ರೀಡಾಕೂಟ ಆಯೋಜಿಸಲಾಗಿತ್ತು. ರಾಷ್ಟ್ರಮಟ್ಟದ ಚೆಸ್ ಆಟಗಾರ ಪೂರ್ಣೇಶ್ ಅವರು ಮುಖ್ಯ ಅತಿಥಿಯಾಗಿ ಕ್ರೀಡಾಕೂಟ ಉದ್ಘಾಟಿಸಿದರು.ಅವರು ಮಾತನಾಡಿ, ಜಿ.ಎಂ. ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಕ್ರೀಡಾಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿರುತ್ತಾರೆ. ಪೋಷಕರು ತಮ್ಮ ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಶಾಲಾ ಧ್ವಜವನ್ನು ಅರಳಿಸಿ ಮಾತನಾಡಿ, ಕ್ರೀಡೆಗಳಿಂದ ಸಾಮಾಜಿಕ, ನೈತಿಕ ಮೌಲ್ಯಗಳ ಕಲಿಕೆಯಾಗುತ್ತದೆ ಜೊತೆಗೆ ಬದುಕಿಗೆ ಬೇಕಾದ ಜೀವನ ಮೌಲ್ಯಗಳು ವೃದ್ಧಿಯಾಗುತ್ತದೆ ಎಂದರು. ಪೋಷಕರಿಗೆ ಚುಟುಕು ಮನೋರಂಜನ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಜೇತ ಪುಟಾಣಿ ಕ್ರೀಡಾಳುಗಳಿಗೆ ಬಹುಮಾನ ವಿತರಿಸಲಾಯಿತು. ಜಿ ಎಮ್ ಛತ್ರಛಾಯದಲ್ಲಿರುವ ಪ್ರಿ ನರ್ಸರಿಯಿಂದ ಎರಡನೇ ತರಗತಿಯವರೆಗಿನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಅತ್ಯಂತ ಆಸಕ್ತಿಯಿಂದ ಪಾಲ್ಗೊಂಡು ಕ್ರೀಡಾಸ್ಫೂರ್ತಿಯನ್ನು ಮೆರೆದರು. ವಿದ್ಯಾ ಹೌಸ್ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಕ್ರೀಡಾಕೂಟದಲ್ಲಿ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.