ನಾಳೆ ಗೋ ಬ್ಯಾಕ್ ಗವರ್ನರ್ ಚಳವಳಿ

KannadaprabhaNewsNetwork |  
Published : Sep 05, 2024, 12:35 AM ISTUpdated : Sep 05, 2024, 12:36 AM IST
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮುಖಂಡರು ಸೆ. 6ರಂದು ರಾಜ್ಯಪಾಲರ ವಿರುದ್ಧ ಹಮ್ಮಿಕೊಂಡಿರುವ ಹೋರಾಟ ಕುರಿತು ತಿಳಿಸಿದರು. | Kannada Prabha

ಸಾರಾಂಶ

ಸೆ.6ರಂದು ಬಳ್ಳಾರಿಯಲ್ಲಿ ಗೋ ಬ್ಯಾಕ್ ಗವರ್ನರ್ ಚಳವಳಿ, ಕಪ್ಪು ಪಟ್ಟಿ, ಬಾವುಟ ಪ್ರದರ್ಶನ ನಡೆಸಿ ಪ್ರತಿಭಟಿಸಲಾಗುವುದು.

ಬಳ್ಳಾರಿ: ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರ ಪಕ್ಷಪಾತಿ ಧೋರಣೆ ಖಂಡಿಸಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಸಮಿತಿಯಿಂದ ಸೆ.6ರಂದು ಬಳ್ಳಾರಿಯಲ್ಲಿ ಗೋ ಬ್ಯಾಕ್ ಗವರ್ನರ್ ಚಳವಳಿ, ಕಪ್ಪು ಪಟ್ಟಿ, ಬಾವುಟ ಪ್ರದರ್ಶನ ನಡೆಸಿ ಪ್ರತಿಭಟಿಸಲಾಗುವುದು ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಗೌರವಾಧ್ಯಕ್ಷ ಎ. ಮಾನಯ್ಯ ಹಾಗೂ ಜಿಲ್ಲಾಧ್ಯಕ್ಷ ಡಾ. ಗಾದಿಲಿಂಗನಗೌಡ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡರು, ಜಿಲ್ಲೆಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ಸೆ.6ರಂದು ನಡೆಯಲಿದೆ. ಅಂದು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.

ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ. ಅವರ ನಡೆಯಿಂದಾಗಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ರಾಜ್ಯಪಾಲರು ಕೇಂದ್ರದ ಏಜೆಂಟ್ ರೀತಿಯಲ್ಲಿ ವರ್ತಿಸದೇ ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿ ಕಪ್ಪುಪಟ್ಟಿ ಪ್ರದರ್ಶನ ನಡೆಸಲಿದ್ದೇವೆ ಎಂದರು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯದ ಆದೇಶ ಏನೇ ಬಂದರೂ ಸ್ವಾಗತಿಸುತ್ತೇವೆ. ಆದರೆ ನಮ್ಮ ಪ್ರತಿಭಟನೆಯ ಉದ್ದೇಶ ಇರುವುದು ರಾಜ್ಯಪಾಲರ ಧೋರಣೆಯ ವಿರುದ್ಧ ಎಂದು ಹೇಳಿದ ಎ. ಮಾನಯ್ಯ ಹಾಗೂ ಡಾ. ಗಾದಿಲಿಂಗನಗೌಡ, ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ದೂರಿದರು.

ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ನಾಯಕರ ಮೇಲೆ ಅನಗತ್ಯ ಆರೋಪ ಮಾಡುವ ಕುತಂತ್ರ ನಡೆಸಿದ್ದಾರೆ. ಕೇಂದ್ರ ಸರ್ಕಾರ ದೇಶದ ವಿವಿಧ ರಾಜ್ಯಗಳಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ. ಕೇಂದ್ರ ಸರ್ಕಾರದ ಈ ಪ್ರಜಾಪ್ರಭುತ್ವ ವಿರೋಧಿ ನಿಲುವುಗಳನ್ನು ಜನರಿಗೆ ತಿಳಿಸುವ ಪ್ರಯತ್ನ ನಮ್ಮ ಹೋರಾಟದ ಮೂಲಕ ಮಾಡುತ್ತಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಒಕ್ಕೂಟದ ವಿ.ಎಸ್. ಶಿವಶಂಕರ್ ಹೇಳಿದರು.

ಅನುಮತಿಗಾಗಿ ತಮ್ಮ ಕಚೇರಿಗೆ ಬಂದ ಕಡತಗಳ ಪೈಕಿ ರಾಜ್ಯಪಾಲರು ಮುಡಾ ಹಗರಣದ ವಿಚಾರಕ್ಕೆ ತಕ್ಷಣ ಸ್ಪಂದಿಸಿದರು. ಆದರೆ, ಅದೇ ರೀತಿ ಬಿಜೆಪಿಯ ಹಲವು ನಾಯಕರ ಕಡತಗಳು ಬಾಕಿ ಇರುವುದು ರಾಜ್ಯಪಾಲರ ಪಕ್ಷಪಾತಿತನ ತೋರಿಸುತ್ತದೆ ಎಂದು ಶಿವಶಂಕರ್ ಆರೋಪಿಸಿದರು.

ಮಹಾನಗರ ಪಾಲಿಕೆಯ ಸದಸ್ಯ ಪಿ.ಗಾದೆಪ್ಪ, ಕಾಂಗ್ರೆಸ್ ಮುಖಂಡ ಪಿ.ಜಗನ್ನಾಥ, ಮೊಹಮ್ಮದ್ ರಫೀಕ್, ಕೆ.ಎರಿಸ್ವಾಮಿ, ಕೆ.ಕೆರಕೋಡಪ್ಪ, ಗಾದಿಲಿಂಗಪ್ಪ, ಕಪ್ಪಗಲ್ಲು ಓಂಕಾರಪ್ಪ, ಚಂದ್ರು, ರಾಮು ನಾಯ್ಕ, ಜೋಗಿನ್ ವಿಜಯ್, ಎಲ್. ಮಾರೆಣ್ಣ, ಕೆ. ಮಲ್ಲಿಕಾರ್ಜುನ, ಧನಂಜಯ ಹಮಲ್, ಸಂಗನಕಲ್ಲು ವಿಜಯಕುಮಾರ್, ಬಿ.ಎಂ. ಪಾಟೀಲ್, ಇಮಾಮ್ ಗೋಡೆಕಾರ ಸುದ್ದಿಗೋಷ್ಠಿಯಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ