ನೆರೆ ಪ್ರದೇಶಗಳಿಗೆ ಕೂಡಲೇ ಹೊರಡಿ : ಸಚಿವರಿಗೆ ಸಿಎಂ

KannadaprabhaNewsNetwork |  
Published : May 29, 2025, 01:32 AM ISTUpdated : May 29, 2025, 05:45 AM IST
Karnataka Chief Minister Siddaramaiah (File Photo/ANI)

ಸಾರಾಂಶ

ಅವಧಿಗೆ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.

 ಬೆಂಗಳೂರು : ಅವಧಿಗೆ ಮೊದಲೇ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ.

ಅಲ್ಲದೆ, ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಮೇ 30 ಹಾಗೂ 31 ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಬುಧವಾರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ. ಜೋರು ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸುವಂತೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ಮತ್ತು ತೀವ್ರ ನಿಗಾ ವಹಿಸಿ ತಕ್ಷಣ ತಕ್ಷಣ ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 170 ತಾಲೂಕುಪ್ರವಾಹ ಪೀಡಿತರಾಜ್ಯದಲ್ಲಿ 170 ತಾಲೂಕುಗಳನ್ನು ಪ್ರವಾಹ ಹಾಗೂ ಭೂಕುಸಿತಕ್ಕೆ ಗುರಿಯಾಗುವ ತಾಲೂಕುಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತೆಯಾಗಿ 2,296 ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 201 ಸ್ಥಳಗಳನ್ನು ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಲಾಗಿದೆ. ಮಳೆಯಿಂದ ಹಾನಿಗೊಂಡ ಮನೆಗಳಿಗೆ ಸಹಾಯಧನ ನೀಡಲಾಗಿದೆ.

 1,385 ಮನೆಗೆ ಭಾಗಶಃ ಹಾನಿ

2025ರ ಮೇ-26 ರವರೆಗೆ ಮಳೆಯಿಂದಾಗಿ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದರಲ್ಲಿ ಶೇ.99% ರಷ್ಟು ಆರ್ಥಿಕ ಸಹಾಯ ಧನವನ್ನು ಪಾವತಿಸಲಾಗಿದೆ. 2025ರ ಮೇ 26ರ ವೇಳೆಗೆ ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪಿ.ಡಿ.ಖಾತೆಯಲ್ಲಿ ರೂ.973.51 ಕೋಟಿ ರು. ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿಎಂ ಕ್ರಮಗಳೇನು?

- ಇತ್ತೀಚೆಗೆ ಮುಂಗಾರು ಪೂರ್ವ, ಮುಂಗಾರು ಪ್ರವೇಶ ನಂತರ ರಾಜ್ಯದಲ್ಲಿ ಭಾರಿ ಮಳೆ- ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ ಖುದ್ದು ನೆರೆ ಹಾನಿಯ ಅವಲೋಕನ

- ಪ್ರವಾಹ ಸ್ಥಳದಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುವಂತೆ ಸೂಚನೆ

- ಮೇ 30, 31ಕ್ಕೆ ಜಿಲ್ಲಾಧಿಕಾರಿಗಳ ಜತೆ ಸಭೆಗೆ ನಡೆಸಲು ಮುಖ್ಯಮಂತ್ರಿ ನಿರ್ಧಾರ

PREV
Read more Articles on

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ