ಕೊಲ್ಲೂರು ಕ್ಷೇತ್ರಕ್ಕೆ ಗೋವಾ ಸಿಎಂ ಡಾ.ಸಾವಂತ್ ಭೇಟಿ

KannadaprabhaNewsNetwork |  
Published : Feb 14, 2025, 12:30 AM IST
ಕುಂದಾಪುರ ಸಮೀಪದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ದೇವರ ದರ್ಶನ ಪಡೆದುಕೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕ ಗುರುರಾಜ್ ಗಂಟಿಹೊಳೆ ಇದ್ದರು. | Kannada Prabha

ಸಾರಾಂಶ

ಜಗತ್ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರಜಗತ್ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಗೋವಾದಿಂದ ಬೈಂದೂರಿಗೆ ರೈಲಿನಲ್ಲಿ ಮುಂಜಾನೆ ಆಗಮಿಸಿದ ಅವರನ್ನು ಶಾಸಕ ಗುರುರಾಜ್ ಗಂಟಿಹೊಳೆ ಬರಮಾಡಿಕೊಂಡರು‌. ಬಳಿಕ ಕೊಲ್ಲೂರಿಗೆ ತೆರಳಿದ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ಸಾವಂತ್ ಅವರಿಗೆ ಕ್ಷೇತ್ರದ ಅರ್ಚಕರಾದ ನರಸಿಂಹ ಭಟ್ ಹಾಗೂ ಸುರೇಶ್ ಭಟ್ ನೇತೃತ್ವದಲ್ಲಿ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ಶ್ರೀ ದೇವಿಯ ದರ್ಶನ ಪಡೆದುಕೊಂಡ ಬಳಿಕ, ಋತ್ವಿಜರ ನೇತೃತ್ವದಲ್ಲಿ ನಡೆದ ಚಂಡಿಕಾ ಹೋಮ ಹಾಗೂ ಪೂರ್ಣಾಹುತಿಯಲ್ಲಿ ಪಾಲ್ಗೊಂಡರು.

ಶಾಸಕ ಗುರುರಾಜ್ ಗಂಟಿಹೊಳೆ, ಕೊಲ್ಲೂರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂತೋಷ್ ಭಟ್ ಮುಂತಾದವರಿದ್ದರು.ಪೂರ್ಣಾಹುತಿಯ ನಂತರ ದೇವಸ್ಥಾನದ ವತಿಯಿಂದ ಮುಖ್ಯಮಂತ್ರಿಗಳನ್ನು ಗೌರವಿಸಲಾಯಿತು. ಪ್ರಸಾದ ಸ್ವೀಕರಿಸಿದ ಅವರು ಕೊಲ್ಲೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿನ್ನೇನಹಳ್ಳಿ ಸೊಸೈಟಿಗೆ ಯುವ ನಾಯಕರ ಆಯ್ಕೆ
ಗಂಗಕಲ್ಯಾಣ ಯೋಜನೆ ಬಡ ರೈತರಿಗೆ ಅನುಕೂಲ