ಎಲ್ಲರಿಗೂ ಮೂಲ ಸೌಲಭ್ಯ ಒದಗಿಸುವುದೇ ಗುರಿ: ಶಾಸಕ

KannadaprabhaNewsNetwork |  
Published : Jun 06, 2026, 01:15 AM IST
ಸಿಕೆಬಿ-2 ನಮ್ಮ ಊರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ವಕ್ರಹಳ್ಳಿ ಗ್ರಾಮದಲ್ಲಿ ಶಾಸಕ ಪ್ರದೀಪ್ ಈಶ್ವರ್  ಜನತೆಯ ಅಹವಾಲು ಆಲಿಸಿದರು   | Kannada Prabha

ಸಾರಾಂಶ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಕ್ಷೇತ್ರದ ಎಲ್ಲಾ ವರ್ಗದ ಜನರೆ ನನ್ನ ಭವಿಷ್ಯವಾಗಿದ್ದು ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ನನ್ನ ಗುರಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಕ್ಷೇತ್ರದ ಎಲ್ಲಾ ವರ್ಗದ ಜನರೆ ನನ್ನ ಭವಿಷ್ಯವಾಗಿದ್ದು ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ನನ್ನ ಗುರಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಮ್ಮ ಊರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಶುಕ್ರವಾರ ತಾಲೂಕಿನ ಕನ್ನಗುಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಮಿಲು ಗುರ್ಕಿ, ವಕ್ರಹಳ್ಳಿ ಮತ್ತು ಜೀಗಾನಹಳ್ಳಿ ಗ್ರಾಮಗಳಿಗೆ 36 ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಗ್ರಾಮದ ಜನತೆಯ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಂಬೇಡ್ಕರ್ ರವರ ಸಂವಿಧಾನದಿಂದ ಸಾಮಾನ್ಯ ಹುಡುಗನಾದ ನಾನು ಶಾಸಕನಾಗಿದ್ದೇನೆ. ಅವರ ಆಶಯಗಳಿಗೆ ಅನುಗುಣವಾಗಿ ದೀನ ದಲಿತರ, ಬಡವರ ಸೇವೆಯನ್ನು ನಿಸ್ವಾರ್ಥದಿಂದ ಮಾಡುತ್ತೇನೆ ಎಂದರು.

ಕ್ಷೇತ್ರದ ಮೂಲೆ ಮೂಲೆಗಳ ಕುಗ್ರಾಮಗಳಿಗೆ ಭೇಟಿ ನೀಡುವುದರಿಂದ ಅಲ್ಲಿನ ಜನತೆಯ ಸಮಸ್ಯೆ ಅರಿತು ಅವರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಾಧ್ಯವಾಗಿದೆ. ನನ್ನ ಕ್ಷೇತ್ರ ವ್ಯಾಪ್ತಿಯ 366 ಹಳ್ಳಿಗಳ ಪೈಕಿ ಇದುವರೆಗೂ ಸುಮಾರು 200 ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನತೆಯ ಸಮಸ್ಯೆಗಳ ಬಗ್ಗೆ ತಿಳಿದಿದ್ದೇನೆ ಮತ್ತು ಸಾಧ್ಯವಾದಷ್ಟೂ ಪರಿಹಾರ ನೀಡಿದ್ದು, ಉಳಿದ ಸಮಸ್ಯೆಗಳ ಪರಿಹಾರಕ್ಕೆ ಕಾಲಾವಕಾಶ ನೀಡಿದ್ದೇನೆ. ನಾನು ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನತೆಗೆ ಮಾಸಿಕ 15 ಲಕ್ಷ ರು. ವೆಚ್ಚದಲ್ಲಿ 10 ಉಚಿತ ಆಂಬ್ಯುಲೆನ್ಸ್ ಸೇವೆ ನೀಡುತ್ತಿದ್ದೇನೆ. 70 ಸಾವಿರ ಮಹಿಳೆಯರಿಗೆ ಮೂರು ವರ್ಷ ವರಮಹಾಲಕ್ಷ್ಮೀ ಹಬ್ಬಕ್ಕೆ ಸೀರೆ ವಿತರಣೆ, ಶಾಲಾ- ಕಾಲೇಜು ಮಕ್ಕಳಿಗೆ ವಿದ್ಯಾರ್ಥಿವೇತನ. ನನ್ನ ಕ್ಷೇತ್ರದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಸಿಇಟಿ, ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ ತರಬೇತಿ ಮತ್ತು ಪದವಿ ಪೊರೈಸಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಎಎಸ್,ಐಎಎಸ್,ಐಪಿಎಸ್,ಐಆರ್‌ಎಸ್ ಸೇರಿದಂತೆ ಎಲ್ಲಾ ತರಬೇತಿಗಳನ್ನು ವಸತಿ ಮತ್ತು ಊಟ ತಿಂಡಿಯೊಂದಿಗೆ ವ್ಯವಸ್ಥೆ ಮಾಡಿದ್ದು ಇದನ್ನು ಮುಂದುವರಿಸಲಾಗುವುದು. ಇದಕ್ಕೆ ವಾರ್ಷಿಕ ಸುಮಾರು 3 ರಿಂದ 4 ಕೋಟಿ ರು. ವೆಚ್ಚವಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ತಹಸೀಲ್ದಾರ್ ರಶ್ಮೀ, ತಾಪಂ ಕಾರ್ಯನಿರ್ವಹಕಾಧಿಕಾರಿ ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುಳ, ಪಿಎಸ್ಐ ಗುಣವತಿ, ಪಿಡಿಓ ಮದ್ದಿರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗಭೂಷಣ್, ರಕ್ಷಿತ್ ರೆಡ್ಡಿ, ಎಲ್ಲಾ 36 ಇಲಾಖೆಗಳ ಅಧಿಕಾರಿಗಳು, ಮುಖಂಡರಾದ ಅಡ್ಡಗಲ್ ಶ್ರೀಧರ್, ದಿಬ್ಬೂರು ಸುಬ್ಬರಾಯಪ್ಪ, ನಾಗೇಶ್, ನಾಗೇಶ್ ರೆಡ್ಡಿ, ಬೈರೇಶ್, ರಮೇಶ್ ಬಾಬು, ಉಮೇಶ್, ವಿನಯ್ ಬಂಗಾರಿ ಮತ್ತಿತರರು ಇದ್ದರು,

ಅಧಿಕಾರಕ್ಕಾಗಿ ರಾಜಕೀಯಕ್ಕೆ

ಬಂದಿಲ್ಲ,ಜನಸೇವೆ ನನ್ನ ಗುರಿಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ, ಕೊಡದಿದ್ದರೂ ಪರವಾಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆ ಮಾಡುವ ಉದ್ದೇಶದಿಂದ ಬಂದಿದ್ದೇನೆ ಎಂದರು. ನಾನು ಒಬಿಸಿ ಸಮುದಾಯದ ಯುವ ನಾಯಕ. ರಾಜ್ಯದಲ್ಲಿ ಒಬಿಸಿ ಚಳವಳಿಯನ್ನು ಮತ್ತಷ್ಟು ಬಲಪಡಿಸುವುದು ನನ್ನ ಉದ್ದೇಶ. ಅಧಿಕಾರವೇ ಗುರಿಯಾಗಿದ್ದರೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಕೆಲಸ ಮಾಡುತ್ತಿರಲಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದರು. ಸಿಕೆಬಿ-2

ನಮ್ಮ ಊರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ವಕ್ರಹಳ್ಳಿ ಗ್ರಾಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಜನತೆಯ ಅಹವಾಲು ಆಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಮನವಿ
ಹಸಿರು, ಉಸಿರಿಗಾಗಿ ಪರಿಸರ ಉಳಿಸೋಣ: ಶಾಸಕ ಡಿ.ಜಿ.ಶಾಂತನಗೌಡ