ಮನೆ ಎಂಬ ಮನದಲ್ಲಿ ಭಗವಂತ ಸದಾ ನೆಲೆ: ರಂಭಾಪುರಿ ಸ್ವಾಮೀಜಿ

KannadaprabhaNewsNetwork |  
Published : Apr 20, 2026, 01:45 AM IST
19 HRR. 02 & 02Aಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಕರಿಯಮ್ಮದೇವಿ ದೇವಸ್ಥಾನದ ಕಳಸಾರೋಹಣ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದಲ್ಲಿ ಬಾಳೆಹೊನ್ನೂರಿನ ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನೇ ಇಟ್ಟು ಕಳಿಸಿರುತ್ತಾನೆ. ಆತನ ಅರಿವು ಮತ್ತು ಸಾಕ್ಷಾತ್ಕಾರ ಪಡೆಯಲು ಭಕ್ತಿಯೊಂದೇ ಸುಲಭ ಮಾರ್ಗ. ಮನೆ ಎಂಬ ಮನದಲ್ಲಿ ನೆಲೆಸಿರುವ ಪರಮಾತ್ಮನನ್ನು ಅರಿಯದೇ ಎಲ್ಲೆಲ್ಲೋ ಹುಡುಕಾಡುತ್ತಿರುವುದು ಒಳ್ಳೆಯದಲ್ಲವೆಂದು ಬಾಳೆಹೊನ್ನೂರಿನ ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀ ಅಭಿಪ್ರಾಯಪಟ್ಟಿದ್ದಾರೆ.

ಹರಿಹರ: ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನೇ ಇಟ್ಟು ಕಳಿಸಿರುತ್ತಾನೆ. ಆತನ ಅರಿವು ಮತ್ತು ಸಾಕ್ಷಾತ್ಕಾರ ಪಡೆಯಲು ಭಕ್ತಿಯೊಂದೇ ಸುಲಭ ಮಾರ್ಗ. ಮನೆ ಎಂಬ ಮನದಲ್ಲಿ ನೆಲೆಸಿರುವ ಪರಮಾತ್ಮನನ್ನು ಅರಿಯದೇ ಎಲ್ಲೆಲ್ಲೋ ಹುಡುಕಾಡುತ್ತಿರುವುದು ಒಳ್ಳೆಯದಲ್ಲವೆಂದು ಬಾಳೆಹೊನ್ನೂರಿನ ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀ ಅಭಿಪ್ರಾಯಪಟ್ಟರು.

ಭಾನುವಾರ ತಾಲೂಕಿನ ದೊಗ್ಗಳ್ಳಿ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಕಳಸಾರೋಹಣ ಅಂಗವಾಗಿ ಜರುಗಿದ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಮನುಷ್ಯನ ಬುದ್ಧಿಶಕ್ತಿಗೆ ನಿಲುಕದ ವಿಜ್ಞಾನಕ್ಕೆ ಮೀರಿದ ಅಗೋಚರ ಅದ್ಭುತ ಶಕ್ತಿಯೇ ದೇವರು. ವೀರಶೈವ ಧರ್ಮದಲ್ಲಿ ಶಿವನಷ್ಟೇ ಶಕ್ತಿಯೂ ಮುಖ್ಯ. ಶಕ್ತಿಯುಕ್ತನಾದ ಪರಮಾತ್ಮನ ಆರಾಧನೆ ನಮ್ಮೆಲ್ಲರ ಬಾಳಿಗೆ ಶಾಂತಿ- ನೆಮ್ಮದಿ ಉಂಟು ಮಾಡುತ್ತವೆ. ದೊಗ್ಗಳ್ಳಿ ಗ್ರಾಮಸ್ಥರು ಗ್ರಾಮದೇವತೆ ಶ್ರೀ ಕರಿಯಮ್ಮದೇವಿ ದೇವಸ್ಥಾನಕ್ಕೆ ಗೋಪುರ ನಿರ್ಮಿಸಿ ಇಂದು ಕಳಸಾರೋಹಣ ನೆರವೇರಿಸುತ್ತಿರುವುದು ತಮಗೆ ಅಪಾರ ಸಂತೋಷ ತಂದಿದೆ ಎಂದರು.

ಸಮಾರಂಭದ ನೇತೃತ್ವ ವಹಿಸಿದ್ದ ಅವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಶ್ರೀ ಮಾತನಾಡಿ, ಧರ್ಮವೇ ಜೀವನದ ಜೀವಾಳ. ಮನಕ್ಕೆ ಶಾಂತಿ, ಆತ್ಮಕ್ಕೆ ಆನಂದ ಕೊಡುವುದು ಧರ್ಮ. ಸಕಲ ಧರ್ಮಕ್ಕೂ ದಯೆ ಮತ್ತು ಮಾನವೀಯತೆ ಮುಕುಟಪ್ರಾಯ. ಸಜ್ಜನರ ಜೊತೆಗಿದ್ದು ಸತ್ಪುರುಷರ ಹಾದಿಯಲ್ಲಿ ಸಾಗಿದಾಗ ಸುಖ- ಶಾಂತಿ ಪ್ರಾಪ್ತವಾಗುತ್ತದೆ ಎಂದರು.

ಉಪದೇಶಾಮೃತ ನೀಡಿದ ಕಡೇನಂದಿಹಳ್ಳಿ ರೇವಣಸಿದ್ಧ ಶಿವಾಚಾರ್ಯ ಸ್ವಾಮಿಗಳು, ಹಾರನಹಳ್ಳಿ ರಾಮಲಿಂಗೇಶ್ವರ ಮಠದ ವಿಶ್ವಾರಾಧ್ಯ ಶಿವಾಚಾರ್ಯ ಶ್ರೀ ಮಾತನಾಡಿದರು. ರಾಮಘಟ್ಟ ಪುರವರ್ಗ ಮಠದ ರೇವಣಸಿದ್ಧ ಶಿವಾಚಾರ್ಯ ಶ್ರೀ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನಾಗವಂದ ಶಿವಯೋಗಿ ಶಿವಾನಂದ ಶಿವಾಚಾರ್ಯರು ಉಪಸ್ಥಿತರಿದ್ದರು. ಚಿರಸ್ಥಹಳ್ಳಿ ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ ನಿರೂಪಿಸಿದರು.

ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಶ್ರೀ ರಂಭಾಪುರಿ ಶ್ರೀ ಅವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ನೆರವೇರಿತು. ನಂತರ ಗೋಪುರಕ್ಕೆ ಕಳಸಾರೋಹಣ ನೆರವೇರಿಸಿ, ಶ್ರೀಗಳು ಭಕ್ತ ಸಮುದಾಯಕ್ಕೆ ಶುಭ ಹಾರೈಸಿದರು. ಅನ್ನ ದಾಸೋಹ ಜರುಗಿತು.

- - -

-19HRR.02 & 02A:

ಸಮಾರಂಭದಲ್ಲಿ ರಂಭಾಪುರಿ ಡಾ. ವೀರಸೋಮೇಶ್ವರ ಶ್ರೀ ಆಶೀರ್ವಚನ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ್ಞಾನಸಾಗರ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಉತ್ತಮ ಫಲಿತಾಂಶ
ಪಾರಂಪರಿಕ ಸ್ಥಳಗಳನ್ನು ಸಂರಕ್ಷಿಸುವುವಂತೆ ವಿದ್ಯಾರ್ಥಿಗಳಿಗೆ ಸಲಹೆ