ದೈವ ನಿಷ್ಠೆ, ಸ್ವಾಮಿ ನಿಷ್ಠೆ ಇದ್ದಲ್ಲಿ ಭಗವಂತನನ್ನು ಕಾಣಲು ಸಾಧ್ಯ: ಸಂಜೀವ ಮಠಂದೂರು

KannadaprabhaNewsNetwork |  
Published : Feb 26, 2024, 01:39 AM IST
ಫೋಟೋ: ೨೩ಪಿಟಿಆರ್-ಬನ್ನೂರುಬನ್ನೂರು ಗ್ರಾಮದ ದೈಯರ ಮಾಡ ನಡಿಮಾರುನಲ್ಲಿ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಿತು. | Kannada Prabha

ಸಾರಾಂಶ

ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದ ಬಳಿಯ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಗುರುವಾರ ನಡೆದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ದೈವ ನಿಷ್ಠೆ, ಸ್ವಾಮಿ ನಿಷ್ಠೆ ಇದ್ದಲ್ಲಿ ಖಂಡಿತಾ ಭಗವಂತನನ್ನು ಕಾಣಲು ಸಾಧ್ಯ. ಈ ಭಾಗದಲ್ಲಿ ದೈವದ ಮಂದಿರ ನಿರ್ಮಾಣ ಮಾಡುವ ಮೂಲಕ ನೂರಾರು ವರ್ಷಗಳ ಹಿರಿಯರ ಭಾವನೆ ನಂಬಿಕೆಯನ್ನು ಮತ್ತೊಮ್ಮೆ ಸಮಾಜಕ್ಕೆ ಈಗಿನ ಪೀಳಿಗೆ ತೋರಿಸುವ ಮೂಲಕ ನಾವು ಕೂಡಾ ಇತಿಹಾಸ ನಿರ್ಮಾಣ ಮಾಡುವ ಕೆಲಸ ನಡೆದಿದೆ. ಮುಂದಿನ ದಿನ ಬನ್ನೂರು ಪವಿತ್ರ ಕ್ಷೇತ್ರವಾಗಲಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ದೈಯರ ಮಾಡ ನಡಿಮಾರು ಮತ್ತು ಆನೆಮಜಲು ನ್ಯಾಯಾಲಯದ ಸಂಕೀರ್ಣದ ಬಳಿಯ ಶ್ರೀ ಇಷ್ಟದೇವತೆ, ಅಣ್ಣಪ್ಪ ಪಂಜುರ್ಲಿ, ರಕ್ತೇಶ್ವರಿ ಸಾನಿಧ್ಯದಲ್ಲಿ ಗುರುವಾರ ನಡೆದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ಪ್ರಸ್ತುತ ಧಾರ್ಮಿಕತೆ ಬೆಳೆಯುತ್ತಿದೆ. ಮಹಾಲಿಂಗೇಶ್ವರ ದೇವರ ಅಷ್ಟಮಂಗಲ ಪ್ರಶ್ನೆ ಚಿಂತನೆಯಲ್ಲೂ ಈ ಭಾಗದ ವಿಚಾರ ಬಂದಿತ್ತು. ಇವತ್ತು ಧಾರ್ಮಿಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಎಷ್ಟು ಕಷ್ಟ ಇದೆಯೋ ಅದನ್ನು ನಿರ್ವಹಿಸಿ ಮುಂದಿನ ತಲೆಮಾರಿಗೆ ಮುಟ್ಟಿಸುವುದು ನಮ್ಮ ಕೆಲಸವಾಗಿದೆ. ಧಾರ್ಮಿಕ ಕೇಂದ್ರಗಳು ಕೇವಲ ಪೂಜೆ ಪುರಸ್ಕಾರ ಮಾತ್ರ ಸೀಮಿತವಾಗದೆ ಸಾಮಾಜಿಕ ಪರಿವರ್ತನೆಯ ಕೇಂದ್ರವಾಗಿ ಮೂಡಿ ಬರಬೇಕು. ಇಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ದಾರಿ ತೋರಿಸುವ ಕೆಲಸ ಆಗಬೇಕು. ಧರ್ಮ ಶಿಕ್ಷಣವನ್ನು ಮುಂದಿನ ತಲೆಮಾರಿಗೆ ತಲುಪಿಸಲು ಧಾರ್ಮಿಕ ಕೇಂದ್ರದಲ್ಲಿ ಧಾರ್ಮಿಕ ಶಿಕ್ಷಣವನ್ನು ಪ್ರಾರಂಭಿಸಬೇಕು ಎಂದರು.

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜಶೇಖರ್ ಜೈನ್ ನೀರ್ಪಾಜೆ ಮಾತನಾಡಿದರು. ಬನ್ನೂರು ಗ್ರಾ.ಪಂ ಅಧ್ಯಕ್ಷೆ ಸ್ಮಿತಾ ಎನ್. ನಗರಸಭಾ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮೌನೀಶ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ ವಂದಿಸಿದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ