ರಾಹುಲ್‌ ಅಪಪ್ರಚಾರ ನಡೆಸುವವರಿಗೆ ದೇವರಿಂದಲೇ ತಕ್ಕ ಉತ್ತರ: ರಮಾನಾಥ ರೈ

KannadaprabhaNewsNetwork |  
Published : Jul 23, 2024, 12:34 AM IST
ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ ನಡೆಸುವವರಿಗೆ ದೇವರಿಂದಲೇ ತಕ್ಕ ಉತ್ತರ ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮಾಜಿ ಸಚಿವ ರಮಾನಾಥ ರೈ | Kannada Prabha

ಸಾರಾಂಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಅವರ ಬಗ್ಗೆ ಮತ್ತು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಈ ಕುರಿತು ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಅವರ ಬಗ್ಗೆ ಮತ್ತು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿರುದ್ಧ ಹೇಳಿಕೆಯ ಬಗ್ಗೆ ಉಲ್ಲೇಖಿಸಿದ ಅವರು, ಸುಳ್ಳು ಹಾಗೂ ಅಪಪ್ರಚಾರಕ್ಕೆ ದೇವರು ತಕ್ಕ ಉತ್ತರ ನೀಡುತ್ತಾನೆ, ಸತ್ಯಕ್ಕೆ ಎಂದೆಂದಿಗೂ ಜಯ ಸಿಗಲಿದೆ ಎಂದರು.ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಹೇಳಿದ ವಿಚಾರ ಅಲ್ಲಿನ ಕಡತದಲ್ಲಿ ದಾಖಲಾಗಿವೆ. ಅವರು ಹೇಳಿದ ಮಾತುಗಳಲ್ಲಿ ಹಿಂದೂ ಧರ್ಮಕ್ಕೆ ಅವಮಾನ ಮಾಡುವ ಹೇಳಿಕೆಗಳಿಲ್ಲ, ಹಿಂದೂ ವಿರೋಧಿ ಮಾತಿಲ್ಲ. ತಪ್ಪಾಗಿ ಅರ್ಥೈಸಲಾಗಿದೆ. ಮತ್ತು ಕೆಲವರಿಂದ ನಾಯಕರ ವಿರುದ್ದ ಸುಳ್ಳು ಪ್ರಚಾರ ಮಾಡಲಾಗುತ್ತಿರುವುದು ಕಂಡು ಬಂದಿದ್ದು, ಧಾರ್ಮಿಕ ನೆಲೆಗಟ್ಟಿನ ಅಡಿಯಲ್ಲಿ ಸತ್ಯಮೇವ ಜಯತೇ ಎಂಬ ದೃಷ್ಟಿಯಿಂದ ಸತ್ಯವನ್ನು ಪ್ರತಿಪಾದಿಸುವ ನಿಟ್ಟಿನಲ್ಲಿ ದೇವಸ್ಥಾನದ ಸ್ಥಳದಲ್ಲಿ ನಿಂತು ನಾನು ಈ ಹೇಳಿಕೆ ನೀಡುತ್ತಿದ್ದೇನೆ ಎಂದರು.ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ನಿಯೋಜಿತ ಅಧ್ಯಕ್ಷರಾದ ಚಂದ್ರಶೇಖರ ಭಂಡಾರಿ ಅಮ್ಮುಂಜೆ , ಬಾಲಕೃಷ್ಣ ಅಂಚನ್, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಪದ್ಮಶೇಖರ್ ಜೈನ್, ತಾ.ಪಂ.ಸದಸ್ಯರಾದ ಮಲ್ಲಿಕಾ ಶೆಟ್ಟಿ, ಶಿವಪ್ರಸಾದ್ ಕಳ್ಳಿಗೆ, ಪ್ರಮುಖರಾದ ಜಯಂತಿ ಪೂಜಾರಿ, ಸುದರ್ಶನ ಜೈನ್, ಮಾಯಿಲಪ್ಪ ಸಾಲ್ಯಾನ್,ಚಿತ್ತರಂಜನ್ ಶೆಟ್ಟಿ, ಜನಾರ್ದನ ಚೆಂಡ್ತಿಮಾರ್, ಮಧುಸೂದನ್‌ ಶೆಣೈ, ಚಂದ್ರಹಾಸ ಪಲ್ಲಿಪಾಡಿ, ಸುರೇಶ್ ನಾವೂರ, ಸಂಪತ್ ಕುಮಾರ್ ಶೆಟ್ಟಿ ಮತ್ತಿತರರಿದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ