ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡಗು ಮಾಡೆಲ್ ಫಾರೆಸ್ಟ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ ಸುಲೋಚನಾ ಡಾ. ಎಂ.ಜಿ ನಾಗರಾಜ್ ದತ್ತಿ ಆಶಯದಂತೆ ಕೊಡಗಿನ ದೇವರ ಕಾಡುಗಳ ಸಂರಕ್ಷಣೆ ಕುರಿತ ಉಪನ್ಯಾಸದಲ್ಲಿ ಮಾತನಾಡುತ್ತಿದ್ದರು.
ಕೊಡಗಿನಲ್ಲಿ 1,215 ದೇವರ ಕಾಡುಗಳಿವೆ. ಅವುಗಳಲ್ಲಿ 165ಕ್ಕೂ ಹೆಚ್ಚು ಬೇರೆ ಬೇರೆ ದೇವರುಗಳಿವೆ. ಇವು ಒಂದು ಜನಾಂಗಕ್ಕೆ ಸೀಮಿತವಾಗಿಲ್ಲ. ಕೊಡಗಿನ ಎಲ್ಲ ಸಮುದಾಯಗಳ ದೇವರು ಕಾಡುಗಳಿದ್ದು ವಿಶೇಷವಾಗಿ ಕೊಡವ ಮಾಪಿಳ್ಳೆ ದೇವರ ಕಾಡುಗಳು ಇದ್ದು ಪಳ್ಳಿಕಾಡು ಎನ್ನುವ ಹೆಸರಿಂದ ಗುರುತಿಸಲ್ಪಡುತ್ತಿದೆ.ದೇವರ ಕಾಡುಗಳಲ್ಲಿರುವ ಅಯ್ಯಪ್ಪ ಭದ್ರಕಾಳಿ ಮುಂತಾದ ದೇವರುಗಳಿಗೆ ಗುಡಿಗಳಿಲ್ಲ ಅದು ಆಕಾಶಕ್ಕೆ ಮುಖ ಮಾಡಿಕೊಂಡು ಮಳೆ ಕರೆಯುತ್ತಿವೆ ಇವುಗಳ ಜೊತೆಯಲ್ಲಿ ಬೇಟೆ ನಾಯಿಗಳು ಇವೆ ಎಂದರು.
ಒಂದು ಅವಿನಾಭಾವ ಸಂಬಂಧ ಇದೆ:
ಸಂಶೋಧಕ ಎಂ.ಜಿ ನಾಗರಾಜ್ ದೇವರ ಕಾಡುಗಳ ಚಿತ್ರಣವನ್ನು ಪ್ರಾತ್ಯಕ್ಷತೆ ಮೂಲಕ ವಿವರಿಸುತ್ತಾ ಕೊಡಗಿನ ದೇವರ ಕಾಡುಗಳು ಕೇವಲ ಹಿಂದೂ ಸಂಸ್ಕೃತಿಯಿಂದ ಕೂಡಿಲ್ಲ ಇಲ್ಲಿ ಬೌದ್ಧ ಜೈನ ಸಂಸ್ಕೃತಿಗೆ ಸೇರಿದ ದೇವರುಗಳಿವೆ. ಇಲ್ಲಿನ ತೆರಾಲು ಗ್ರಾಮವು ತೆರೆದಹಾಳ ಎಂದು ಮಂಚಳ್ಳಿ ಗ್ರಾಮವು ಮಂಜುಶ್ರೀ ಎಂದು ಬೌದ್ಧ ನೆಲೆಗಳ ಹೆಸರಿನಲ್ಲಿ ಕಂಡುಬರುತ್ತವೆ ಎಂದರು.
ಎಲ್ಲರ ಕರ್ತವ್ಯ:
ಹಾತೂರು ವನಭದ್ರಕಾಳಿ ದೇವಸ್ಥಾನದ ಅಧ್ಯಕ್ಷ ಕೊಕ್ಕಂಡ ಗಿಣಿ ಗಣಪತಿ ಸಂವಾದದಲ್ಲಿ ಮಾತನಾಡಿ, ಹಿಂದೆ ಕೊಡಗಿನಲ್ಲಿ 11,000 ಎಕರೆ ದೇವರ ಕಾಡಿತ್ತು ಇಂದು ಅದು 9,000 ಎಕರೆಗೆ ಇಳಿದಿದೆ. ದೇವರ ಕಾಡಿನ ರಕ್ಷಕರೇ ಭಕ್ಷಕರಾಗಿದ್ದಾರೆ ಎಂದರು.
ನಿವೃತ್ತ ಪ್ರಾಂಶುಪಾಲರಾದ ಡಾ. ಜೆ. ಸೋಮಣ್ಣ ಮಾತನಾಡುತ್ತಾ ಕೊಡಗಿನ ಹಚ್ಚ ಹಸಿರನ್ನು ಉಳಿಸಿಕೊಂಡು ಕೃಷಿಯೇತರ ಚಟುವಟಿಕೆಗಳನ್ನು ಕಡಿಮೆ ಮಾಡುವ ಬಗ್ಗೆ ಚಿಂತಿಸಬೇಕಾಗಿದೆ ಎಂದರು. ಸಂವಾದದಲ್ಲಿ ಮಾತನಾಡಿದ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಚಂದನ್ ಕಾಮತ್ ಇಂದಿನ ಅಭಿವೃದ್ಧಿಗೊಳ್ಳುತ್ತಿರುವ ಜಗತ್ತಿನಲ್ಲಿ ಕೃಷಿಯೇತರ ಚಟುವಟಿಕೆ ಕೂಡದು ಎಂದರೆ ತಪ್ಪಾಗುತ್ತದೆ. ಆದರೆ ಆ ಚಟುವಟಿಕೆಗಳನ್ನು ಮಾಡುವಾಗ ಕಾನೂನಿನಂತೆ ಒಂದು ಮರ ಕಡಿದರೆ 10 ಮರ ನೆಡುವ ಕಾನೂನಿದ್ದು ಅದನ್ನು ಕಡ್ಡಾಯವಾಗಿ ಅಳವಡಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರ ಪ್ರೊ. ಸಿಜಿ ಕುಶಾಲಪ್ಪ ಮತ್ತು ಸಂಶೋಧಕ ಡಾ. ಎಂ ಜಿ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಗೆ ಪರಿಚಯ ಮಾಡಿಕೊಡಬೇಕು:ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ದೇವರ ಕಾಡಿನ ಪರಿಚಯ ಮಾಡಿಕೊಡಬೇಕು. ವಿದ್ಯಾರ್ಥಿಗಳನ್ನು ಒಂದು ದಿನದ ಮಟ್ಟಿಗೆ ಆದರೂ ದೇವರ ಕಾಡಿಗೆ ಕರೆದುಕೊಂಡು ಹೋಗಿ ಅದರ ಬಗ್ಗೆ ಮಾಹಿತಿ ಕೊಡುವ ಸಂಪ್ರದಾಯ ಬೆಳೆಸಿಕೊಳ್ಳಬೇಕು. ಇದನ್ನು ಶಿಕ್ಷಣ ಇಲಾಖಾಧಿಕಾರಿಗಳು ಕಾನೂನು ರೀತಿಯಲ್ಲಿ ಆದೇಶಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡಗು ಮಾಡೆಲ್ ಫಾರೆಸ್ಟ್ ಟ್ರಸ್ಟ್ ನ ಕಾರ್ಯದರ್ಶಿ ಶರಿ ಸುಬ್ಬಯ್ಯ, ಹಿರಿಯ ಪತ್ರಕರ್ತ ಬಿ.ಸಿ ದಿನೇಶ್, ಶಿವಣ್ಣ, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶೀಲಾ ಗೋಪಣ್ಣ ನಿರೂಪಿಸಿದರು. ಗೌರವ ಕಾರ್ಯದರ್ಶಿ ಕೆ ವಿ ರಾಮಕೃಷ್ಣ ಸ್ವಾಗತಿಸಿದರು. ನಿರ್ದೇಶಕ ಟಿ ಆರ್ ವಿನೋದ್ ವಂದಿಸಿದರು. ಪುತ್ತಾಮನೆ ವಿದ್ಯಾ ಜಗದೀಶ್ ಪ್ರಾರ್ಥಿಸಿದರು. ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು