ಮಲ್ಪೆ ಬಂದರಿನಲ್ಲಿ ಖಾರದ ಪುಡಿ ಎರಚಿ ಚಿನ್ನದ ಸರ ಸುಲಿಗೆ

KannadaprabhaNewsNetwork |  
Published : Feb 21, 2026, 03:00 AM ISTUpdated : Feb 21, 2026, 11:46 AM IST
gold chain

ಸಾರಾಂಶ

ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.  ಅಪರಿಚಿತ ವ್ಯಕ್ತಿಯೊಬ್ಬ ಅವರಲ್ಲಿ ಮೀನಿನ ಬಗ್ಗೆ ವಿಚಾರಿಸುವ ನೆಪದಲ್ಲಿ ಹತ್ತಿರ ಬಂದು ಮುಖಕ್ಕೆ ಖಾರದ ಪುಡಿಯಲ್ಲಿ ಎರಚಿದ.

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.

ಖಾರದ ಪುಡಿ  ಎರಚಿ ಸುಲಿಗೆ

ಬಂದರಿನಲ್ಲಿ ಮೀನು ವ್ಯಾಪಾರ ಮಾಡುವ ದಯಾನಂದ ಕುಂದರ್ ಎಂಬವರು ಮುಂಜಾನೆ 4.30ರ ಸುಮಾರಿಗೆ ಬಂದರು ಕಚೇರಿಯ ಶೌಚಾಲಯಕ್ಕೆ ಹೋಗಿ ವಾಪಸ್‌ ಬರುವಾಗ ಅಪರಿಚಿತ ವ್ಯಕ್ತಿಯೊಬ್ಬ ಅವರಲ್ಲಿ ಮೀನಿನ ಬಗ್ಗೆ ವಿಚಾರಿಸುವ ನೆಪದಲ್ಲಿ ಹತ್ತಿರ ಬಂದು ಮುಖಕ್ಕೆ ಖಾರದ ಪುಡಿಯಲ್ಲಿ ಎರಚಿದ.

6 ಪವನ್ ಚಿನ್ನದ ಸರವನ್ನು ಸುಲಿಗೆ

ಬಳಿಕ ಅವರನ್ನು ಸ್ವಲ್ಪ ದೂರ ಎಳೆದುಕೊಂಡು ಹೋಗಿದ್ದು, ನಂತರ ಅಲ್ಲಿದ್ದ ಇಬ್ಬರು ಅಪರಿಚಿತರು ಒಟ್ಟು ಸೇರಿ ದಯಾನಂದ ಕುಂದರ್ ಅವರಿಗೆ ಚಾಕು ತೋರಿಸಿ, ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕೊಡುವಂತೆ ಕೇಳಿದರು. ಕೊಡದೆ ಇದ್ದಾಗ ಆರೋಪಿಗಳು ಅವರ ಮುಖಕ್ಕೆ ಮತ್ತು ಬೆನ್ನಿಗೆ ಕೈಯಿಂದ ಹಲ್ಲೆ ಮಾಡಿ 6 ಲಕ್ಷ ರೂ. ಮೌಲ್ಯದ ಸುಮಾರು 6 ಪವನ್ ಚಿನ್ನದ ಸರವನ್ನು ಸುಲಿಗೆ ಮಾಡಿದರು.

ಘಟನೆ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

2028ಕ್ಕೆ ಎನ್‌ಡಿಎಗೆ ಅಧಿಕಾರ ನಿಶ್ಚಿತ : ಅಶೋಕ್
ಗ್ಯಾರಂಟಿಗಳಿಂದ ಸಾಮಾಜಿಕ, ಆರ್ಥಿಕ ಶಕ್ತಿ: ಸಿದ್ದು