ಕನ್ನಡಪ್ರಭ ವಾರ್ತೆ ರಾಮನಗರ
ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರು, ಬೆಂಗಳೂರಿನ ತಮ್ಮ ನಿವಾಸದ ಕಚೇರಿಯಲ್ಲಿ ಕ್ರೀಡಾಪಟು ಎಂ.ಪೂರ್ವಿಕಾ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪೂರ್ವಿಕ ಅವರು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವುದು ನಮ್ಮ ಜಿಲ್ಲೆಗೆ ಹೆಮ್ಮೆಯ ಹಾಗೂ ಸಂತೋಷದ ವಿಷಯವಾಗಿದೆ. ಇಂತಹ ಸಾಧನೆಗಳು ಇತರ ಹೆಣ್ಣುಮಕ್ಕಳಿಗೂ ಸ್ಫೂರ್ತಿಯಾಗಲಿ. ಕ್ರೀಡಾಪಟುಗಳು ಇನ್ನಷ್ಟು ಧೈರ್ಯ, ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ತರಬೇತಿ ಪಡೆದು ಉನ್ನತ ಸಾಧನೆ ಮಾಡಬೇಕು ಎಂದು ಹಾರೈಸಿದರು.2026ರ ಅಕ್ಟೋಬರ್ 20ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಎಸ್ಜಿಎಫ್ಐ ರಾಷ್ಟ್ರಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಪೂರ್ವಿಕ ಅವರು ಭಾಗವಹಿಸಲಿದ್ದು, ಅಲ್ಲಿ ಉತ್ತಮ ಪ್ರದರ್ಶನ ನೀಡಿ ಜಯಶಾಲಿಯಾಗಲಿ ಎಂದು ಸಚಿವ ಬಾಲಕೃಷ್ಣ ಶುಭ ಹಾರೈಸಿದರು.