ಕನ್ನಡಪ್ರಭವಾರ್ತೆ ವಿರಾಜಪೇಟೆ
ವಿ.ಎನ್. ಯೋಧ ಮಾರ್ಷಲ್ ಆರ್ಟ್ಸ್ ಆಕಾಡೆಮಿ ಮೈಸೂರು ವತಿಯಿಂದ ಟೆರಿಜೀಯನ್ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 4 ನೇ ರಾಷ್ಟ್ರ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ 2024 ,ಮೈಸೂರು ಕಪ್ ಪಂದ್ಯಾಟ ನಡೆಯಿತು.
ಪಂದ್ಯಾವಳಿಯಲ್ಲಿ ದೇಶದ ವಿವಿಧ ಭಾಗಗಳಿಂದ ಕರಾಟೆ ಕ್ರೀಡಾ ಪಟುಗಳು ಭಾಗವಹಿಸಿದ್ದರು. ಟೀಮ್ ಮಿಯಾಗಿ ಗೋಜೂ ರಿಯೊ ಕೊಡಗು ವಿರಾಜಪೇಟೆ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳು ಕರಾಟೆ ಕ್ರೀಡೆ ಯ ವಿವಿಧ ಪ್ರಕಾರಗಳಲ್ಲಿ ಭಾಗವಹಿಸಿ 12 ಮಂದಿಗೆ ಚಿನ್ನ ದ ಪದಕ ,15 ಮಂದಿಗೆ ಬೆಳ್ಳಿ ಪದಕ ಮತ್ತು 08 ಮಂದಿ ಕಂಚಿನ ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಸೆನ್ಸಾಯಿ ಎಂ.ಬಿ. ಚಂದ್ರನ್ ಅವರು ತರಬೇತಿ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲೆಯ ಜನತೆಯು ಅಭಿನಂದನೆಗಳು ಸಲ್ಲಿಸಿದೆ.