ಕನಕಪುರ:
ನಗರದಲ್ಲಿರುವ ಕೆಂಕೇರಮ್ಮ ದೇವಾಲಯದಲ್ಲಿ ವಿಗ್ರಹದ ಮೇಲಿದ್ದ ತಾಳಿ, ಕಾಸಿನಸರ, ಬೆಳ್ಳಿ ಆಭರಣ, ಟ್ರಂಕ್ ನಲ್ಲಿದ್ದ ಆಭರಣ ಹಾಗೂ ಹುಂಡಿ ಹೊಡೆದು ಅದರಲ್ಲಿದ್ದ ಹಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ದೇವಾಲಯದ ಪಕ್ಕದಲ್ಲಿಯೇ ಇದ್ದ ಅರ್ಚಕರ ಮನೆಗೆ ಹೊರಗಿನಿಂದ ಬೀಗ ಹಾಕಿ ಕೃತ್ಯ ಎಸಗಿದ್ದಾರೆ.
ಈ ಘಟನೆ ವಿಷಯ ತಿಳಿದು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂಬಂಧ ದೇವಾಲಯದ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.-------
ಹೃದಯಾಘಾತದಿಂದ ಫಾರೆಸ್ಟ್ ಗಾರ್ಡ್ ಸಾವುಕನಕಪುರ:
ಫಾರೆಸ್ಟ್ ಗಾರ್ಡ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ನಡೆದಿದೆ.ಹೊರ ಗುತ್ತಿಗೆಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಾದೇಶ ನಾಯಕ (38) ಮೃತರು.
ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ಸಾದ ಮಾದೇಶ ನಾಯಕ ಎಂದಿನಂತೆ ರಾತ್ರಿ ಊಟ ಮುಗಿಸಿ ಮಲಗಿದ್ದಾರೆ. ತಡರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತ್ತಾದರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.