ಕನ್ನಡಪ್ರಭ ವಾರ್ತೆ ವಿಜಯಪುರ
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ತಲೆ ಮರೆಸಿಕೊಂಡಿದ್ದ ಜತ್ತ ಮೂಲದ ಹಣಮಂತ ವಾಘೋಲಿ ಹಾಗೂ ಶಿವರಾಜ ಗೌಡಪ್ಪ ನಾವಿ ಎಂಬಾತ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ದರೋಡೆ ಮಾಡಿದ್ದ ₹22 ಲಕ್ಷ ಮೌಲ್ಯದ 205 ಗ್ರಾಂ ಬಂಗಾರ ಹಾಗೂ 1 ಕೆಜಿ ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಕಂಟ್ರಿ ಪಿಸ್ತೂಲ್ ಸೇರಿದಂತೆ ಒಟ್ಟು 03 ಕಂಟ್ರಿ ಪಿಸ್ತೂಲ್, 26 ಜೀವಂತ ಗುಂಡುಗಳು, ಒಂದು ಏರಗನ್, ಹೊಂಡಾ ಕಂಪನಿಯ ಯುನಿಕಾರ್ನ್ ಮೋಟಾರ್ ಸೈಕಲ್, ಮಾಸ್ಕ್, ಜಾಕೇಟ್, ಹೆಲ್ಮೆಟ್, ಹ್ಯಾಂಡಗ್ಲೌಸ್, ಹಾಗೂ ಧರಿಸಿದ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ.
ಘಟನೆ ವಿವರ:ಜ.26 ರಂದು ಮಧ್ಯಾಹ್ನ 3.30ರ ವೇಳೆಗೆ ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸಂಗಿ ಗ್ರಾಮದ ಮಹಾರುದ್ರ ಕಂಚಗಾರ ಎಂಬುವವರ ಭೂಮಿಕಾ ಜ್ಯುವೆಲರಿ ಅಂಗಡಿಗೆ ಮುಖಕ್ಕೆ ಕಪ್ಪು ಬಟ್ಟೆ ಹಾಗೂ ಹೆಲ್ಮೆಟ್ ಹಾಕಿಕೊಂಡು ಕಪ್ಪು ಬಣ್ಣದ ಯುನಿಕಾರ್ನ್ ಮೋಟಾರ್ ಸೈಕಲ್ ಮೇಲೆ ಬಂದಿದ್ದ ಇಬ್ಬರು ದರೋಡೆಕೋರರು, ಪಿಸ್ತೂಲ್ ತೋರಿಸಿ ಅಂಗಡಿಯಲ್ಲಿದ್ದ 205 ಗ್ರಾಂ ಬಂಗಾರ ಹಾಗೂ 1 ಕೆಜಿ ಬೆಳ್ಳಿ ಆಭರಣಗಳು ಸೇರಿ ಒಟ್ಟು ₹22 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದರು. ಇಷ್ಟೆ ಅಲ್ಲದೆ ವಾಪಸ್ ಹೋಗುವ ಸಮಯದಲ್ಲಿ ಬಂಗಾರದ ಅಂಗಡಿ ಪಕ್ಕದಲ್ಲಿ ನಿಂತಿದ್ದ ಸಾರ್ವಜನಿಕರ ಕಡೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಓರ್ವನಿಗೆ ಗಾಯಗೊಳಿಸಿ ಪರಾರಿಯಾಗಿದ್ದರು. ಈ ಕುರಿತು ಅಂಗಡಿ ಮಾಲೀಕ ಮಹಾರುದ್ರ ಕಂಚಗಾರ ಝಳಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್‌ಪಿ ಲಕ್ಷ್ಮಣ ನಿಂಬರಗಿ ಅವರು ಹೆಚ್ಚುವರಿ ಎಸ್‌ಪಿ ರಾಮನಗೌಡ ಹಟ್ಟಿ ನೇತೃತ್ವದಲ್ಲಿ ಎರಡು ತನಿಖಾ ತಂಡಗಳನ್ನು ರಚಿಸಿದ್ದರು. ತಂಡದಲ್ಲಿದ್ದ ಇಬ್ಬರು ಡಿವೈಎಸ್‌ಪಿಗಳಾದ ಸದಾಶಿವ ಕಟ್ಟಿಮನಿ, ಸುನೀಲ ಕಾಂಬಳೆ, ಚಡಚಣ ಸಿಪಿಐ ಪರಶುರಾಮ ಮನಗೂಳಿ, ಪಿಎಸ್‌ಐ ಗಳಾದ ಮಂಜುನಾಥ ತಿರಕ್ಕನ್ನವರ, ಸೋಮೇಶ ಗೆಜ್ಜಿ, ರಾಕೇಶ ಬಗಲಿ, ಹಾಗೂ ಕ್ರೈಂ, ತಾಂತ್ರಿಕ ಸಿಬ್ಬಂದಿ ಆರೋಪಿಗಳ ಕುರಿತು ತನಿಖೆ ನಡೆಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಲಕ್ಷ್ಮಣ ನಿಂಬರಗಿ, ವಿಜಯಪುರ ಎಸ್‌ಪಿ.ವಿವಿಧೆಡೆ ದರೋಡೆಗೆ ಸಂಚು ರೂಪಿಸಿದ್ದ ಆರೋಪಿಗಳು