ಹಿರೇದಿನ್ನಿ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮ

KannadaprabhaNewsNetwork |  
Published : Feb 13, 2024, 12:47 AM IST
12ಕೆಪಿಕೆವಿಟಿ01: | Kannada Prabha

ಸಾರಾಂಶ

ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲೆಯ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಕವಿತಾಳ

ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ, ಅದ್ಧೂರಿಯಾಗಿ ಆಯೋಜಿಸಿರುವುದು ಶ್ಲಾಘನೀಯ ಎಂದು ಮಾಜಿ ಶಾಸಕ ಪ್ರಾತಪಗೌಡ ಪಾಟೀಲ್ ಹೇಳಿದರು.

ಮಸ್ಕಿ ತಾಲೂಕಿನ ಹಿರೇದಿನ್ನಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲೆಯ ಸುವರ್ಣ ಮಹೋತ್ಸವ ಹಾಗೂ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಡುತ್ತಿದೆ. ಶಿಕ್ಷರ ವರ್ಗಾವಣೆ ನಂತರ ಕೊರತೆ ಉಂಟಾಗಿದೆ. ಹೀಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಈ ಕುರಿತು ಸರ್ಕಾರ ಶಿಕ್ಷಕರ ನೇಮಕಕ್ಕೆ ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಇರಕಲ್ ಶಿವಶಕ್ತಿ ಪೀಠದ ಬಸವಪ್ರಸಾದ ಶರಣರು ಮತ್ತು ಉಟಕನೂರು ಅಡವಿ ಸಿದ್ದೇಶ್ವರ ಮಠದ ಪೀಠಾಧಿಪತಿ ಮರಿಬಸವರಾಜ ದೇಶೀಕೇಂದ್ರ ಸ್ವಾಮೀಜಿ ವಹಿಸಿದ್ದರು.

ಮುಖಂಡರಾದ ಚಂದ್ರಕಾಂತ ಪಾಟೀಲ್, ಶರಣಪ್ಪಗೌಡ, ಎಸ್ ಡಿಎಂಸಿ ಅಧ್ಯಕ್ಷೆ ಭಾಗ್ಯವಂತಿ ಪರಶುರಾಮ ಗುರಿಕಾರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಸ್ಕಿ ತಾಲ್ಲೂಕು ಅಧ್ಯಕ್ಷ ಬಾಲಸ್ವಾಮಿ ಹಂಪನಾಳ, ಪ್ರಭಾರ ಮುಖ್ಯ ಶಿಕ್ಷಕಿ ಚೆನ್ನಮ್ಮ, ಶಿಕ್ಷಕರಾದ ಪ್ರಸನ್ನಯ್ಯ ಬಸಾಪುರ, ರೇಣುಕಾರಾಜ, ಹಂಪಯ್ಯ ಇದ್ದರು. ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರು ಮತ್ತು ಪಾಲಕರ ಗಮನ ಸೆಳೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!