ದಾಬಸ್‍ಪೇಟೆ: ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಗೊಲ್ಲಹಳ್ಳಿ-ದೊಡ್ಡಬಳ್ಳಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ರಸ್ತೆ ಸಮಸ್ಯೆಯನ್ನು ಸರಿಪಡಿಸಲಿಲ್ಲ ಎಂದು ನನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿತ್ತು. ಬಿಜೆಪಿ ಸರ್ಕಾರದವಿದ್ದಾಗ, ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜನರ ಬಗ್ಗೆ ಕಾಳಜಿ ಇರಲಿಲ್ವಾ, ಬಿಜೆಪಿ-ಜೆಡಿಎಸ್ ಘಟಾನುಘಟಿ ನಾಯಕರಿದ್ದರೂ ಯಾಕೆ ಮಾಡಿಸಲಿಲ್ಲ, ದೊಡ್ಡ ದೊಡ್ಡ ಹುದ್ದೆಗಳನ್ನು ಅನುಭವಿಸುವಾಗ ಈ ಕಾಮಗಾರಿ ನೆನೆಪಿಗೆ ಬರಲಿಲ್ಲವಾ, ಸರ್ಕಾರದ ಮೇಲೆ ಒತ್ತಡ ತಂದು ಕೆಲಸ ಮಾಡಬೇಕಿತ್ತು ಎಂದು ವಿರೋಧ ಪಕ್ಷಗಳ ವಿರುದ್ಧ ಶಾಸಕರು ಹರಿಹಾಯ್ದರು. 1500 ಕೋಟಿ ಅನುದಾನ, ಒಳಚರಂಡಿ ಅನುದಾನ, ಕಾವೇರಿ ನೀರಿ ಹರಿಸಲು ಯೋಜನೆಗೆ ಚಾಲನೆ ನೀಡಿಸಿದ್ದಾನೆ.
ಈ ಸಂದರ್ಭದಲ್ಲಿ ಎನ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ನಗರಸಭೆ ಅಧ್ಯಕ್ಷ ಗಣೇಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ವಕೀಲ ಮುರಳಿ, ಮುಖಂಡ ಸೋಮಶೇಖರ್ ಇತರರು ಉಪಸ್ಥಿತರಿದ್ದರು.ಪೋಟೋ 3 :ಗೊಲ್ಲಹಳ್ಳಿ-ದೊಡ್ಡಬಳ್ಳಾಪುರ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಶ್ರೀನಿವಾಸ್ ಚಾಲನೆ ನೀಡಿದರು. ಎನ್‌ಪಿಎ ಅಧ್ಯಕ್ಷ ಎಂ.ಕೆ.ನಾಗರಾಜು, ನಗರಸಭೆ ಅಧ್ಯಕ್ಷ ಗಣೇಶ್ ಇತರರಿದ್ದರು.