ಪುತ್ತೂರು ಶ್ರೀ ಮಹಾಲಿಂಗೇಶ್ವರ ವಾರ್ಷಿಕ ಜಾತ್ರೋತ್ಸಕ್ಕೆ ಗೊನೆ ಮುಹೂರ್ತ

KannadaprabhaNewsNetwork |  
Published : Apr 02, 2025, 01:03 AM IST
ಫೋಟೋ: ೧ಪಿಟಿಆರ್-ಟೆಂಪಲ್ಪುತ್ತೂರು ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು | Kannada Prabha

ಸಾರಾಂಶ

ಏ.೧೦ ರಂದು ಧ್ವಜಾರೋಹಣದೊಂದಿಗೆ ಪುತ್ತೂರು ಜಾತ್ರಾ ವಿಧಿವಿಧಾನಗಳು ವಿಧ್ಯುಕ್ತವಾಗಿ ಆರಂಭವಾಗಲಿದೆ. ಏ.೧೭ರಂದು ಬ್ರಹ್ಮರಥೋತ್ಸವ ಹಾಗೂ ಪುತ್ತೂರ ಬೆಡಿ ಸಿಡಿಮದ್ದುಗಳ ಪ್ರದರ್ಶನ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ಸಲುವಾಗಿ ಪಾರಂಪರಿಕ ವಿಧಿ ಗೊನೆ ಮುಹೂರ್ತ ಮಂಗಳವಾರ ನಡೆಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ವಿ.ಎಸ್.ಭಟ್‌ ಗೊನೆಮುಹೂರ್ತ ನೆರವೇರಿಸಿದರು.

ದೇವಳದ ಪೂರ್ವಶಿಷ್ಟ ಸಂಪ್ರದಾಯದಂತೆ ಬೆಳಗ್ಗೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ನೆರವೇರಿಸಿ ಚೆಂಡೆ ಜಾಗಟೆ ಶಂಖಧ್ವನಿ ವಾದ್ಯ ಸಹಿತ ದೇವಳದ ರಥಬೀದಿ ಹಾದಿಯಲ್ಲಿ ಮೆರವಣಿಗೆ ಮೂಲಕ ಸಾಗಿ ದೇವಳದ ಪಕ್ಕದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿದ್ದ ಗೊನೆ ಕಡಿದು ಗೊನೆಮುಹೂರ್ತ ನೆರವೇರಿಸಲಾಯಿತು. ಪ್ರಧಾನ ಅರ್ಚಕ ವೇದ ಮೂರ್ತಿ ವಸಂತ ಕೆದಿಲಾಯ ಸಹಕರಿಸಿದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಮಾಜಿ ಮೊಕ್ತೇಸರರಾದ ಎನ್.ಕೆ ಜಗನ್ನೀವಾಸ ರಾವ್, ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಿನಯ ಸುವರ್ಣ, ಮಹಾಬಲ ರೈ ವಳತ್ತಡ್ಕ, ಸುಭಾಶ್ ರೈ ಬೆಳ್ಳಿಪ್ಪಾಡಿ, ಈಶ್ವರ ಬೇಡೇಕರ್, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ದಿನೇಶ್ ಪಿ.ವಿ, ವಾಸ್ತುತಜ್ಞ ಪಿ.ಜಿ.ಜಗನ್ನೀವಾಸ ರಾವ್, ರವೀಂದ್ರನಾಥ ರೈ ಬಳ್ಳಮಜಲು, ಚಿದಾನಂದ ಬೈಲಾಡಿ, ರಾಮ್‌ದಾಸ್ ಗೌಡ, ನಯನಾ ರೈ, ಲೊಕೇಶ್ ಹೆಗ್ಡೆ, ರಾಜೇಶ್ ಬನ್ನೂರು, ಸಹಿತ ಹಲವಾರು ಭಕ್ತಾಧಿಗಳು ಭಾಗವಹಿಸಿದ್ದರು.

ಏ.೧೦ ರಂದು ಧ್ವಜಾರೋಹಣದೊಂದಿಗೆ ಜಾತ್ರಾ ವಿಧಿವಿಧಾನಗಳು ವಿಧ್ಯುಕ್ತವಾಗಿ ಆರಂಭವಾಗಲಿದೆ. ಏ.೧೭ರಂದು ಬ್ರಹ್ಮರಥೋತ್ಸವ ಹಾಗೂ ಪುತ್ತೂರ ಬೆಡಿ ಸಿಡಿಮದ್ದುಗಳ ಪ್ರದರ್ಶನ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌