ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಕಾರ್ಯಕ್ರಮ ಪಟ್ಟಿ ಬಿಡುಗಡೆ

KannadaprabhaNewsNetwork |  
Published : Sep 23, 2025, 01:05 AM IST
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿ 47 ನೇ ವರ್ಷದ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಲಾಯಿತು.  | Kannada Prabha

ಸಾರಾಂಶ

ಗೋಣಿಕೊಪ್ಪ ಶ್ರೀ ಕಾವೇರಿ ದಸರಾ 47ನೇ ವರ್ಷದ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ

ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿ 47 ನೇ ವರ್ಷದ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಲಾಯಿತು.

ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಹಳೆಯ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶ್ರೀ ಕಾವೇರಿ ದಸರಾ ಸಮಿತಿಯ ಮಾಧ್ಯಮ ಸಂಚಾಲಕರಾದ ಪಿ ಕೆ ಪ್ರವೀಣ್ ಅಧ್ಯಕ್ಷತೆಯಲ್ಲಿ ಕಾರ್ಯಾಧ್ಯಕ್ಷರಾದ ಕೊಳ್ಳಿಮಾಡ ಅಜಿತ್ ಅಯ್ಯಪ್ಪ ಅವರು ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯಿಂದ ನಡೆಯುವ ಜನೋತ್ಸವ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಗೋಣಿಕೊಪ್ಪಲು ಶ್ರೀ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ಮಂಜುಳಾ, ಸಮಿತಿ ಸಂಚಾಲಕರಾದ ಚಂದನ್ ಕಾಮತ್, ಸಲಹೆಗಾರರಾದ ಬಿ.ಎನ್. ಪ್ರಕಾಶ್, ಯುವ ದಸರಾ ಸಮಿತಿ ಅಧ್ಯಕ್ಷರಾದ ನಾಮೇರ ಅಂಕಿತ್ ಪೊನ್ನಪ್ಪ ಉಪಸ್ಥಿತರಿದ್ದರು.

--------------------------------

ಕೊಡವರು ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಿ: ಬಿಜೆಪಿ ಮನವಿಕನ್ನಡಪ್ರಭ ವಾರ್ತೆ ಮಡಿಕೇರಿರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಜನಗಣತಿಯಲ್ಲಿ ಕೊಡವರು ಯಾವುದೇ ಗೊಂದಲಕ್ಕೆ ಒಳಗಾಗದೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಮತ್ತು ಭಾಷೆ ಕಾಲಂನಲ್ಲಿ ಕೊಡವ ಭಾಷೆ ಎಂದು ನಮೂದಿಸುವಂತೆ ಕೊಡಗು ಜಿಲ್ಲಾ ಬಿಜೆಪಿ ಮನವಿ ಮಾಡಿದೆ.ಪತ್ರಿಕಾ ಪ್ರಕಟಣೆ ನೀಡಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಕೊಡಗು ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ಜಾತಿ ಜನಗಣತಿಯ ಧರ್ಮದ ಕಾಲಂನಲ್ಲಿ ಕೊಡವರು "ಕೊಡವ ಧರ್ಮ " ಎಂದು ನಮೂದಿಸಬೇಕೆಂದು ಕರೆ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಅನಾದಿ ಕಾಲದಿಂದಲು ಕೊಡವರು ಹಾಗೂ ಕೊಡವ ಭಾಷಿಕರು ಪ್ರಕೃತಿ ಮತ್ತು ಗುರುಕಾರೋಣರನ್ನು ಆರಾಧಿಸಿಕೊಂಡು ಬರುತ್ತಿದ್ದು, ಹಿಂದೂ ಧರ್ಮದ ಭಾಗವಾಗಿ ಗುರುತಿಸಿಕೊಂಡಿದ್ದಾರೆ. ಕೊಡವರ ಆಚಾರ, ವಿಚಾರ, ಪದ್ಧತಿ ಪರಂಪರೆ, ಉಡುಗೆ, ತೊಡುಗೆ ಮತ್ತು ಆಹಾರ ಪದ್ಧತಿ ವಿಶಿಷ್ಟವಾಗಿದೆ. ಕೊಡಗಿನ ಬಹುತೇಕ ದೇವಾಲಯಗಳ ತಕ್ಕ ಮುಖ್ಯಸ್ಥರು ಕೊಡವರೇ ಆಗಿದ್ದು, ಎಲ್ಲಾ ಹಿಂದೂ ದೇವರುಗಳನ್ನು ಪೂಜಿಸಿಕೊಂಡು ಬರುತ್ತಿದ್ದಾರೆ.ಬಹಳ ಹಿಂದಿನಿಂದಲೂ ಎಲ್ಲಾ ದಾಖಲಾತಿಗಳಲ್ಲು ಹಿಂದೂ ಧರ್ಮವೆಂದೇ ಕೊಡವರು ದಾಖಲಿಸಿಕೊಂಡು ಬಂದಿದ್ದಾರೆ. ಆದ್ದರಿಂದ ಜಾತಿ ಜನಗಣತಿಯ ಸಂದರ್ಭ ಯಾರೂ ಗೊಂದಲಕ್ಕೀಡಾಗದೆ ಪ್ರತಿಯೊಬ್ಬರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಕೊಡವ ಹಾಗೂ ಭಾಷೆ ಕಾಲಂನಲ್ಲಿ ಕೊಡವ ಎಂದು ನಮೂದಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಕೋರಿದ್ದಾರೆ.ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಜಾತಿ ಜನಗಣತಿಯ ಪಟ್ಟಿಯಲ್ಲಿ ನೀಡಿರುವ ಜಾತಿಗಳ ಪಟ್ಟಿಯು ಹಿಂದೂ ಧರ್ಮದಲ್ಲಿ ಬರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಲ್ಲಿರುವ ಎಲ್ಲಾ ಜಾತಿಯಲ್ಲಿ ಕ್ರೈಸ್ತ ಎಂದು ಸೇರಿಸುವ ಪ್ರಯತ್ನ ಮಾಡಲಾಗಿದೆ. ಆ ಮೂಲಕ ಸರಕಾರ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸರಕಾರದಿಂದ ದೊರಕುತ್ತಿರುವ ಶೈಕ್ಷಣಿಕ, ಆರ್ಥಿಕ ಹಾಗೂ ಉದ್ಯೋಗ ಮೀಸಲಾತಿಯು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡವರಿಗೂ ದೊರಕಿಸಿಕೊಡುವ ಯೋಜನೆ ಇದಾಗಿದೆ ಎಂದು ಆರೋಪಿಸಿರುವ ನಾಪಂಡ ರವಿ ಕಾಳಪ್ಪ ಅವರು ರಾಜ್ಯ ಸರಕಾರದ ಈ ನಡೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರಿಗೆ ಕಪಾಳಮೋಕ್ಷ: 27 ಜನರ ವಿರುದ್ಧ ಕೇಸ್‌
ಮಹಾಲಿಂಗಪುರದಲ್ಲಿ ಇಂದು ಜನುಮದ ಜೋಡಿ ಕಾರ್ಯಕ್ರಮ