ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ ಗೋಣಿಕೊಪ್ಪ ದಸರಾ ಉತ್ಸವಕ್ಕೆ ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆಯ ಮೂಲಕ ವಿಧ್ಯುಕ್ತವಾಗಿ ಭಾನುವಾರ ಚಾಲನೆ ದೊರೆಯಿತು. ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರ ಭವನದಲ್ಲಿ ಬೆಳಗ್ಗೆ ಗಣಪತಿ ಹೋಮ ನಡೆದು ನಂತರ ದೇವಿಯ ಪ್ರತಿಷ್ಠಾಪನಾ ಕಾರ್ಯ ನೆರವೇರಿತು. ಸಂಪ್ರದಾಯದಂತೆ ವಿರಾಜಪೇಟೆ ಶಾಸಕರು ಹಾಗೂ ಕಾವೇರಿ ದಸರಾ ಸಮಿತಿ ಗೌರವ ಅಧ್ಯಕ್ಷರು ಆದ ಎ. ಎಸ್ ಪೊನ್ನಣ್ಣ ದೇವಿಯ ಪ್ರತಿಷ್ಠಾಪನ ಕಾರ್ಯದಲ್ಲಿ ಭಾಗಿಯಾಗಿ ಒಂಭತ್ತು ದಿನಗಳ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಪ್ರಮೋದ್ ಗಣಪತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ದಸರಾ ಸಮಿತಿಯ ಕಾರ್ಯಧ್ಯಕ್ಷರು ಸೌಮ್ಯ ಬಾಲು, ಪ್ರಧಾನ ಕಾರ್ಯದರ್ಶಿ ಕಂದಾದೇವಯ್ಯ, ಪದಾಧಿಕಾರಿಗಳು ವಿವಿಧ ಸಮಿತಿಗಳ ಪದಾಧಿಕಾರಿಗಳು, ಕಾವೇರಿ ದಸರಾ ಸಮಿತಿಯ ಮಾಜಿ ಅಧ್ಯಕ್ಷರಾದ ಬಿ. ಎನ್ ಪ್ರಕಾಶ್, ರಾಮಕೃಷ್ಣ, ಬೋಪ್ಪಣ್ಣ ಚಾಮುಂಡೇಶ್ವರಿ ದೇವಿಯ ಮೂರ್ತಿಯ ದಾನಿಗಳಾದ ಕಾಮತ್ ಗ್ರೂಪ್‌ನ ಕುಟುಂಬಸ್ಥರು ಈ ಪ್ರತಿಷ್ಠಾಪನ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಶ್ರೀ ಉಮಾಮಹೇಶ್ವರಿ ದೇವಾಲಯದ ಮುಖ್ಯ ಅರ್ಚಕರಾದ ಶ್ರೀ ಶಂಕರ ವೈಲಯ ತಂಡ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.