ಗೋಣಿಕೊಪ್ಪ: ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವನ್ನು ಗೋಣಿಕೊಪ್ಪಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಆಚರಿಸಲಾಯಿತು.
ಗೋಣಿಕೊಪ್ಪ: ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವನ್ನು ಗೋಣಿಕೊಪ್ಪಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಆಚರಿಸಲಾಯಿತು.
ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿ, ವಿದ್ಯಾರ್ಥಿಗಳಿಗೆ ಇಬ್ಬರು ಮಹನೀಯರ ಹೋರಾಟದ ಬದುಕು ಕುರಿತು ತಿಳಿಸಲಾಯಿತು.ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಮಾತನಾಡಿದರು. ಮುಖ್ಯೋಪಾಧ್ಯಾಯ ಎಚ್.ಕೆ. ಕುಮಾರ್ ಮಾತನಾಡಿ, ಗಾಂಧೀಜಿಯವರ ಸ್ವಾತಂತ್ರ‍್ಯ ಹೋರಾಟದ ಪ್ರಭಾವ ಕೊಡಗಿನಲ್ಲಿಯೂ ಕಂಡುಬಂದಿದೆ. ಕೊಡಗಿನ ಲೇಖಕಿ ಗೌರಮ್ಮ ಗಾಂಧೀಜಿ ವಿಚಾರಗಳಿಂದ ಪ್ರೇರಣೆ ಪಡೆದು ಒಡವೆಗಳನ್ನು ಸ್ವಾತಂತ್ರ‍್ಯ ಹೋರಾಟಕ್ಕೆದಾನ ಮಾಡಿದ್ದರು ಎಂದರು.
ಎಸ್‌ಡಿಎಂಸಿ ಉಪಾಧ್ಯಕ್ಷೆ ದಿವ್ಯ, ಸದಸ್ಯೆಅನಿತಾ, ಶಿಕ್ಷಕರಾದ ಜೋಸ್ಲಿಯ, ಇಂದಿರಾ, ದಮಯಂತಿ, ಅನಿತಾಕುಮಾರಿ, ಯಶ್ವಿನಿ, ಅರ್ಷಿಯ, ಕ್ಲೆಮೆಂಟಿನ್, ಸಹನಾ, ಶಾರದಾ, ನಾಗರಾಜು, ಸ್ನೇಹ, ಕಾವೇರಮ್ಮ, ಮಂಜುಳಾ, ಸಿದ್ದರಾಜು, ಪೂಜಾ, ಪಾರ್ವತಿ, ಕಚೇರಿ ಸಿಬ್ಬಂದಿ ಕೀರ್ತಿ, ಪೂಜಾ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.