ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Mar 01, 2024, 02:15 AM IST
ಚಿತ್ರ : 29ಎಂಡಿಕೆ3 : ಗೋಣಿಕೊಪ್ಪ ಬಸ್ ನಿಲ್ದಾಣ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು,.  | Kannada Prabha

ಸಾರಾಂಶ

ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಗುರುವಾರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನಡೆಸಿ ಚಾಲನೆ ನೀಡಿದರು. ಕಾಮಗಾರಿಯ ಗುಣಮಟ್ಟ, ಸಮಯ ಪಾಲನೆ ಇವುಗಳಲ್ಲಿ ಯಾವುದೇ ಲೋಪ ನಡೆಯದಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ

ಹಲವು ವರ್ಷಗಳ ಬೇಡಿಕೆಯಾದ ಗೋಣಿಕೊಪ್ಪ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಗುರುವಾರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಸಾರ್ವಜನಿಕರು, ಅಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ಪೊನ್ನಣ್ಣ, ಯಾವುದೇ ಕಾಮಗಾರಿಗೆ ಭೂಮಿ ಪೂಜೆ ನಡೆಸುವಾಗ ಕಾಮಗಾರಿಗೆ ಸಂಬಧಿಸಿದಂತೆ ಅನುದಾನ ,ಅಂದಾಜು ಪಟ್ಟಿ,ಇಲಾಖಾ ಅನುಮೋದನೆ, ಕಾರ್ಯಾದೇಶ ಎಲ್ಲವನ್ನೂ ಇತ್ಯರ್ಥ ಪಡಿಸಿದ ನಂತರವೇ ಮಾಡುತ್ತಿರುವುದಾಗಿ ಸ್ಪಷ್ಟ ಪಡಿಸಿದರು.

ಕಾಮಗಾರಿಯ ಗುಣಮಟ್ಟ, ಸಮಯ ಪಾಲನೆ ಇವುಗಳಲ್ಲಿ ಯಾವುದೇ ಲೋಪ ನಡೆಯದಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಗಣಪತಿ , ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ವಿಧಾನ ಪರಿಷತ್‌ ಮಾಜಿ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪ್ರಥ್ಯು, ವಕ್ತಾರ ಟಾಟು ಮೊಣ್ಣಪ್ಪ, ಪ್ರಮುಖರಾದ ಲಾಲ ಅಪ್ಪಣ್ಣ, ಥೆರೇಸಾ ವಿಕ್ಟರ್, ಗ್ರಾಮ ಪಂಚಾಚಾಯಿತಿ ಸದಸ್ಯರು, ಸಾರ್ವಜನಿಕರು, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ವ್ಯವಸ್ಥೆ:

ಇನ್ನರ್‌ವೀಲ್‌ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರಪೇಟೆ ತಾಲೂಕು ಕಚೇರಿ ಎದುರು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಸ್ಟ್ಯಾಂಡ್ ಅಳವಡಿಸಲಾಯಿತು.

ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಅಲ್ಲಲ್ಲಿ ಕಸ ಹಾಕುತ್ತಿರುವುದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಕೆಲ ಸ್ಥಳಗಳಲ್ಲಿ ಪರಿಸರಕ್ಕೂ ಹಾನಿಯಾಗುತ್ತಿದೆ. ಇದನ್ನು ಮನಗೊಂಡ ನಮ್ಮ ಸಂಸ್ಥೆ ಕೆಲವು ಕಡೆ ತ್ಯಾಜ್ಯ ಸಂಗ್ರಹ ಸ್ಟ್ಯಾಂಡ್ ಅಳವಡಿಸಲಾಗುತ್ತಿದೆ ಎಂದು ಕ್ಲಬ್‍ನ ಅಧ್ಯಕ್ಷೆ ಸಂದ್ಯಾರಾಣಿ ಹೇಳಿದರು.ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಕ್ಲಬ್‍ನ ಕಾರ್ಯದರ್ಶಿ ತನ್ಮಯಿ ಪ್ರವೀಣ್, ಎಡಿಟರ್ ಸುವಿನ ಕೃಪಾಲ್, ಮಾಜಿ ಅಧ್ಯಕ್ಷೆ ಆಶಾ ಯೋಗೇಂದ್ರ, ಸದಸ್ಯರಾದ ಲತಾ ನಾಗೇಶ್, ಕಾವೇರಿ ಸುರೇಶ್, ಲತಾ ಮಂಜು, ವನಿತಾ ಜಯರಾಂ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ