ಕನ್ನಡಪ್ರಭ ವಾರ್ತೆ ಗೋಣಿಕೊಪ್ಪ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ, ಹೀಗೆ 13 ಭಾಷೆಯ ಕವನಗಳನ್ನು ಕನ್ನಡ, ಹಿಂದಿ,ಇಂಗ್ಲಿಷ್, ತಮಿಳು, ಮಲೆಯಾಳಂ, ಮರಾಠಿ 78 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ. ನಾಲ್ವರು ಕವಿಗಳು ಕನ್ನಡ ಭಾಷೆಯ ಚುಟುಕು ಕವನ ವಾಚಿಸಲಿದ್ದಾರೆ.ಮಕ್ಕಳ ಪ್ರತಿಭೆ ಗುರುತಿಸುವ ಸಲುವಾಗಿ ಮತ್ತು ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಮೂಡಿಸುವ ಸಲುವಾಗಿ ಈ ಬಾರಿ ವಿಶೇಷವಾಗಿ ಮಕ್ಕಳ ಕವನಗೋಷ್ಠಿ (6-13 ವಯೋಮಿತಿ) ಏರ್ಪಡಿಸಲಾಗಿದೆ. 11 ಬಾಲ ಪ್ರತಿಭೆಗಳು ಕವನ ವಾಚನ ಮಾಡಲಿದ್ದಾರೆ ಎಂದರು.
ಕನ್ನಡದಲ್ಲಿ 6 ಮತ್ತು ಇಂಗ್ಲೀಷಿನಲ್ಲಿ 5 ಬಾಲ ಕವಿಗಳು ಕವನ ವಾಚನ ಮಾಡಲಿದ್ದಾರೆ.ಕವಿಗೋಷ್ಠಿಗೆ ಆಗಮಿಸುವ ಎಲ್ಲಾ ಕವಿಗಳಿಗೂ ಗೌರವ ಸಮರ್ಪಣೆ, ಸಂಭಾವನೆ ಮತ್ತು ಕೊಡಗಿನ ಲೇಖಕರ ಒಂದು ಪುಸ್ತಕ ನೀಡಲಾಗುವುದು.
ಜಿಲ್ಲೆಯ ಸಾಹಿತಿ ಉಳುವಂಗಡ ಕಾವೇರಿ ಉದಯ ಅಂಕಣಕಾರರಾಗಿ ಹಲವಾರು ಪತ್ರಿಕೆಗಳಲ್ಲಿ ಪ್ರಕಟಿಸಿದ 67 ಲೇಖನಗಳನ್ನು ಪುಸ್ತಕ ರೂಪದಲ್ಲಿ ‘ಲೇಖನ ಸೌರಭ’ಹೆಸರಿನಲ್ಲಿ ಪ್ರಕಟಿಸಿದ್ದು, ಅದರ ಬಿಡುಗಡೆ ನಡೆಯಲಿದೆ.
ಕವಿಗೋಷ್ಠಿ ಸಮಿತಿ ಅಧ್ಯಕ್ಷ ಕೋಳೆರ ದಯ ಚಂಗಪ್ಪ ಮಾಕನಡಿ, ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಹಿರಿಯ ಪತ್ರಕರ್ತ ಜೀವನ್ ಚಿಣ್ಣಪ್ಪ ಉದ್ಘಾಟಿಸುವರು. ಸಾಹಿತಿ, ನಿವೃತ್ತ ಪ್ರಾಂಶುಪಾಲ ಡಾ.ಜೆ.ಸೋಮಣ್ಣ ಅತಿಥಿಯಾಗಿ ಪಾಲ್ಗೊಳ್ಳುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿತ್ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಮತ್ತು ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಕವಿಗೋಷ್ಠಿ ಸಮಿತಿ ಸಂಚಾಲಕಿ ಎಸ್.ಎಂ ರಜಿನಿ, ಗೌರವ ಕಾರ್ಯದರ್ಶಿ ಶೀಲಾ ಬೋಪಣ್ಣ, ಕಾವೇರಿ ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಂದಾದೇವಯ್ಯ ಉಪಸ್ಥಿತರಿರುತ್ತಾರೆ ಎಂದರು.
ಸಮತಿ ಪ್ರಧಾನ ಕಾರ್ಯದರ್ಶಿ ಶೀಲಾ ಬೋಪಣ್ಣ, ಸಹಕಾರ್ಯದರ್ಶಿ ಟಿ.ಆರ್. ವಿನೋದ್, ನಿರ್ದೇಶಕರಾದ ಚಂದನಾ ಮಂಜುನಾಥ್, ಚಂದನ್ ಕಾಮತ್, ಮಹೇಶ್, ಓಮನ,ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ಮಂಜುಳಾ ಇದ್ದರು.